Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂವಿಧಾನ ವಿರೋಧಿಗಳ ಬಗ್ಗೆ ಎಚ್ಚರವಿರಲಿ-ಸಿದ್ದರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಂಘ ಪರಿವಾರ ಮತ್ತು ಆರ್.ಎಸ್.ಎಸ್ ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ಹಿಂದೆಯೂ ವಿರೋಧಿಸಿದ್ದರು, ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆ ಇಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.


ಮೈಸೂರು ವಿಶ್ವ ವಿದ್ಯಾಲಯದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡ ಉದ್ಘಾಟಿಸಿ ಸಿದ್ದರಾಮಯ್ಯ ಮಾತನಾಡಿದರು. 

ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ. ಇವರು ಸಮಾಜವನ್ನು ಅರ್ಥ ಮಾಡಿಕೊಳ್ಳಲು ಜ್ಞಾನ‌ಸಂಪಾದನೆ ಮಾಡಿದರು. ಬಳಿಕ ತಮ್ಮ ಜ್ಞಾನವನ್ನು ಬದುಕಿನುದ್ದಕ್ಕೂ ಸಮಾಜದ ಬದಲಾವಣೆಗೆ ಬಳಸಿದರು.

ಅಂಬೇಡ್ಕರ್ ಅವರ ಹೆಸರಲ್ಲಿ ಬಿಜೆಪಿಯವರು, ಸಂಘ ಪರಿವಾರದವರು ಅಪಪ್ರಚಾರ ಮಾಡುತ್ತಿದ್ದಾರೆ.  ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಸತ್ಯ ಏನೆಂದರೆ "ನನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು  ಸಾವರ್ಕರ್ ಮತ್ತು ಡಾಂಗೆ" ಎಂದು ಸ್ವತಃ ಅಂಬೇಡ್ಕರ್ ಅವರೇ ತಮ್ಮದೇ ಹಸ್ತಾಕ್ಷರದಲ್ಲಿ ಬರೆದಿದ್ದಾರೆ. ಇಂಥಾ ಸತ್ಯಗಳನ್ನು ಸಮಾಜದ ಮುಂದಿಟ್ಟು ಸಂಘ ಪರಿವಾರದ ಸುಳ್ಳುಗಳನ್ನು ಬಹಿರಂಗಗೊಳಿಸಬೇಕು. 

ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಅನ್ನು ಬೆಂಗಳೂರಿನಲ್ಲಿ ನಾನು ಸ್ಥಾಪಿಸಲು ಕಾರಣ ಅಂಬೇಡ್ಕರ್ ಅವರನ್ನು ಓದಿಕೊಂಡವರು ಅವರ ಮಾರ್ಗದಲ್ಲಿ ನಡೆಯಲಿ ಎಂದು. ಅಂಬೇಡ್ಕರ್ ಅವರಿಗೆ ಅಂಬೇಡ್ಕರ್ ಅವರೇ ಸಾಟಿ. ಮತ್ತೊಬ್ಬ ಅಂಬೇಡ್ಕರ್ ಬರಲು ಸಾಧ್ಯವಿಲ್ಲ. ಆದರೆ ಪ್ರತಿಯೊಬ್ಬರೂ ಅವರ ಆದರ್ಶಗಳನ್ನು ಪಾಲಿಸಿ ಅವರ ಹಾದಿಯಲ್ಲಿ ನಡೆಯಬೇಕು. 

ವಿಶ್ವದ ಎಲ್ಲಾ ಸಂವಿಧಾನಗಳನ್ನು ಓದಿ, ಅರ್ಥೈಸಿಕೊಂಡು ಭಾರತೀಯ ಸಮಾಜಕ್ಕೆ ಅನ್ವಯ ಆಗುವ ವಿಶ್ವ ಶ್ರೇಷ್ಠ ಸಂವಿಧಾನವನ್ನು ಅಂಬೇಡ್ಕರ್ ಅವರು ಭಾರತಕ್ಕೆ ಕೊಟ್ಟರು. 

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲೆ ಸನಾತನಿ ಒಬ್ಬ ಶೂ ಎಸೆದಿರುವುದು ಸನಾತನಿಗಳು, ಪಟ್ಟಭದ್ರರು ಸಮಾಜದಲ್ಲಿ ಇನ್ನೂ ಇದ್ದಾರೆ ಎನ್ನುವುದಕ್ಕೆ ಸಾಕ್ಷಿ. ಶೂ ಎಸೆತವನ್ನು ದಲಿತರಷ್ಟೇ ಅಲ್ಲ, ಪ್ರತಿಯೊಬ್ಬರೂ ವಿರೋಧಿಸಬೇಕು. ಹೀಗಾದಾಗ ಮಾತ್ರ ಸಮಾಜ ಬದಲಾವಣೆಯ ಹಾದಿಯಲ್ಲಿದೆ ಎಂದು ಸಮಾಧಾನ ಪಟ್ಟುಕೊಳ್ಳಬಹುದು.

ನಾನು ಬುದ್ದ, ಬಸವ, ಅಂಬೇಡ್ಕರ್ ವಿಚಾರದಲ್ಲಿ ನಂಬಿಕೆ ಇಟ್ಟುಕೊಂಡಿದ್ದೀನಿ. ಈ ಕಾರಣಕ್ಕೇ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯಬೇಕು ಎಂದು ಆಶಿಸುತ್ತೇನೆ. ವಿಜ್ಞಾನ ಓದಿಯೂ ಮೂಢ ನಂಬಿಕೆ ಆಚರಿಸುವವರಾಗಬೇಡಿ. 

ಮೈಸೂರು ವಿವಿಯಲ್ಲಿ ಅಂಬೇಡ್ಕರ್ ಅಧ್ಯಯನ‌ಕೇಂದ್ರ ಆಗಿ 25 ವರ್ಷಗಳಾಗಿವೆ. ಈ ಸಂದರ್ಭದಲ್ಲಿ "ವಿಶ್ವ ಜ್ಞಾನಿ ಅಂಬೇಡ್ಕರ್ ಸಭಾ ಭವನ" ಲೋಕಾರ್ಪಣೆ ಆಗುತ್ತಿರುವುದು ಸ್ವಾಗತಾರ್ಹ.

 ಸಮಾಜದ ಪರವಾಗಿ ಇರುವವರ ಜೊತೆ ನಿಮ್ಮ ಸಹವಾಸ ಇರಲಿ. ಸಮಾಜ ಬದಲಾವಣೆಯ ವಿರೋಧಿಗಳ, ಸನಾತನಿಗಳ ಸಹವಾಸ ಮಾಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿ ಮಾತು ಹೇಳಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ