Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಶಂಕರಾಚಾರ್ಯರು ಸನಾತನ ಧರ್ಮ ಸಂಸ್ಕೃತಿಯ ಪ್ರಚಾರ ಏಳಿಗೆಗೆ ಕಾರಣೀಕೃತರು-ಜಗದೀಪ್ ಧನಕರ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸನಾತನ ಧರ್ಮ ಸಂಸ್ಕೃತಿಯ ಪ್ರಚಾರ ಏಳಿಗೆಗೆ ಕಾರಣೀಕೃತರಾದವರು-ಜಗದ್ಗುರು ಶಂಕರಾಚಾರ್ಯರು. ದೇಶದುದ್ದಗಲಕ್ಕೂ ಇವರು ಸಂಚರಿಸಿ  ಶೃಂಗೇರಿ ಪೀಠವನ್ನು ಸ್ಥಾಪಿಸಿದರು ಎಂದು ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಿಳಿಸಿದರು.

ಸುವರ್ಣ ಭಾರತೀ ಶೃಂಗೇರಿ, ವೇದಾಂತಭಾರತೀ ಹಾಗೂ ಮಿಥಿಕ್ ಸೊಸೈಟಿ ವತಿಯಿಂದ ದಕ್ಷಿಣಾಮ್ನಾಯ ಶ್ರೀ ಶೃಂಗೇರಿ ಶಾರದಾಪೀಠಾಧೀಶ್ವರರಾದ ಜಗದ್ಗುರು ಶಂಕರಾಚಾರ್ಯ ಪರಮಪೂಜ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರ ಸಂನ್ಯಾಸ ಸ್ವೀಕಾರದ ಸುವರ್ಣ ಮಹೋತ್ಸವ ನಿಮಿತ್ತ ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ಹಮ್ಮಿಕೊಳ್ಳಲಾದ  ಸುವರ್ಣ ಭಾರತೀ ನಮ: ಶಿವಾಯ ಸ್ತೋತ್ರಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಮ: ಶಿವಾಯ ಸ್ತೋತ್ರಮಹಾಸಮರ್ಪಣೆ ಕಾರ್ಯಕ್ರಮಕ್ಕೆ ಸಹಸ್ರಾರು ಮಂದಿ ಆಗಮಿಸಿ ಸ್ತೋತ್ರ ಪಾರಾಯಣ ಮಾಡಿದ್ದಾರೆ. ನಾನು ವೈಯಕ್ತಿಕವಾಗಿ ಮಂತ್ರ ಪಾರಾಯಣ ಕೇಳಿ  ಮಂತ್ರಮುಗ್ಧನಾಗಿರುತ್ತೇನೆ.

ಮಂತ್ರಪಾರಾಯಣದ ಲಯ, ಸಂಯೋಜನೆ, ಆಲಿಸಿದ ನನ್ನ ಮನಸ್ಸು ಸಂತೃಷ್ಟಗೊಂಡಿತು. ಇದು  ನಮ್ಮ  ಭಾರತೀಯ ಸಂಸ್ಕೃತಿಯ ಕೊಂಡಿಯನ್ನು ಬಲಪಡಿಸುವ ಕೆಲಸವಾಗಿದೆ. ಸನಾತ ಧರ್ಮವು  ತಾಳ್ಮೆ, ಅನುಕಂಪ, ಇತರರ ಕಲ್ಯಾಣಕ್ಕೆ  ಹೆಸರಾಗಿದೆ.  ನಾವು ನಮ್ಮ ಬಗ್ಗೆ ಅಲ್ಲದೇ ಇತರರ ಒಳಿತಿನ ಬಗ್ಗೆ ಚಿಂತಿಸಬೇಕಾಗಿದೆ ಎಂದರು.

ಶೃಂಗೇರಿ ಶಾರದ ಪೀಠಾಧೀಶ್ವರರಾದ ಪರಮಪೂಜ್ಯ ಭಾರತಿ ತೀರ್ಥ ಸ್ವಾಮಿಗಳು ಕಳೆದ ಐದು ದಶಕಗಳಿಂದ ಜನಕಲ್ಯಾಣಕ್ಕಾಗಿ ಅದ್ಭುತ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಮಾರ್ಗದರ್ಶನದಿಂದ ನಾವು ಮುನ್ನೆಡೆಯುತ್ತಿರುವುದು ಅದೃಷ್ಟವೇ ಸರಿ. ಇವರ ಆಧ್ಯಾತ್ಮಿಕ ಚಿಂತನೆಗಳು ನಮ್ಮ ಮನಸ್ಸಿಗೆ ಹಾಗೂ ವಾತಾವರಣಕ್ಕೆ  ಆಹ್ಲಾದಕರ ಭಾವನೆಯನ್ನು ಉಂಟುಮಾಡುತ್ತದೆ ಎಂದರು.

ಉಪ ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ಮಾತನಾಡಿ, ಭಾರತೀ ತೀರ್ಥರು ಧರ್ಮ ಉಳಿಸುವ ಕೆಲಸ ಮಾಡಿದ್ದಾರೆ. ನಾವೆಲ್ಲರೂ ಭಕ್ತಿ ಸಾಗರದಲ್ಲಿ ಭಾಗಿಯಾಗಿದ್ದೇವೆ. ನಮ್ಮ ಪ್ರಯತ್ನ ವಿಫಲವಾಗಬಹುದು. ಪ್ರಾರ್ಥನೆ ವಿಫಲವಾಗುವುದಿಲ್ಲ. ಶೃಂಗೇರಿ ಮಠ ಧರ್ಮ ಉಳಿಸುವ ಕೆಲಸ ಮಾಡುತ್ತಿದೆ. ಇಡೀ ಸರ್ಕಾರ ಮಠದ ಜೊತೆಗೆ  ಇದೆ. ನನಗೂ ಮಠಕ್ಕೂ ಗುರುಭಕ್ತನ ಸಂಬಂಧ ಎಂದರು.

ಇದೇ ಸಂದರ್ಭದಲ್ಲಿ ಸಹಸ್ರಾರು  ಜನರು ಶಿವ ಪಂಚಾಕ್ಷರ  ನಕ್ಷತ್ರ ಮಾಲಾ ಸ್ತೋತ್ರವನ್ನು ಸಾಮೂಹಿಕವಾಗಿ ಪಠಿಸಿದರು.

ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ವಿ.ಸೋಮಣ್ಣ, ಸದ್ಗುರು ಶಂಕರಾಚಾರ್ಯ ಪರಮಪೂಜ್ಯ ಶ್ರೀಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರು, ಪೀಠಾಧೀಶರು, ದಕ್ಷಿಣಾಮ್ನಾಯ ಶ್ರೀ ಶಾರದಾಪೀಠ, ಕೃಷ್ಣರಾಜನಗರ ಯಡತೊರೆ ಶ್ರೀ ಯೋಗಾನಂದೇಶ್ವರ ಸರಸ್ವತೀ ಮಠಾಧೀಶರಾದ ಪರಮಪೂಜ್ಯ ಶ್ರೀಶ್ರೀ ಶಂಕರಭಾರತೀ ಮಹಾಸ್ವಾಮಿಗಳು, ತತ್ಕರಕಮಲಸಂಜಾತರಾದ ಶ್ರೀ ಬ್ರಹ್ಮಾನಂದಭಾರತೀ ಸ್ವಾಮಿಗಳು, ಎಂ.ಎಸ್. ರಾಮಯ್ಯ ವಿಶ್ವವಿದ್ಯಾಲಯ ಕುಲಪತಿ ಡಾ. ಎಂ.ಆರ್. ಜಯರಾಮ್, ಬಿ.ಸಿ. ಹಿರಿಯ ನ್ಯಾಯವಾದಿ ಪ್ರಭಾಕರ್ ಹಾಗೂ ವೇದಾಂತ ಭಾರತಿಯ ಟ್ರಸ್ಟಿಗಳು ಮತ್ತು ಸಂಚಾಲನ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

 




Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ