Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯ ಬಹುಭಾಷ ನಟಿ ಬಿ.ಸರೋಜಾದೇವಿ ನೆನಪು ಮಾತ್ರ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ(87) ಅವರು ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ
, ಸರೋಜಾದೇವಿ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಸೋಮವಾರ ಕೊನೆಯುಸಿರೆಳೆದಿದ್ದಾರೆ.
ಸರೋಜಾ ದೇವಿ
1938ರ ಜನವರಿ 7ರಂದು ಬೆಂಗಳೂರಿನಲ್ಲಿ ಜನಿಸಿದರು.

ತಂದೆ ಬೈರಪ್ಪ ಅವರು ಪೊಲೀಸ್ ಅಧಿಕಾರಿಯಾಗಿದ್ದರು. ತಾಯಿ ರುದ್ರಮ್ಮ ಅವರು ಭೈರಪ್ಪ ಬಳಿ ಮಾತನಾಡಿ ಸರೋಜಾ ಅವರಿಗೆ ಅವರು ಡ್ಯಾನ್ಸ್ ಕಲಿಯುವಂತೆ ಪ್ರೋತ್ಸಾಹಿಸಿದರು. ಅವರು ಚಿತ್ರರಂಗಕ್ಕೆ ಬರಲು ತಂದೆಯಿಂದಲೇ ಬೆಂಬಲ ಸಿಕ್ಕಿತ್ತು.

ಕನ್ನಡ ಚಿತ್ರರಂಗದ ಖ್ಯಾತ ನಟಿ ಬಿ.ಸರೋಜಾದೇವಿ ಅವರನ್ನು ಅಭಿನಯ ಸರಸ್ವತಿ ಎಂದೇ ಕರೆಯಲಾಗುತ್ತಿತ್ತು. ಅವರು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ನಟಿಸಿ ಹೆಸರುವಾಸಿಯಾಗಿದ್ದರು. 1955 ರಿಂದ 1984 ರವರೆಗೆ ಸತತವಾಗಿ 160ಕ್ಕೂ ಹೆಚ್ಚಿನ ಚಿತ್ರಗಳಲ್ಲಿ ನಾಯಕ ನಟಿಯಾಗಿ ನಟಿಸಿ ಜನಮನದಲ್ಲಿ ಉಳಿದಿದ್ದರು.

ಕನ್ನಡ ಚಲನಚಿತ್ರರಂಗಕ್ಕೆ ಸರೋಜಾದೇವಿ ಅವರು ಅಪಾರ ಕೊಡುಗೆ ನೀಡಿದ ಮಹಾನ್ ನಟಿ. ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿರುವ ಬಿ.ಸರೋಜಾದೇವಿ ದಕ್ಷಿಣ ಭಾರತದ ಧೀಮಂತ ಅಭಿನೇತ್ರಿ. ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿರುವ ಇವರು 5 ಭಾಷೆಗಳಲ್ಲಿ ಇನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಕೀರ್ತಿ ಅವರಿಗೆ ಸಲ್ಲುತ್ತದೆ.


ತಮ್ಮ 17ನೇ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಭೀಷ್ಮ ಹೊನ್ನಪ್ಪ ಭಾಗವತರ್ ಅವರ ಮಹಾಕವಿ ಕಾಳಿದಾಸ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು.


ಸರೋಜಾದೇವಿ ಅವರು
1969ರಲ್ಲಿ ಪದ್ಮಶ್ರೀ ಪ್ರಶಸ್ತಿ ಮತ್ತು 1992ರಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಮತ್ತು ತಮಿಳುನಾಡಿನಿಂದ ಕಲೈಮಾಮಣಿ ಪ್ರಶಸ್ತಿ ಪಡೆದುಕೊಂಡಿದ್ದರು.

ಸರೋಜಾ ದೇವಿ ಅವರು 1967ರಲ್ಲಿ ಹರ್ಷ ಅವರನ್ನು ವಿವಾಹ ಆದರು. 1986ರಲ್ಲಿ ಪತಿ ನಿಧನ ಹೊಂದಿದರು. ಸರೋಜಾದೇವಿ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಸರೋಜಾ ದೇವಿ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ಅಂತಿಮ ದರ್ಶನ- ಮಂಗಳವಾರ ಬೆಳಗ್ಗೆ ವರೆಗೂ ಬೆಂಗಳೂರಿನ ಮಲ್ಲೇಶ್ವರಂ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.


ಜುಲೈ-15ರಂದು ಮಂಗಳವಾರ ಸರೋಜಾದೇವಿ ಅವರ ಹುಟ್ಟೂರು ಚನ್ನಪಟ್ಟಣ ತಾಲೂಕಿನ ದಶವಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಮತ್ತು ತಮಿಳುನಾಡಿನಿಂದ ಕಲೈಮಾಮಣಿ ಪ್ರಶಸ್ತಿ ಪಡೆದುಕೊಂಡಿದ್ದರು.


ಆರೂವರೆ ದಶಕಗಳ ಕಾಲ ಅವರು ಚಿತ್ರರಂಗದಲ್ಲಿ ಇದ್ದರು. 2019ರಲ್ಲಿ ರಿಲೀಸ್ ಆದ ಪುನೀತ್ ರಾಜ್​ಕುಮಾರ್ ನಟನೆಯ ನಟಸಾರ್ವಭೌಮಅವರು ನಟಿಸಿದ ಕೊನೆಯ ಚಿತ್ರ.


ಮೇರು ನಟರಾದ ರಾಜ್​ಕುಮಾರ್, ಕಲ್ಯಾಣ್​ ಕುಮಾರ್ ಮೊದಲಾದವರ ಜೊತೆ ಸರೋಜಾ ದೇವಿ ತೆರೆ ಹಂಚಿಕೊಂಡರು. ಅಮರ ಶಿಲ್ಪಿ ಜಕಣಾಚಾರಿ’, ‘ಮಲ್ಲಮ್ಮನ ಪವಾಡ’, ಭಾಗ್ಯವಂತರು, ‘ಬಬ್ರುವಾಹನಕಥಾಸಂಗಮ ಮುಂತಾದ ಕನ್ನಡ ಸಿನಿಮಾಗಳಲ್ಲಿ ಸರೋಜಾ ದೇವಿ ನಟಿಸಿದ್ದರು. ತಮಿಳಿನಲ್ಲಿ ಪಾಟ್ಟಾಲಿ ಮುತ್ತು’, ‘ಪಡಿಕಥ ಮೇಥೈ’, ‘ಕಲ್ಯಾಣ ಪರಿಸು’, ತೆಲುಗಿನಲ್ಲಿ ಪಂಡರಿ ಭಕ್ತಲು’, ‘ದಕ್ಷಯಜ್ಞಂ’, ಹಿಂದಿಯಲ್ಲಿ ಆಶಾ’, ‘ಮೆಹಂದಿ ಲಗಾ ಕೆ ರಖನಾಮೊದಲಾದ ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ