LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶೀಬಾರ ಮಠದ ವನದಲ್ಲಿ ಇಂದು ಶ್ರಮದಾನ, ಶಿವಯೋಗ ಹಾಗೂ ಶ್ರದ್ಧಾಂಜಲಿ ಕಾರ್ಯಕ್ರಮ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಸಮೀಪದ ರಾಷ್ಟ್ರೀಯ ಹೆದ್ದಾರಿ-4ರಲ್ಲಿರುವ ಶೀಬಾರದ ಶ್ರೀ ಜಗದ್ಗುರು ಗುರುಪಾದ ಮುರುಘರಾಜೇಂದ್ರ ಮಹಾಸ್ವಾಮಿಗಳವರ ವನದಲ್ಲಿ ಆಗಸ್ಟ್ 02 ಭಾನುವಾರ ಬೆಳಿಗ್ಗೆ 7.00 ಗಂಟೆಗೆ ಶ್ರಮದಾನ, ಶಿವಯೋಗ ಹಾಗೂ ಇತ್ತೀಚೆಗೆ ಅಗಲಿದ ಖ್ಯಾತ ಹಿನ್ನೆಲೆ ಗಾಯಕಿ ಡಾ. ಎಸ್. ಜಾನಕಿ ಮತ್ತು ಹಿರಿಯ ಗಾಂಧಿವಾದಿ ಹೆಚ್. ಹನುಮಂತಪ್ಪನವರಿಗೆ ನುಡಿನಮನಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಈ ವಿಶೇಷ ಕಾರ್ಯಕ್ರಮವು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ. ವಿಶ್ವವಿದ್ಯಾಲಯದ ಜಂಟಿ ಆಶ್ರಯದಲ್ಲಿ ನಡೆಯಲಿದೆ.

ದಿವ್ಯ ಸಾನ್ನಿಧ್ಯ: ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ವಿದ್ಯಾಪೀಠದ ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಮಹಾಸ್ವಾಮಿಗಳು ವಹಿಸಲಿದ್ದಾರೆ.

ವಿಶೇಷ ಉಪನ್ಯಾಸ: ಹಿರಿಯ ವಕೀಲರಾದ ಡಾ. ಪಾತ್ಯರಾಜನ್ ಅವರು ಹಿರಿಯ ಗಾಂಧಿವಾದಿ ಹೆಚ್. ಹನುಮಂತಪ್ಪನವರ ಕುರಿತು ಸ್ಮರಣ ನುಡಿಗಳನ್ನು ಆಡಲಿದ್ದಾರೆ.

ಗೀತ ಗಾಯನ: ಗಾನಕೋಕಿಲೆ ಡಾ. ಎಸ್. ಜಾನಕಿಯವರು ಹಾಡಿರುವ ಜನಪ್ರಿಯ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಲಿದೆ.

ಈ ಸಮಾರಂಭದಲ್ಲಿ ಶ್ರೀ ಜಗದ್ಗುರು ಮುರುಘರಾಜೇಂದ್ರ ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ.ಬಿ. ಗುಡಸಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ. ಸಾರ್ವಜನಿಕರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಶ್ರೀಮಠದ ಪ್ರಕಟಣೆ ತಿಳಿಸಿದೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂತರು ಮಳೆಯ ನಡುವೆ ಸಂಭ್ರಮದಿಂದ ನಡೆದ ಗಾಳಿಪಟ ಹಬ್ಬಆ.10 ರಂದು ಭಾರತ ಬಿಟ್ಟು ತೊಲಗಿ ಚಳುವಳಿ ಆಯೋಜನೆಶೀಬಾರ ಮಠದ ವನದಲ್ಲಿ ಇಂದು ಶ್ರಮದಾನ, ಶಿವಯೋಗ ಹಾಗೂ ಶ್ರದ್ಧಾಂಜಲಿ ಕಾರ್ಯಕ್ರಮಜವಗೊಂಡನಹಳ್ಳಿಯಲ್ಲಿ ಕಾಮಗೇತಿ ಇಮ್ಮಡಿ ಚಿಕ್ಕಣ್ಣ ನಾಯಕರ ಆಡಳಿತಾವಧಿಯ ಲಿಪಿಗಲ್ಲು ಪತ್ತೆಪೊಲೀಸ್ ನೇಮಕಾತಿ ಪರೀಕ್ಷೆ ಕೆ.ಇ.ಎ ಮಾರ್ಗಸೂಚಿಗಳ ಪಾಲನೆ ಕಡ್ಡಾಯ-ಜಿಲ್ಲಾಧಿಕಾರಿ ಟಿ.ವೆಂಕಟೇಶ್ಅಡುಗೆ ತಯಾರಕ ಎಂ.ಮಹಮ್ಮದ್ ಚಮನ್ ಅವರಿಗೆ ಆತ್ಮೀಯ ಬಿಳ್ಕೋಡುಗೆನಿವೃತ್ತಿ, ವರ್ಗಾವಣೆ ಹೊಂದಿದ ಅಧಿಕಾರಿಗಳಿಗೆ ಬೀಳ್ಕೊಡುಗೆಬಬ್ಬೂರು ಫಾರಂನಲ್ಲಿ ರೈತರಿಗೆ ಸಮಗ್ರ ಕೃಷಿ ಪದ್ಧತಿ ಕುರಿತು ಮೂರು ದಿನಗಳ ವಸತಿಯುಕ್ತ ಉಚಿತ ತರಬೇತಿಸಂಗೀತ ಪ್ರೇಮಿಗಳ ಹೃದಯದಲ್ಲಿ ಎಸ್. ಜಾನಕಮ್ಮ ಶಾಶ್ವತ ಡಾ.ಕೆ.ಜೆ. ಕಾಂತರಾಜ್ಕ್ಷೇತ್ರ ಶಿಕ್ಷಣಾಧಿಕಾರಿ ಬೈಲಾಂಜಿನಪ್ಪ ನವರಿಗೆ ಬೀಳ್ಕೊಡುಗೆ