Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ: ಸಿದ್ದರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ
ಎಂದು ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಕ್ವಿನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ  ಮಾಜಿ ಪ್ರಧಾನಿ ದಿವಂಗತ ಶ್ರೀಮತಿ ಇಂದಿರಾಗಾಂಧಿರವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ  ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು.

    ವಕ್ಫ್ ಆಸ್ತಿ ನೋಟೀಸುಗಳಿಗೆ ಸಂಬಂಧಿಸಿದಂತೆ ನವೆಂಬರ್ 4ರಂದು ಬಿಜೆಪಿ ಪ್ರತಿಭಟನೆ ಮಾಡುವುದರ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸುಮಾರು 200ಕ್ಕೂ ಹೆಚ್ಚು ನೋಟಿಸ್ ಗಳನ್ನು ನೀಡಿದ್ದಾರೆ.

ಅವರದು ಇಬ್ಬದಿ ರಾಜಕೀಯ ನಡೆ. ಯಾವ ರೈತರನ್ನೂ ಒಕ್ಕಲೆಬ್ಬಿಸಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದೇವೆ. ಕೊಟ್ಟಿರುವ ನೋಟೀಸ್ ಗಳನ್ನು  ಹಿಂಪಡೆಯಲು ಈಗಾಗಲೇ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

     ನವೆಂಬರ್ 4ರ ಅವರ ಪ್ರತಿಭಟನೆ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತವಾದದ್ದು, ಸಮಸ್ಯೆಗಳು ಇರದೆಡೆ ‌ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ. ಈಗ ಮುಡಾ ಪ್ರಕರಣದಲ್ಲಿ  ಮಾಡಿಲ್ಲವೇ? ಎಂದು ಪ್ರಶ್ನಿಸಿದರು.

ಶಿಗ್ಗಾಂವಿಯಲ್ಲಿ ಅಜ್ಜಂಪೀರ್ ಖಾದ್ರಿ ಅವರು ನಾಮಪತ್ರ ವಾಪಸ್ ಪಡೆದಿದ್ದು, ಉಪಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸುತ್ತಾರೆ.

ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಮೂರೂ ಕ್ಷೇತ್ರಗಳಲ್ಲಿಯೂ ಗೆಲುವು ನಮ್ಮದೇ ಎಂದು ಹೇಳಿದರು.  ಇದೇ ಸಂದರ್ಭದಲ್ಲಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀಪಾವಳಿ ಶುಭಾಶಯಗಳನ್ನು  ತಿಳಿಸಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ