Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಎಸ್.ಹೆಚ್. ಕಾಂತರಾಜ್ ಹುಲಿ ಅವರಿಗೆ ಪ್ರತಿಷ್ಠಿತ 'ಛಾಯಾ ಸೇವಾ ಪುರಸ್ಕಾರ' ಪ್ರಶಸ್ತಿ ಪ್ರದಾನ!

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಚಿತ್ರದುರ್ಗ ಜಿಲ್ಲಾ ಛಾಯಾಗ್ರಾಹಕರ ಸಂಘದ ಉಪಾಧ್ಯಕ್ಷ ಹಾಗೂ ತಾಲೂಕಿನ ಖ್ಯಾತ ಸಂಘಟಕರಾದ ಎಸ್.ಹೆಚ್. ಕಾಂತರಾಜ್ ಹುಲಿ ಅವರಿಗೆ ಮಧ್ಯ ಕರ್ನಾಟಕದ ಅತಿ ದೊಡ್ಡ ಛಾಯಾಮೇಳದಲ್ಲಿ ಪ್ರತಿಷ್ಠಿತ 'ಛಾಯಾ ಸೇವಾ ಪುರಸ್ಕಾರ' ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದಾವಣಗೆರೆಯ ಶ್ರೀಮದ್ ಅಭಿನವ ರೇಣುಕಾ ಮಂದಿರದಲ್ಲಿ ದಾವಣಗೆರೆ ಜಿಲ್ಲಾ ಫೋಟೋಗ್ರಾಫರ್ಸ್ ಮತ್ತು ವೀಡಿಯೋಗ್ರಾಫರ್ಸ್ ಸಂಘ ಹಾಗೂ ಫೋಟೋಗ್ರಾಫರ್ಸ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಜಂಟಿಯಾಗಿ ಆಯೋಜಿಸಲಾಗಿದ್ದ 'ದೇವನಗರಿ ಪ್ರೊ ಇಮೇಜ್' ಕಾರ್ಯಕ್ರಮದಲ್ಲಿ ಈ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು. ಛಾಯಾಗ್ರಹಣ ರಂಗಕ್ಕೆ ಹಾಗೂ ಸಂಘಟನೆಗೆ ಕಾಂತರಾಜ್ ಹುಲಿ ಅವರು ನೀಡಿದ ಗಣನೀಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

Advertisement

ಗಣ್ಯರ ಉಪಸ್ಥಿತಿ: ಅತ್ಯಂತ ವಿಜೃಂಭಣೆಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಕೊಟ್ಟೂರು ಹಿರೇಮಠ ಕ್ಷೇತ್ರದ ಪರಮಪೂಜ್ಯ ಶ್ರೀ ಶಿವಪ್ರಕಾಶ್ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವರಾದ ಕೆ. ಬಸವಂತಪ್ಪ, ದಾವಣಗೆರೆ ಜಿಲ್ಲಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ವಿಜಯಕುಮಾರ್ ಜಾದವ್, ಚಿತ್ರದುರ್ಗ ಜಿಲ್ಲಾಧ್ಯಕ್ಷರಾದ ಸೈಯದ್ ರಹಮತುಲ್ಲಾ (ಮುನ್ನಾ), ಜಿಲ್ಲಾ ಕಾರ್ಯದರ್ಶಿ ನಾಗಣ್ಣ, ಹಿರಿಯೂರು ತಾಲೂಕು ಛಾಯಾಗ್ರಾಹಕರ ಸಂಘದ ಅಧ್ಯಕ್ಷರಾದ ಎ. ರಾಮಕೃಷ್ಣಪ್ಪ, ಉಪಾಧ್ಯಕ್ಷರಾದ ಗೋವಿಂದರಾಜು ಸೇರಿದಂತೆ ಹಲವು ಮುಖಂಡರು ಹಾಗೂ ಛಾಯಾಗ್ರಾಹಕರು ಉಪಸ್ಥಿತರಿದ್ದರು.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು