Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಮಾಜಿಕ ನ್ಯಾಯ ಸಿಗದವರ ಪರ ಅಂಬೇಡ್ಕರ್ ಹೋರಾಡಿದರು: ಸಿದ್ದರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಂಬೇಡ್ಕರ್ ಅವರೊಬ್ಬ   ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ  ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದರಲ್ಲದೇ,   ದೇಶದಲ್ಲಿ ಸಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ  ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಸಂವಿಧಾನ ಶಿಲ್ಪಿ ಭಾರತ ರತ್ನ ಮಹಾ ಮಾನವತಾವಾದಿ ಬಾಬಾ ಸಾಹೇಬ ಡಾ.ಬಿ ಆರ್ ಅಂಬೇಡ್ಕರ್ ರವರ 69 ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶದ ಸಂವಿಧಾನ ಶಿಲ್ಪಿ. ಅವರು ದೇಶಕ್ಕೆ ಎಂಥ ಸಂವಿಧಾನದ ಅಗತ್ಯವಿದೆ ಎಂದು ಚಿಂತಿಸಿ , ಇತರೆ ದೇಶಗಳ ಸಂವಿಧಾನವನ್ನು ಅಭ್ಯಾಸ ಮಾಡಿ ದೇಶಕ್ಕೆ  ಅಗತ್ಯವಿರುವ ಸಂವಿಧಾನವನ್ನು ಕೊಟ್ಟಿದ್ದಾರೆ.   ನಮ್ಮ ಸಾಮಾಜಿಕ ವ್ಯವಸ್ಥೆಯ ಬದಲಾವಣೆಯಾಗಬೇಕು, ಎಲ್ಲರಿಗೂ ಸಮಾನ ಅವಕಾಶಗಳು ದೊರಕಬೇಕು ಹಾಗೂ ಸಾಮಾಜಿಕ ನ್ಯಾಯ ಸ್ಥಾಪನೆಯಾಗಬೇಕು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.

ನಮ್ಮ ಸರ್ಕಾರ ಶಾಲಾ ಕಾಲೇಜು ಮಕ್ಕಳಿಗೆ ಇದರ ಅರಿವು ಮೂಡಿಸಲು ಸಂವಿಧಾನ ಪೀಠಿಕೆಯನ್ನು ಬೋಧಿಸಲಾಗುತ್ತಿದೆ. ಸಂವಿಧಾನ ಪ್ರತಿಯೊಬ್ಬರಿಗೂ ಹಕ್ಕು ಮತ್ತು ಬಾಧ್ಯತೆಗಳನ್ನು ನೀಡಿದೆ. ಸಂವಿಧಾನದ ಧ್ಯೇಯೋದ್ದೇಶಗಳು ಎಲ್ಲರಿಗೂ ಅರ್ಥವಾಗಬೇಕು ಎಂಬ ಕಾರಣದಿಂದ ಸರ್ಕಾರ ಇದನ್ನು ಜಾರಿ ಮಾಡಿದೆ ಎಂದರು.

ಹಿಂದೂ ಧರ್ಮದಲ್ಲಿರುವ ಸಾಮಾಜಿಕ ವ್ಯವಸ್ಥೆಗೆ ರೋಸಿಹೋಗಿದ್ದರು-ಪರಿನಿರ್ವಾಣ ದಿನದಂದು ನಾವು ಅಂಬೇಡ್ಕರ್ ಅವರನ್ನು ಸ್ಮರಿಸುವ ಕೆಲಸವನ್ನು ಮಾಡಿದ್ದೇವೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅವರ ಕೊನೆಯ ದಿನಗಳಲ್ಲಿ ಬೌದ್ಧ ಧರ್ಮವನ್ನು ಸ್ವೀಕರಿಸಿದರು.

ಹುಟ್ಟುವಾಗ ಹಿಂದೂವಾಗಿದ್ದೆ, ಸಾಯುವಾಗ ಹಿಂದೂವಾಗಿ ಸಾಯಲಾರೆ. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಪಟ್ಟು, ಅದು ಸಾಧ್ಯವಾಗದ ಹಿನ್ನೆಲೆಯಲ್ಲಿ ಬೌದ್ಧ ಧರ್ಮ ಸ್ವೀಕರಿಸಿದ್ದೇನೆ ಎಂದು ಹೇಳಿದ್ದರು  ಎಂದರು. ಹಿಂದೂ ಧರ್ಮದಲ್ಲಿರುವ ಸಾಮಾಜಿಕ ವ್ಯವಸ್ಥೆಗೆ ರೋಸಿಹೋಗಿ ಹೀಗೆ ಮಾಡಿದರು ಎಂದರು.
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಮತ್ತಿತರ ನಾಯಕರು ಇದ್ದರು.


 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ