Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡಿಗನ ಮೇಲೆ ಕೆನಡಾದಲ್ಲಿ ಗುಂಡಿನ ದಾಳಿ

Advertisement
ಚಂದ್ರವಳ್ಳಿ ನ್ಯೂಸ್, ನೆಲಮಂಗಲ:
ನೆಲಮಂಗಲ ಮೂಲದ ವ್ಯಕ್ತಿಯ ಕಾರಿನ ಮೇಲೆ ಕೆನಡಾದಲ್ಲಿ ಗುಂಡಿನ ದಾಳಿ ನಡೆಸಲಾಗಿದ್ದು, ಆಸ್ಪತ್ರೆಗೆ ಕರೆದೊಯ್ದ ನಂತರ ವ್ಯಕ್ತಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.


ಕರ್ನಾಟಕದಲ್ಲಿ ನೆಲೆಸಿರುವ ಆತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಏಕಾಏಕಿ ನಡೆದ ಗುಂಡಿನ ದಾಳಿಗೆ ನಿಖರವಾದ ಕಾರಣವೇನು ಎಂದು ಸದ್ಯಕ್ಕೆ ತಿಳಿದು ಬಂದಿಲ್ಲ.

ಏನಿದು ಘಟನೆ?
ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಗ್ರಾಮದ ಮೂಲದ ಮೃತ ವ್ಯಕ್ತಿ ಚಂದನ್ ಕುಮಾರ್ (
37). ಕಳೆದ ಆರು ವರ್ಷಗಳಿಂದ ಕೆನಡಾದಲ್ಲಿ ನೆಲೆಸಿದ್ದು, ಎಲ್ ಅಂಡ್ ಟಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ.


ಫೆಬ್ರವರಿ 8 ರಂದು ಚಂದನ್ ಕೆನಡಾದ ವುಡ್​ಬೈನ್ ಮಾಲ್ ಬಳಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಏಕಾಏಕಿ ದುಷ್ಕರ್ಮಿಗಳು ಗುಂಡಿನ ಸುರಿಮಳೆ ಸುರಿಸಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಸ್ಥಳೀಯರ ಅಭಿಪ್ರಾಯ?
ಶೂಟೌಟ್ ನಡೆದ ಸಂದರ್ಭದಲ್ಲಿ ಅದನ್ನು ತನ್ನ ಕಣ್ಣಾರೆ ನೋಡಿದ ಸ್ಥಳೀಯರು ಗಾಬರಿಗೊಂಡಿದ್ದು, ತಾವು ನೋಡಿದ ಭೀಕರತೆಯನ್ನು ವಿವರಿಸಿದ್ದಾರೆ. ಮಾಲ್​ ಹೊರಗೆ ತಮ್ಮ ಕಾರಿನಲ್ಲಿ ಕುಳಿತು ಮೊಬೈಲ್​ನಲ್ಲಿ ಮಾತನಾಡುತ್ತಿದ್ದ ಓರ್ವ ವ್ಯಕ್ತಿಗೆ 5-6 ಬಾರಿ ಗುಂಡು ಹಾರಿಸಿದ ಶಬ್ಧ ಕೇಳಿತ್ತಂತೆ. ಈ ವೇಳೆ ಕಾರಿನ ಕನ್ನಡಿಯ ಮೂಲಕ ನೋಡಿದಾಗ ವ್ಯಕ್ತಿಯೊಬ್ಬ ಗನ್ ಹಿಡಿದು ನಿಂತಿದ್ದೂ ಕಾಣಿಸಿತೆಂದು ಕೆನಡಾದ ಮಾಧ್ಯಮದ ಮುಂದೆ ಹೇಳಿಕೊಂಡಿದ್ದಾರೆ.

ಚಂದನ್ ಅಪ್ಪಟ ಕನ್ನಡಾಭಿಮಾನಿ:
ಚಂದನ್ ತಂದೆ ನಂದಕುಮಾರ್ ಅವರು ನಿವೃತ್ತ ಶಿಕ್ಷಕರಾಗಿದ್ದು
, ತಾಯಿ ಹಾಗೂ ಕುಟುಂಬದವರು ತ್ಯಾಮಗೊಂಡ್ಲು ಗ್ರಾಮದಲ್ಲೇ ವಾಸಿಸುತ್ತಿದ್ದಾರೆ. ಕೆನಡಾದಲ್ಲಿ ಘಟನೆ ನಡೆದ ತಕ್ಷಣ ಅಲ್ಲಿನ ಪೊಲೀಸರು ಚಂದನ್ ತಂದೆಯನ್ನು ಸಂಪರ್ಕಿಸಿದ್ದರು.


ಆದರೆ ಭಾಷೆಯ ವಿಷಯವಾಗಿ ಅಡೆತಡೆಗಳು ಬಂದಾಗ, ಭಾರತೀಯರೊಬ್ಬರ ಮೂಲಕ ಮೃತರ ತಂದೆ-ತಾಯಿಗೆ ವಿಷಯ ರವಾನಿಸಲಾಗಿತ್ತು ಎಂದು ಸಂಬಂಧಿಯೊಬ್ಬರು ತಿಳಿಸಿದ್ದಾರೆ.


ಚಂದನ್ ತನ್ನ ಕೆಲಸದ ಜೊತೆಗೆ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ವಿದೇಶದಲ್ಲಿ ಹರಡುತ್ತಿದ್ದರು ಎಂದು ತಿಳಿದು ಬಂದಿದೆ.


ಕೆಲಸವನ್ನರಸಿ ಕೆನಡಾಗೆ ಹೋದ ಭಾರತೀಯರಿಗೆ, ಅದರಲ್ಲಿಯೂ ಕನ್ನಡಿಗರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದರು. ಕನ್ನಡಿಗರಿಗಾಗಿ ಸಂಘಟನೆಗಳ ಮುಖಾಂತರ ಅಗತ್ಯ ಸೇವೆಗಳನ್ನೂ ಒದಗಿಸುತ್ತಿದ್ದರೆಂದು ಮೃತರ ಸಂಬಂಧಿಕರು ಮಾಹಿತಿ ನೀಡಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ