Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೇವೆಯೇ ನಿಜವಾದ ಶಿವನ ಪೂಜೆ:ಮಾತಾಜೀ ತ್ಯಾಗಮಯೀ 

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಸ್ವಾಮಿ ವಿವೇಕಾನಂದರು ತಿಳಿಸಿದಂತೆ ಜೀವ ಶಿವ ಸೇವೆಯೇ ನಿಜವಾದ ಶಿವನ ಪೂಜೆ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷೆ ಮಾತಾಜೀ ತ್ಯಾಗಮಯೀ ಅಭಿಪ್ರಾಯಪಟ್ಟರು.


ನಗರದ ಹೊರವಲಯದ ಬನಶ್ರೀ ವೃದ್ಧಾಶ್ರಮದಲ್ಲಿ "ಸ್ವಾಮಿ ವಿವೇಕಾನಂದರ 164ನೇ ಜಯಂತ್ಯುತ್ಸವ"ದ ಪ್ರಯುಕ್ತ ಶಿವನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದಿಂದ ಆಯೋಜಿಸಿದ್ದ ವಿಶೇಷ ಸತ್ಸಂಗ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.


ಮನುಷ್ಯನ ಹಣ ದಾನ ಮಾಡುವುದರಿಂದ ಪವಿತ್ರವಾಗುತ್ತದೆ. ವ್ಯಾಸ ಮಹರ್ಷಿಗಳು ಮತ್ತು ಸ್ವಾಮಿ ವಿವೇಕಾನಂದರು ತಿಳಿಸಿದಂತೆ ಕಲಿಯುಗಕ್ಕೆ ಅತ್ಯಂತ ಶ್ರೇಷ್ಠವಾದ ಮಾರ್ಗವೆಂದರೆ ದಾನ ಮಾಡುವುದು,ಇದರ ನಾಲ್ಕು ಪ್ರಕಾರಗಳಾದ ಅನ್ನದಾನ, ಪ್ರಾಣ ದಾನ,ವಿದ್ಯಾದಾನ, ಆಧ್ಯಾತ್ಮ ವಿದ್ಯಾದಾನಗಳ ಬಗ್ಗೆ ತಿಳಿಸುತ್ತಾ ಸ್ವಾಮಿ ವಿವೇಕಾನಂದರ ದಾನ ಗುಣಕ್ಕೆ ಸಂಬಂಧಿಸಿದ ಘಟನೆಗಳನ್ನು ಹಂಚಿಕೊಂಡು ಮಂಜುಳಮ್ಮನವರ ಸೇವಾ ಕಾರ್ಯವನ್ನು ಪ್ರಶಂಸಿ ಎಲ್ಲಾ ಸದ್ಭಕ್ತರೂ ಅವರಿಗೆ ಅಗತ್ಯ ನೆರವು ನೀಡುವಂತೆ ವಿನಂತಿಸಿದರು.


ಬನಶ್ರೀ ವೃದ್ಧಾಶ್ರಮದ ಮುಖ್ಯಸ್ಥೆ ಮಂಜುಳಮ್ಮ ಮಾತನಾಡಿ ಸ್ವಾಮಿ ವಿವೇಕಾನಂದರಂತಹ ವೀರ ಸಂನ್ಯಾಸಿಯನ್ನು ಪಡೆದ ಭಾರತ ಭೂಮಿ ಅತ್ಯಂತ ಪವಿತ್ರವಾದದ್ದು ಇಂತಹ ಸ್ವಾಮಿ ವಿವೇಕಾನಂದರ ಜಯಂತ್ಯುತ್ಸವ ಕಾರ್ಯಕ್ರಮವನ್ನು ನಮ್ಮ ವೃದ್ಧಾಶ್ರಮದಲ್ಲಿ ಆಯೋಜಿಸಿ ವೃದ್ಧರಿಗೆ ಅಗತ್ಯ ವಸ್ತುಗಳನ್ನು ವಿತರಿಸಿ ಅನ್ನಪ್ರಸಾದವನ್ನು ಏರ್ಪಡಿಸಿರುವುದು ಅತ್ಯಂತ ಶ್ಲಾಘನೀಯ ಸೇವೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.


ಸತ್ಸಂಗದ ಆರಂಭದಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಸಾಮೂಹಿಕ ಸ್ವಾಮಿ ವಿವೇಕಾನಂದರ ಭಜನಾ ಕಾರ್ಯಕ್ರಮ ನಡೆದರೆ ಭಜನೆಗೆ ಗೋವಿಂದರಾಜು ತಬಲಾ ಸಾಥ್ ನೀಡಿದರು.


ಕಾರ್ಯಕ್ರಮದ ಕೊನೆಯಲ್ಲಿ ಮಾತಾಜೀ ತ್ಯಾಗಮಯೀ ಅವರು ವೃದ್ಧಾಶ್ರಮದ ನಿವಾಸಿಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸಿದರೆ ಎಲ್ಲರಿಗೂ ವಿಶೇಷ ಅನ್ನಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.


ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥೆ ಜಿ ಯಶೋಧಾ ಪ್ರಕಾಶ್, ಎಚ್ ಲಕ್ಷ್ಮೀದೇವಮ್ಮ, ಶಾಂತಮ್ಮ, ಜಿ.ವಿ.ಎಸ್. ಪ್ರಕಾಶ್, ಎಂ ಗೀತಾ ನಾಗರಾಜ್, ವಿಜಯಲಕ್ಷ್ಮೀ, ನಾಗರತ್ನಮ್ಮ , ಶಾರದಾಮ್ಮ , ವೀರಮ್ಮ , ಸರಸ್ವತಿ, ಸರ್ವಮಂಗಳಾ ಶಿವಣ್ಣ , ಸುವರ್ಣಮ್ಮ, ಪ್ರಿಯಾಂಕ, ಶಾರದಾಮ್ಮ,ಕವಿತಾ ಗುರುಮೂರ್ತಿ, ಅನಿತಾ,ಶಿಲ್ಪಾ, ಕೃಷ್ಣವೇಣಿ, ಕಮಲಮ್ಮ, ಗಂಗಮ್ಮ, ರಶ್ಮಿ ವಸಂತ, ಸರಸ್ವತಿ ರಾಜು, ಸೌಮ್ಯ,ಸುಧಾಮಣಿ,ಪಿ.ಎಸ್.ಮಾಣಿಕ್ಯ ಸತ್ಯನಾರಾಯಣ ಸೇರಿದಂತೆ ವೃದ್ಧಾಶ್ರಮದ ನಿವಾಸಿಗಳು ಮತ್ತು ಸದ್ಭಕ್ತರು ಭಾಗವಹಿಸಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ