Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಂಕರಾಚಾರ್ಯರು ಮಹಾನ್ ದಾರ್ಶನಿಕ ಹಾಗೂ ತತ್ವ ಜ್ಞಾನಿ

Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ  ಜಗದ್ಗುರು ಶ್ರೀ ಶಂಕರಾಚಾರ್ಯ ಜಯಂತಿಯನ್ನು ತಾಲೂಕು ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು.

ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ತಹಸೀಲ್ದಾರ್‌ ಮಲ್ಲಪ್ಪ.ಕೆ.ಯರಗೋಳ ಮಾತನಾಡಿ,  ವಿಶಿಷ್ಟಾದ್ವೈತ ಸಿದ್ದಾಂತವನ್ನು ಪ್ರತಿಪಾದಿಸಿದ  ಆದಿಶಂಕರರು ಭಗವದ್ಗೀತೆ, ಉಪನಿಷತ್ ಹಾಗು ಬ್ರಹ್ಮ ಸೂತ್ರಗಳಿಗೆ ಭಾಷ್ಯ ಬರೆದ ಮೊದಲ ಆಚಾರ್ಯರಾಗಿದ್ದಾರೆ.  

ಧಾರ್ಮಿಕ ನೆಲೆಗಟ್ಟಿನಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎನ್ನುವುದನ್ನು ಶಂಕರಾಚಾರ್ಯರು ಪ್ರತಿಪಾದಿಸಿದ್ದಾರೆ.   ತಮ್ಮಜೀವಿತದ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ ಅದ್ವೈತ ತತ್ವವನ್ನು ಪ್ರತಿಪಾದಿಸಿದರು.

ಆತ್ಮ ಮತ್ತು ಪರಮಾತ್ಮ ಎಂಬುದು ಎರಡು ಬೇರೆ ಬೇರೆ ಅಂಶಗಳಲ್ಲ. ಇರುವುದು ಒಂದೇ. ಆತ್ಮನೇ ಪರಮಾತ್ಮನು . ಪರಮಾತ್ಮನೇ ಆತ್ಮನು ಎಂದು ಅದ್ವೈತ ಸಿಧ್ಧಾಂತದ ಮೂಲ ಸಾರವನ್ನು ಸಾರಿದರು. ಅವರೊಬ್ಬ ಮಹಾನ್ ದಾರ್ಶನಿಕ ಹಾಗೂ ತತ್ವಜ್ಞಾನಿಯಾಗಿದ್ದು, ಅವರ ಬೋಧನೆ ಹಾಗೂ ಚಿಂತನೆಗಳನ್ನು ಇಂದಿನ ಪೀಳಿಗೆ ಅರಿಯಬೇಕಿದೆ ಎಂದರು.

ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಅಶ್ವತ್ಥನಾರಾಯಣ ಕುಮಾರ್  ಮಾತನಾಡಿ,  ಆದಿ ಶಂಕರರು ಎಂದು ಕರೆಯುವ ಆದಿ ಶಂಕರಾಚಾರ್ಯಾರು ಹಲವಾರು ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು. ಕೇವಲ 32 ವರ್ಷಗಳ ಕಾಲ ಜೀವಿಸಿದ್ದ ಶಂಕರಾಚಾರ್ಯರು, ಆದಿ ಶಂಕರಾಚಾರ್ಯರೆನಿಸಿಕೊಂಡು ಹಿಂದು ಧರ್ಮದ ಸತ್ವನ್ನು ಪ್ರತಿಪಾದಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಚಿಕ್ಕ ವಯಸ್ಸಿನಲ್ಲಿಯೇ ಯತಿಗಳಾಗಿದ್ದರು.

ಶಂಕರಾಚಾರ್ಯರು ದೇಶದ 4 ಮೂಲೆಗಳಲ್ಲಿ  ನಾಲ್ಕು ಪೀಠಗಳನ್ನು ಸ್ಥಾಪಿಸಿದರು. ದಕ್ಷಿಣ ಭಾರತದ ಶೃಂಗೇರಿಯಲ್ಲಿ ಶಾರದಾ ಪೀಠ ಸ್ಥಾಪನೆಯಾಗಿರುವುದು ಹೆಮ್ಮೆಯ ಸಂಗತಿ. ಕನಕದಾಸ, ಬಸವಣ್ಣ, ಶಂಕರಾಚಾರ್ಯಪ ಮೊದಲಾದ ಮಹಾಮಹಿಮರನ್ನು ಒಂದು ಜಾತಿ, ಧರ್ಮಕ್ಕೆ ಸೀಮಿತಗೊಳಿಸದೇ ಅವರ ಚಿಂತನೆಗಳನ್ನು  ಎಲ್ಲರೂ ಅಳವಡಿಸಿಕೊಳ್ಳಬೇಕಿದೆ ಎಂದರು.
ಈ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರಾದ ಡಿ.ಕೆ.ನರಸಿಂಹಮೂರ್ತಿ, ಆರ್‌.ದ್ವಾರಕಾನಾಥ್‌, ಬಿ.ಎಲ್‌.ರಾಜಮ್ಮ, ಜಿ.ಶ್ರೀನಿವಾಸ ರಾಘವನ್, ವಿ.ಕೆ.ವೇಣುಗೋಪಾಲ್‌ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯ ಟಿ.ಎನ್‌.ಪ್ರಭುದೇವ್, ಶ್ರೀ ಶಾರದಾ ಶಂಕರ ಸೇವಾ ಸಮಿತಿ ಟ್ರಸ್ಟ್ ನ ಕಾರ್ಯದರ್ಶಿ ರಾಘವೇಂದ್ರ ರಾವ್ ಸೇರಿದಂತೆ, ವಿವಿಧ ಬ್ರಾಹ್ಮಣ ಸಂಘಟನೆಗಳ ಪದಾಧಿಕಾರಿಗಳು, ಕನ್ನಡಪರ ಸಂಘಟನೆಗಳ ಹಾಗೂ ವಿಪ್ರ ಸಮುದಾಯದ ಮುಖಂಡರು ಭಾಗವಹಿಸಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಂಗಲ್ಯ, ಜನಿವಾರ ವಿವಾದ: ಕಾಂಗ್ರೆಸ್‌ಸರ್ಕಾರದ ವಿರುದ್ಧ ಅಶೋಕ್ ತೀವ್ರ ವಾಗ್ದಾಳಿಭಕ್ತಿಭಾವದ ಶ್ರೀ ರಾಮನವಮಿ ಆಚರಣೆ; ಆರ್. ಅಶೋಕ್ ಭಾಗಿದಾವಣಗೆರೆ ವಿಶ್ವವಿದ್ಯಾಲಯದ ಬಳಿ ಸುಸಜ್ಜಿತ ಬಸ್ ನಿಲ್ದಾಣ: ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ನವೋದ್ಯಮ ಮತ್ತು ಕೈಗಾರಿಕಾ ಕ್ರಾಂತಿಯ ನಾಯಕತ್ವ: ಕರ್ನಾಟಕದ ಕಹಳೆಬಂಗಾಳದಲ್ಲಿ ಚುನಾವಣಾ ಹಿಂಸಾಚಾರ: ಬಿಜೆಪಿ ಅಭ್ಯರ್ಥಿಯ ಮೇಲೆ ಹಲ್ಲೆ;- ಸಿ.ಟಿ. ರವಿ ಆಕ್ರೋಶ"ಗ್ಯಾರಂಟಿ ಬೇಡ, ಜೀವಕ್ಕೆ ಗ್ಯಾರಂಟಿ ಕೊಡಿ": ನಿಖಿಲ್ ಕುಮಾರಸ್ವಾಮಿ ಆಗ್ರಹಶರಾವತಿ ಯೋಜನೆಗೆ ಕೇಂದ್ರದ ಅಸಹಕಾರ: ಸಿದ್ದರಾಮಯ್ಯ ತೀವ್ರ ಅಸಮಾಧಾನಗ್ರಾಮ ಪಂಚಾಯತ್ ಅನುದಾನ ಬಿಡುಗಡೆಗೆ ತಾರತಮ್ಯ: ಕೇಂದ್ರದ ವಿರುದ್ಧ ಸಿಎಂ ಆಕ್ರೋಶಕೇಂದ್ರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ: "ಕರ್ನಾಟಕಕ್ಕೆ ಸಿಗದ ಮೂಲಸೌಕರ್ಯ ನ್ಯಾಯ"ಬೆಂಗಳೂರು ಕೃಷಿ ತಂತ್ರಜ್ಞಾನದ ರಾಜಧಾನಿಯಾಗಲಿ: ಸಿಎಂ ಸಿದ್ದರಾಮಯ್ಯ ಆಶಯ