Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುವಕ/ಯುವತಿಯರಿಗೆ ಹೊಲಿಗೆ ಹಾಗೂ ವಿಡಿಯೋಗ್ರಫಿ ತರಬೇತಿ ಶಿಬಿರ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಯುವಕ/ ಯುವತಿಯರಿಗೆ ಸ್ವಯಂ ಉದ್ಯೋಗ ಒದಗಿಸಿಕೊಡುವ ನಿಟ್ಟಿನಲ್ಲಿ ಹೊಲಿಗೆ ಹಾಗೂ ವಿಡಿಯೋಗ್ರಫಿ ತರಬೇತಿ ಶಿಬಿರವನ್ನು ಬೆಂಗಳೂರಿನ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಹೊಲಿಗೆ ತರಬೇತಿ ಶಿಬಿರ 20 ದಿನಗಳಾಗಿದ್ದು, ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಫೇಲ್ ಅಥವಾ ಪಾಸ್ ಆಗಿರಬೇಕು. ನವೆಂಬರ್ 7 ರಿಂದ 26 ರವರೆಗೆ ತರಬೇತಿ ನೀಡಲಾಗುವುದು. ವಿಡಿಯೋಗ್ರಫಿ ತರಬೇತಿ ಶಿಬಿರ 12 ದಿನಗಳಾಗಿದ್ದು, ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಫೇಲ್ ಅಥವಾ ಪಾಸ್ ಆಗಿರಬೇಕು.

ತರಬೇತಿಯು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ನಡೆಯುತ್ತದೆ. ತರಬೇತಿ ಶಿಬಿರದಲ್ಲಿ ಭಾಗವಹಿಸುವ ಯುವಕ/ಯುವತಿಯರಿಗೆ ಲಘು ಉಪಹಾರ ಒದಗಿಸಲಾಗುವುದು. ಶಿಬಿರಾರ್ಥಿಗಳಿಗೆ ಪ್ರಯಾಣ ಭತ್ಯೆ ನೀಡಲಾಗುವುದು. ಅಭ್ಯರ್ಥಿಗಳ ವಯೋಮಾನ 18 ರಿಂದ 40 ವರ್ಷದೊಳಗಿನ ಯುವಕ/ಯುವತಿಯರು ಮಾತ್ರ ಭಾಗವಹಿಸಲು ಅರ್ಹರು. ಹೊರ ಜಿಲ್ಲೆಗಳಿಂದ ಆಗಮಿಸುವ ಶಿಬಿರಾರ್ಥಿಗಳಿಗೆ ಸಾಮಾನ್ಯ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು.

ಆಸಕ್ತ ಯುವಕ/ ಯುವತಿಯರು ತಮ್ಮ ಜನ್ಮ ದಿನಾಂಕದ ದಾಖಲೆಯೊಂದಿಗೆ (ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಪ್ರತಿ) ಕಚೇರಿಯ ವಿಳಾಸದಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ವಿವರಗಳಿಗಾಗಿ ಸಹಾಯವಾಣಿ ಸಂಖ್ಯೆ : 155265 ಹಾಗೂ ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಯುವ ಕೇಂದ್ರ, ನೃಪತುಂಗ ರಸ್ತೆ, ಬೆಂಗಳೂರು-01, ಮೊಬೈಲ್ ಸಂಖ್ಯೆ: 9731251411 ಕಚೇರಿ ವೇಳೆಯಲ್ಲಿ ಸಂಪರ್ಕಿಸುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 



Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ