Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ: ಸಿದ್ದರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿ ಪದಕ ವಿತರಿಸಿ ಮಾತನಾಡಿದರು.

ಸಾಕು ಹಸುವನ್ನು ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎಷ್ಟೇ ದೊಡ್ಡವರಾಗಿದ್ದರೂ ಮುಲಾಜು ನೋಡದೆ ಕಾನೂನು ಕ್ರಮ ಕೈಗೊಳ್ಳಲಾಗಿವುದು ಎಂದರು.

ಮಾನವ-ವನ್ಯಜೀವಿ ಸಹಬಾಳ್ವೆಯ ಪರಿಸರ ಪೂರಕವಾದ ಆಶಯ ಮತ್ತು ಉದ್ದೇಶಕ್ಕಾಗಿ ವನ್ಯಜೀವಿ ಸಪ್ತಾಹವನ್ನು ಆಚರಿಸಲಾಗುತ್ತಿದೆ.

ಅರಣ್ಯ ಪರಿಸರ ಆರೋಗ್ಯಕರವಾಗಿ ವಿಸ್ತರಣೆ ಆದಷ್ಟೂ ಮನುಷ್ಯ ಪರಿಸರ ಹೆಚ್ಚು ಆರೋಗ್ಯಕರವಾಗಿರುತ್ತದೆ. ಅರಣ್ಯದ ಉಳಿವು ಭೂಮಿಯ ಉಳಿವು ಎನ್ನುವುದನ್ನು ಮರೆಯಬಾರದು ಎಂದರು.

ಆನೆ ಮತ್ತು ಹುಲಿ ಸಂಪತ್ತಿನಲ್ಲಿ ನಮ್ಮ ರಾಜ್ಯ ಮೊದಲ ಮತ್ತು ಎರಡನೇ ಸ್ಥಾನದಲ್ಲಿದೆ. ಇದರ ಜೊತೆಗೆ ಪ್ರಾಣಿ ಮತ್ತು ಮನುಷ್ಯರ ಸಂಘರ್ಷ ತಪ್ಪಿ ಸಹಬಾಳ್ವೆ ಏರ್ಪಡಬೇಕು. ಇದಕ್ಕಾಗಿ ಪ್ರಾಣಿಗಳು ಕಾಡು ಬಿಟ್ಟು ಹೊರಗೆ ಏಕೆ ಬರುತ್ತಿವೆ ಎನ್ನುವ ಬಗ್ಗೆ ಅಧ್ಯಯನಗಳು ನಡೆದು ವೈಜ್ಞಾನಿಕ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ ಎಂದರು.

ಹುಲಿ, ಆನೆಗಳ ಹತ್ಯೆ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಅರಣ್ಯಾಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಹುಲಿ ಹತ್ಯೆ ಮಾಡಿದವರು ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ದ ಎಂದು ಮುಖ್ಯಮಂತ್ರಿಗಳು ಎಚ್ಚರಿಸಿದರು.

ದಿನೇ ದಿನೇ ಅರಣ್ಯ ಪ್ರದೇಶ ಕಡಿಮೆ ಆಗುತ್ತಿದ್ದರೆ ಮನುಷ್ಯ ಕುಲ ಉಳಿಯಲು ಸಾಧ್ಯವಿಲ್ಲ. ಆದ್ದರಿಂದ ಅರಣ್ಯದ ಉಳಿವು ಮನುಷ್ಯನ ಉಳಿವು ಎನ್ನುವುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದರು.

ಅರಣ್ಯ ಮತ್ತು ಪರಿಸರ ಸಚಿವರಾದ ಈಶ್ವರ್ ಖಂಡ್ರೆ, ಅರಣ್ಯ ರಾಯಬಾರಿ ಅನಿಲ್ ಕುಂಬ್ಳೆ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ