Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಲೈಂಗಿಕ ಅಶ್ಲೀಲ ವಿಡಿಯೋ: ಮಾಲೀಕನ ಪತ್ನಿ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ!

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಖಾಸಗಿ ಸಂಸ್ಥೆಯ ಮಾಲೀಕನೊಬ್ಬ ತನ್ನ ಬಳಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಎಸಗಿದ್ದ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೋಗಳನ್ನು ಸಂತ್ರಸ್ತೆಯ ಕುಟುಂಬದವರಿಗೆ ರವಾನಿಸಿದ ಆರೋಪ ಎದುರಿಸುತ್ತಿರುವ ಮಹಿಳೆ (ಮಾಲೀಕನ ಪತ್ನಿ) ವಿರುದ್ಧದ ಎಫ್‌ಐಆರ್ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್ ಆಫ್‌ಲೈನ್ ನಿರಾಕರಿಸಿದೆ. ಯಲಹಂಕದ ಜಯಂತಿ ಜಿ. ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ವಜಾಗೊಳಿಸಿದೆ.

ಐಟಿ ಕಾಯ್ದೆಯಡಿ ವಿಚಾರಣೆ ಅನಿವಾರ್ಯ:
"
ಅಶ್ಲೀಲ ದೃಶ್ಯಗಳನ್ನು ಇತರರಿಗೆ ರವಾನಿಸುವ ಅಥವಾ ಪ್ರಸಾರ ಮಾಡುವ ಕೃತ್ಯವು ಮಾಹಿತಿ ತಂತ್ರಜ್ಞಾನ (ಐಟಿ) ಕಾಯಿದೆಯ ಸೆಕ್ಷನ್ 67ಎ ಅಡಿಯಲ್ಲಿ ಗಂಭೀರ ಅಪರಾಧವಾಗುತ್ತದೆ" ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ. ಮೊದಲ ಆರೋಪಿಯಾಗಿರುವ ಪತಿಯಿಂದ ಶೋಷಣೆಗೆ ಒಳಗಾಗಿದ್ದ ಸಂತ್ರಸ್ತೆಯ ವಿಡಿಯೋವನ್ನು ಹಂಚಿಕೊಂಡಿರುವ ಕಾರಣ, ಎರಡನೇ ಆರೋಪಿಯಾಗಿರುವ ಜಯಂತಿ ಅವರು ಐಟಿ ಕಾಯಿದೆಯಡಿ ವಿಚಾರಣೆಯನ್ನು ಎದುರಿಸಲೇಬೇಕು ಎಂದು ಕೋರ್ಟ್ ಆದೇಶಿಸಿದೆ.

Advertisement

ಮಹಿಳೆಯರು ಅಥವಾ ಯಾವುದೇ ವ್ಯಕ್ತಿಯ ಎಲೆಕ್ಟ್ರಾನಿಕ್ ಶೋಷಣೆಯನ್ನು ತಡೆಯುವುದೇ ಈ ಕಾಯ್ದೆಯ ಆಶಯ ಎಂದು ಹೈಕೋರ್ಟ್ ವಿವರಿಸಿದೆ.

'ಮಿನಿ ಟ್ರಯಲ್' ನಡೆಸಲು ಸಾಧ್ಯವಿಲ್ಲ: ಹೈಕೋರ್ಟ್ ತಪರಾಕಿ:
ಅರ್ಜಿದಾರರ ಮೊಬೈಲ್‌ನ ಎಫ್‌ಎಸ್‌ಎಲ್ ವರದಿಯಲ್ಲಿ ವಿಡಿಯೋ ಕಳುಹಿಸಿದ ಪುರಾವೆ ಸಿಕ್ಕಿಲ್ಲ ಎಂದು ಅವರ ಪರ ವಕೀಲರು ವಾದಿಸಿದ್ದರು. ಆದರೆ, ಈ ವಾದವನ್ನು ತಿರಸ್ಕರಿಸಿದ ಪೀಠವು, "ಆರೋಪಗಳ ಸತ್ಯಾಸತ್ಯತೆಯನ್ನು ಪೂರ್ಣ ಪ್ರಮಾಣದ ನ್ಯಾಯಾಂಗ ವಿಚಾರಣೆಯ ಮೂಲಕವೇ ನಿರ್ಧರಿಸಬೇಕಾಗುತ್ತದೆ. ಸಿಆರ್‌ಪಿಸಿ ಸೆಕ್ಷನ್ 482ರ ಅಡಿಯಲ್ಲಿ ಹೈಕೋರ್ಟ್ 'ಮಿನಿ ಟ್ರಯಲ್' (ಕಿರು ವಿಚಾರಣೆ) ನಡೆಸಲು ಸಾಧ್ಯವಿಲ್ಲ" ಎಂದು ಸ್ಪಷ್ಟಪಡಿಸಿದೆ.

ಮೇಲ್ನೋಟಕ್ಕೆ ಸಂತ್ರಸ್ತೆಯನ್ನು ಲೈಂಗಿಕ ಶೋಷಣೆ, ಬೆದರಿಕೆ ಹಾಗೂ ಬ್ಲ್ಯಾಕ್‌ ಮೇಲ್‌ಗೆ ಒಳಪಡಿಸಿರುವುದರಲ್ಲಿ ಅರ್ಜಿದಾರರ ಸಕ್ರಿಯ ಪಾತ್ರವಿರುವುದು ಕಂಡುಬರುತ್ತದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಏನಿದು ಭೀಕರ ಪ್ರಕರಣ?:
ದೂರುದಾರ ಮಹಿಳೆ ಕೆಲಸ ಮಾಡುತ್ತಿದ್ದ ಕಂಪನಿಯ ಮಾಲೀಕ ಮಲ್ಲಿಕಾರ್ಜುನ್ ಎಂ. ಎಂಬಾತ ಆಕೆಯ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿ, ಆ ದೃಶ್ಯಗಳನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಡುವುದಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಾ ಮತ್ತೆ ಮತ್ತೆ ದೈಹಿಕ ಸಂಪರ್ಕಕ್ಕೆ ಒತ್ತಾಯಿಸುತ್ತಿದ್ದ. ಕಿರುಕುಳ ತಾಳಲಾರದೆ ಸಂತ್ರಸ್ತೆ ಕೆಲಸಕ್ಕೆ ರಾಜೀನಾಮೆ ನೀಡಿದ್ದರು.

ಇದರಿಂದ ಆಕ್ರೋಶಗೊಂಡ ಮಾಲೀಕ ಮಲ್ಲಿಕಾರ್ಜುನ್ ಹಾಗೂ ಆತನ ಪತ್ನಿ ಜಯಂತಿ, ಆ ಅಶ್ಲೀಲ ವಿಡಿಯೋಗಳನ್ನು ಸಂತ್ರಸ್ತೆಯ ಪತಿ ಹಾಗೂ ಸಂಬಂಧಿಕರಿಗೆ ರವಾನಿಸಿದ್ದರು. ಈ ಸಂಬಂಧ ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ (ಬಿಎನ್ಎಸ್ ಸೆಕ್ಷನ್ 64(1)), ಕ್ರಿಮಿನಲ್ ಬೆದರಿಕೆ ಹಾಗೂ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ