Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೋಳಿಗಳು ಸತ್ತರೆ ಪಶುಪಾಲನಾ ವೈದ್ಯರ ಗಮನಕ್ಕೆ ತನ್ನಿ-ಶುಭ ಕಲ್ಯಾಣ್

Advertisement
ಚಂದ್ರವಳ್ಳಿ ನ್ಯೂಸ್, ತುಮಕೂರು:
ಚಿಕ್ಕಬಳ್ಳಾಪುರ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಹಕ್ಕಿಜ್ವರ
ದೃಢಪಟ್ಟಿರುವ ಬಗ್ಗೆ ವರದಿಯಾಗಿದ್ದುಜಿಲ್ಲೆಯಲ್ಲಿ ಈವರೆಗೂ ಹಕ್ಕಿಜ್ವರದ ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

ನೆರೆಯ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಕ್ಕಿ ಜ್ವರದ ರೋಗೋದ್ರೇಕವಿರುವುದರಿಂದ ಶಿರಾ ತಾಲ್ಲೂಕು ಕಗ್ಗಲಡು ಗ್ರಾಮ ಸೇರಿದಂತೆ ಜಿಲ್ಲೆಯಲ್ಲಿ ವಲಸೆ ಪಕ್ಷಿಗಳು ಬರುವ ಸ್ಥಳದಲ್ಲಿ ನಿಗಾವಹಿಸಲಾಗಿದೆ. ಕೋಳಿಗಳು ಸತ್ತರೆ ಪಶುಪಾಲನಾ ಇಲಾಖೆ ಗಮನಕ್ಕೆ ತರಬೇಕೆಂದು ಜಿಲ್ಲೆಯ ಎಲ್ಲಾ ಕೋಳಿ ಫಾರಂ ಮಾಲೀಕರಿಗೆ ಸೂಚಿಸಲಾಗಿದೆ. ಹಳ್ಳಿಗಳಲ್ಲಿ ಕೋಳಿಗಳು ಸತ್ತರೆ ತಕ್ಷಣವೇ ಪ್ರಯೋಗಾಲಯಕ್ಕೆ ಕಳುಹಿಸಲು ಪಶುಪಾಲನಾ ಇಲಾಖೆಗೆ ಸೂಚಿಸಲಾಗಿದೆ.

ಜಿಲ್ಲೆಯಲ್ಲಿ ಹಕ್ಕಿಜ್ವರ ನಿಯಂತ್ರಣ ಮಾಡಲು ಜಿಲ್ಲಾ ಮಟ್ಟದಲ್ಲಿ ತಾಂತ್ರಿಕ ಅಧಿಕಾರಿ ಡಾ.ನಾಗಮಣಿ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ತಾಲ್ಲೂಕು ಮಟ್ಟದಲ್ಲಿ ಕ್ಷಿಪ್ರ ಕಾರ್ಯಾಚರಣೆ ಪಡೆ (Rapid Response Team)  ಹಾಗೂ ಒಬ್ಬ ಪಶುವೈದ್ಯ, ಇಬ್ಬರು ತಾಂತ್ರಿಕ ಸಿಬ್ಬಂದಿ ಹಾಗೂ ಇಬ್ಬರು ಡಿ ದರ್ಜೆ ನೌಕರರನ್ನೊಳಗೊಂಡ ೬೪ ತಂಡಗಳನ್ನು ರಚಿಸಲಾಗಿದೆ.

ಜಿಲ್ಲೆಯಲ್ಲಿ ಹಕ್ಕಿಜ್ವರದ ರೋಗೋದ್ರೇಕ ಕಂಡು ಬಂದರೆ ಅವಶ್ಯಕತೆಯಿರುವ ಪಿಪಿಟಿ ಕಿಟ್ , ರಾಸಾಯನಿಕಗಳು ಲಭ್ಯವಿದ್ದು, ರೋಗವನ್ನು ನಿಯಂತ್ರಿಸಲು ಈಗಾಗಲೇ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸಾರ್ವಜನಿಕರು ಕೋಳಿ ಶೀತಜ್ವರದ ಬಗ್ಗೆ ಆತಂಕ ಪಡಬೇಕಿಲ್ಲ. ಚೆನ್ನಾಗಿ ಬೇಯಿಸಿದ ಕೋಳಿ ಮಾಂಸವನ್ನು ಸೇವಿಸಬಹುದು ಎಂದು ಅವರು ತಿಳಿಸಿದ್ದಾರೆ.

ಕೋಳಿಗಳು ಅಸ್ವಾಭಾವಿಕವಾಗಿ ಮರಣ ಹೊಂದಿದರೆ ೨೪/೭ ಕಾರ್ಯನಿರ್ವಹಿಸುವ ಕಾಲ್ ಸೆಂಟರ್ ಸಂಖ್ಯೆ ೭೩೦೪೯೭೫೫೧೯ ಅಥವಾ ೦೮೧೬-೨೨೧೩೪೦೦ಗೆ ಕರೆ ಮಾಡಿ ಮಾಹಿತಿ ನೀಡಬೇಕು. ಹಕ್ಕಿ ಜ್ವರವು Avian influenza (H5N1) ಎಂಬ ವೈರಸ್ಸಿನಿಂದ ಕೋಳಿ, ಬಾತು ಕೋಳಿ, ಪಕ್ಷಿಗಳಲ್ಲಿ ಬರುವಂತಹ ಮಾರಣಾಂತಿಕ ಖಾಯಿಲೆಯಾಗಿದೆ. ರೋಗಗ್ರಸ್ಥ ಕೋಳಿಗಳು ಆರೋಗ್ಯವಂತ ಕೋಳಿಗಳಿಗೆ ಗಂಟಲು ದ್ರವದ ಮೂಲಕ  ಮತ್ತು ಹಿಕ್ಕೆಯಿಂದ ವೈರಸ್ಸನ್ನು ಹರಡುತ್ತದೆ. ಇಲ್ಲಿಯವರೆಗೂ ಭಾರತದಲ್ಲಿ ಈ ಖಾಯಿಲೆ ಮನುಷ್ಯರಲ್ಲಿ ಕಂಡು ಬಂದಿರುವ ಉದಾಹರಣೆಗಳಿಲ್ಲ. ಜಿಲ್ಲೆಯಲ್ಲಿ ೨೦ನೇ ಜಾನುವಾರುಗಣತಿ ಪ್ರಕಾರ ೪೦,೨೮,೧೭೮ ಕೋಳಿ, ೬೮೭ ಕೋಳಿ ಫಾರಂಗಳಿವೆ ಎಂದು ಜಿಲ್ಲಾ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪ ನಿರ್ದೇಶಕ(ಆಡಳಿತ) ಡಾ.ಜಿ.ಗಿರೀಶ್ ಬಾಬುರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ