Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

2028ರಲ್ಲೂ ಕಾಂಗ್ರೆಸ್ಸೇ ಅಧಿಕಾರಿಕ್ಕೆ ಬರುವುದು ಶತಸಿದ್ಧ-ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಧ್ವನಿ ಎತ್ತುವುದೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದರು.


ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬರೆದಿರುವ "ನೀರಿನ ಹೆಜ್ಜೆ: ವಿವಾದ-ಒಪ್ಪಂದ-ತೀರ್ಪು" ಕೃತಿಯನ್ನು ಮುಖ್ಯಮಂತ್ರಿ ಅವರು ಬಿಡುಗಡೆ ಮಾಡಿ, ಮಾತನಾಡಿದರು.

ಶಿವಕುಮಾರ್ ಅವರು ಜಲಸಂಪನ್ಮೂಲ ಸಚಿವರಾಗಿ ತಮ್ಮ ಅನುಭವ ಮತ್ತು ಗ್ರಹಿಕೆಯನ್ನು ಹಾಗೂ ನೀರಿನ ಮಹತ್ವವನ್ನು ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ. ನಾನು ಪುಸ್ತಕವನ್ನು ಪೂರ್ತಿ ಓದುತ್ತೇನೆ. ನದಿ ವಿವಾದಗಳ ಆಳ ಅಗಲವನ್ನು ಜನರಿಗೆ ತಿಳಿಸುವ ಕೆಲಸವನ್ನು ನೀರಿನ ಹೆಜ್ಜೆ ಪುಸ್ತಕ ಮಾಡಲಿದೆ. ರಾಜ್ಯದಲ್ಲಿ 2028 ರಲ್ಲೂ ಕಾಂಗ್ರೆಸ್ಸೇ ಅಧಿಕಾರಿಕ್ಕೆ ಬರುವುದು ಶತಸಿದ್ಧ ಎಂದು ಸಿಎಂ ತಿಳಿಸಿದರು.

ಮಹದಾಯಿ, ಕೃಷ್ಣಾ ಮತ್ತು ಕಾವೇರಿ ಸೇರಿ ಅಂತಾರಾಜ್ಯ ಜಲ ವಿವಾದಗಳು ಇನ್ನೂ ಜೀವಂತವಾಗಿದ್ದು, ರಾಜ್ಯಕ್ಕೆ ಪೂರ್ತಿ ಅನುಕೂಲಕರವಾದ ನ್ಯಾಯಬದ್ಧ ತೀರ್ಮಾನಗಳು ಇನ್ನೂ ಆಗಬೇಕಿದೆ.

ಮೇಕೆದಾಟಿನಲ್ಲಿ 67 ಟಿಎಂಸಿ ನೀರನ್ನು ಶೇಖರಣೆ ಮಾಡಲಾಗುತ್ತದೆ. ಈ ಯೋಜನೆಯಲ್ಲಿ ನಮಗಿಂತ ಹೆಚ್ಚು ತಮಿಳುನಾಡಿಗೇ ಅನುಕೂಲವಿದೆ. ಆದರೂ ಅವರು ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ತಮಿಳುನಾಡು ಸರ್ಕಾರ ಕೇವಲ ರಾಜಕೀಯ ಕಾರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಇದನ್ನು ನಾವು ವಿರೋಧಿಸಿ ಪಾದಯಾತ್ರೆ ನಡೆಸಿದೆವು. ಪಾದಯಾತ್ರೆಗೆ ಹಲವು ಟೀಕೆಗಳು ಬಂದರೂ ನಾವು ಎದೆಗುಂದದೆ ಪಾದಯಾತ್ರೆ ಯಶಸ್ವಿಗೊಳಿಸಿದೆವು ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತೊಂದು ಕಡೆ ಕೃಷ್ಣಾ ನದಿ ನೀರಿನ ವಿವಾದದಲ್ಲೂ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಮಾಡಿಲ್ಲ. ಜೆಡಿಎಸ್ ಪಕ್ಷವಾಗಲೀ, ಬಿಜೆಪಿ ಪಕ್ಷವಾಗಲೀ, ಈ ಪಕ್ಷಗಳ ಸಂಸದರಾಗಲೀ ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆಯಾಗಲೀ, ಆರ್ಥಿಕವಾಗಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಗೆಯುತ್ತಿರುವ ದ್ರೋಹದ ಬಗ್ಗೆಯೂ ಮಾತಾಡುವುದಿಲ್ಲ. ಇಷ್ಟು ಮಾತ್ರವಲ್ಲದೆ ಕಬ್ಬು ಬೆಳಗಾರರಿಗೆ ದ್ರೋಹ ಬಗೆದಿರುವುದೂ ಕೇಂದ್ರ ಸರ್ಕಾರ. ಈ ಬಗ್ಗೆಯೂ ಬಿಜೆಪಿ, ಜೆಡಿಎಸ್ ಸಂಸದರು ಬಾಯಿ ಬಿಡುತ್ತಿಲ್ಲ ಎಂದು ಸಿಎಂ ಆರೋಪಿಸಿದರು.

ಮುಧೋಳದಲ್ಲಿ ಕಬ್ಬಿನ ಟ್ರಾಕ್ಟರ್ ಗಳಿಗೆ ಬೆಂಕಿ ಹಚ್ಚಿದ್ದು ತಾವಲ್ಲ ಎಂದು ರೈತರು, ರೈತ ಮುಖಂಡರು ಹೇಳಿದ್ದಾರೆ. ಕಬ್ಬು ಬೆಳೆಗಾರರ ಹೆಸರಲ್ಲಿ ಮುಧೋಳದಲ್ಲಿ ಬೆಂಕಿ ಹಚ್ಚಿದವರು ಯಾರು ಎನ್ನುವ ಬಗ್ಗೆ ತನಿಖೆ ನಡೆಸಲು ಸೂಚಿಸಲಾಗಿದೆ. ಈ ಮೂಲಕ ಸತ್ಯಾಂಶ ಹೊರಗೆಳೆಯಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ಕೃತಿ ಲೇಖಕ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಮತ್ತಿತರ ಗಣ್ಯರು ಹಾಜರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ