Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಲ್ ಚಾಲೆಂಜರ್ಸ್ ಕರ್ನಾಟಕ ಬಿಟ್ಟು ತೊಲಗಲಿ-ಕರವೇ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟ್ ಫ್ರಾಂಚೈಸಿ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿಯಲ್ಲಿ ಪುಟವನ್ನು ತೆರೆದಿದೆ. ಇದು ಯಾವ ಕಾರಣಕ್ಕೆ ಎಂದು ಅವರು ಸ್ಪಷ್ಟಪಡಿಸಬೇಕು ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಆಗ್ರಹ ಮಾಡಿದ್ದಾರೆ.

ಕನ್ನಡಿಗರ ಮೇಲೆ ಹಿಂದಿ ಗುಲಾಮಗಿರಿಯನ್ನು ಹೇರುವುದು ಅವರ ಉದ್ದೇಶವಾಗಿದ್ದರೆ ಕರ್ನಾಟಕ ಬಿಟ್ಟು ತೊಲಗಲಿ. ನಿಮ್ಮ ಅವಶ್ಯಕತೆ ನಮಗಿಲ್ಲ‌. ಆರ್ ಸಿಬಿಯನ್ನು ಕನ್ನಡಿಗರು ಮೊದಲಿನಿಂದಲೂ ಬೆಂಬಲಿಸಿಕೊಂಡು ಬಂದಿದ್ದಾರೆ. ಆರ್ ಸಿಬಿಗೆ ಇರುವಷ್ಟು ಅಭಿಮಾನಿಗಳು ಇನ್ಯಾವ ತಂಡಕ್ಕೂ ಇಲ್ಲ‌. ಹೀಗಾಗಿಯೇ ಅದರ ಆದಾಯ ವರ್ಷವರ್ಷಕ್ಕೂ ಹೆಚ್ಚುತ್ತಲೇ ಇದ್ದು, ಒಮ್ಮೆಯೂ ಕಪ್ ಗೆಲ್ಲದಿದ್ದರೂ ಮೂರನೇ ಶ್ರೀಮಂತ ತಂಡವಾಗಿದೆ. ಇದಕ್ಕೆ ಕಾರಣ ಕನ್ನಡಿಗರು ಎಂಬುದನ್ನು ಅದು ಮರೆತಿದೆ ಎಂದು ಗೌಡರು ವಾಗ್ದಾಳಿ ಮಾಡಿದ್ದಾರೆ.

ಆರ್ ಸಿಬಿ ಹಿಂದಿಯಲ್ಲಿ ಪುಟವನ್ನು ತೆರೆಯುವ ಮೂಲಕ ಕನ್ನಡಿಗರನ್ನು ಅಪಮಾನಿಸುತ್ತಿದೆ. ತಂಡದಲ್ಲಿ ಇತರ ರಾಜ್ಯಗಳ ಆಟಗಾರರಿದ್ದಾರೆ ಎಂಬ ಕಾರಣಕ್ಕೆ, ಹೊರರಾಜ್ಯಗಳಲ್ಲೂ ಅಭಿಮಾನಿಗಳಿದ್ದಾರೆ ಎಂಬ ಕಾರಣಕ್ಕೆ ಹಿಂದಿಯಲ್ಲಿ ಪುಟ ತೆರೆದಿರುವುದಾದರೆ, ದೇಶದ ಎಲ್ಲ ಭಾಷೆಗಳಲ್ಲೂ ಪುಟ ತೆರೆಯಬೇಕಿತ್ತು.

ಹಿಂದಿಯಲ್ಲಿ ಮಾತ್ರ ಯಾಕೆ ತೆರೆದರು? ಆರ್ ಸಿಬಿ ಫ್ರಾಂಚೈಸಿ ನಡೆಸುತ್ತಿರುವವರಿಗೆ ಹಿಂದಿಯೇ ಅತಿಪ್ರಿಯವಾಗಿದ್ದರೆ ಹಿಂದಿ ರಾಜ್ಯಗಳಿಗೆ ವಲಸೆ ಹೋಗಲಿ, ಬೆಂಗಳೂರು ಎಂಬ ಹೆಸರನ್ನು ಕೈಬಿಡಲಿ. ಕನ್ನಡಿಗರ ಆದರ, ಆತಿಥ್ಯ, ಅಭಿಮಾನವನ್ನು ಗಳಿಸಿ ಕನ್ನಡಿಗರ ಬೆನ್ನಿಗೆ ಚೂರಿ ಇರಿಯುವ ಕೆಲಸವನ್ನೇಕೆ ಮಾಡುತ್ತಿದ್ದಾರೆ? ಅವರು ಪ್ರಶ್ನಿಸಿದ್ದಾರೆ.

 ಈ ಬಾರಿಯ ಹರಾಜು ಪ್ರಕ್ರಿಯೆಯಲ್ಲಿ ಆರ್ ಸಿಬಿ ಐದಾರು ಕನ್ನಡಿಗರನ್ನು ಖರೀದಿಸುವ ನಿರೀಕ್ಷೆ ಅಭಿಮಾನಿಗಳಿಗಿತ್ತು. ಕನ್ನಡಿಗ ಕೆ.ಎಲ್.ರಾಹುಲ್ ಅವರನ್ನು ಖರೀದಿಸಿ ನಾಯಕನನ್ನಾಗಿಸುವ ಅವಕಾಶವೂ ಆರ್ ಸಿಬಿಗೆ ಇತ್ತು. ಆದರೆ ಹಿತ್ತಲ ಗಿಡ ಮದ್ದಲ್ಲ ಎಂಬಂತೆ ಅವಕಾಶಗಳನ್ನು ಕೈಚೆಲ್ಲಲಾಯಿತು.

ಕರ್ನಾಟಕ ಪರವಾಗಿ ಆಡುತ್ತಿರುವ ಹಲವಾರು ಪ್ರತಿಭಾವಂತ ಆಟಗಾರರನ್ನು ಆರ್ ಸಿಬಿ ಮೊದಲಿನಿಂದಲೂ ನಿರ್ಲಕ್ಷಿಸುತ್ತ ಬಂದಿದೆ. ಈ ಬಾರಿಯೂ ಅದೇ ಆಗಿದೆ. ದೇವದತ್ತ ಪಡಿಕ್ಕಲ್, ಮನೋಜ್ ಬಾಂಡಗೆ ಹೊರತುಪಡಿಸಿ ಯಾವ ಕನ್ನಡಿಗರನ್ನೂ ಖರೀದಿಸುವ ಮನಸು ಮಾಡಲಿಲ್ಲ ಎಂದು ಅವರು ಖಾರವಾಗಿ ಪ್ರಶ್ನಿಸಿದ್ದಾರೆ.

25 ಆಟಗಾರರ ಪೈಕಿ 22 ಆಟಗಾರರನ್ನು ಖರೀದಿ ಮಾಡಲಾಗಿದೆ. ಬಾಕಿ ಉಳಿದಿರುವ ಇನ್ನು ಮೂರು ಸ್ಥಾನಗಳಿಗಾದರೂ ಕನ್ನಡಿಗ ಆಟಗಾರರನ್ನೇ ಖರೀದಿಸಬೇಕು. ಸಾಮಾಜಿಕ ಜಾಲತಾಣಗಳಿಂದ ಈ ಕೂಡಲೇ ಹಿಂದಿ ಪುಟಗಳನ್ನು ಅಳಿಸಿಹಾಕಬೇಕು. ಇಲ್ಲವಾದಲ್ಲಿ ಪರಿಣಾಮ ನೆಟ್ಟಗಿರುವುದಿಲ್ಲ.

ಕನ್ನಡಿಗರ ಪ್ರೀತಿ, ಅಭಿಮಾನಗಳಿಂದ ಆರ್ ಸಿಬಿ ಬೆಳೆದಿದೆ. ಆದರೆ ಈ ವಿಶ್ವಾಸಘಾತಕತನವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಅದು ತನ್ನ ತಪ್ಪುಗಳನ್ನು ಈ ಕೂಡಲೇ ತಿದ್ದಿಕೊಳ್ಳದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ತೀವ್ರ ಸ್ವರೂಪದ ಪ್ರತಿಭಟನೆ ಎದುರಿಸಬೇಕಾಗುತ್ತದೆ. ಮುಂದಿನ ಪರಿಣಾಮಗಳಿಗೆ ನಾವು ಹೊಣೆಯಲ್ಲ ಎಂದು ನಾರಾಯಣಗೌಡರು ಎಚ್ಚರಿಸಿದ್ದಾರೆ.



Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ