Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಗಂದೂರು ಸೇತುವೆ ಉದ್ಘಾಟನೆಗೆ ತಡವಾಗಿ ಆಹ್ವಾನ, ಭಾಗವಹಿಸಿಲ್ಲ-ಸಿದ್ದರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಾಗರ - ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭಕ್ಕೆ ನನ್ನನ್ನು ತಡವಾಗಿ ಆಮಂತ್ರಿಸಿದ್ದು, ಬೇರೆಡೆ ಕಾರ್ಯಕ್ರಮಗಳನ್ನು ನಾನು ಹಮ್ಮಿಕೊಂಡಿರುವುದರಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.


 ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮುಂದೂಡಿ, ಬೇರೊಂದು ದಿನ ಆಯೋಜಿಸಬೇಕು ಎಂದು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.
ಸಿಎಂ ಪತ್ರದ ಸಾರಾಂಶ
;

ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಶಿವಮೊಗ್ಗ ಜಿಲ್ಲೆ ಸಾಗರದ ನೆಹರೂ ಕ್ರೀಡಾಂಗಣದಲ್ಲಿ ಸೋಮವಾರ ಸಾಗರ - ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಿದೆ

 ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರನ್ನು ಸಹಾ ಮುದ್ರಿಸಲಾಗಿದೆ. ಆದರೆ ನನಗೆ ಈ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡದ ಕಾರಣದಿಂದ ಈಗಾಗಲೇ ನನ್ನ‌ ಅಧ್ಯಕ್ಷತೆಯಲ್ಲಿ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ.

ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆಯು ಇಂತಹ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜನೆಗೆ ಮುನ್ನ ರಾಜ್ಯ ಸರ್ಕಾರವನ್ನು ಮುಂಚಿತವಾಗಿಯೇ ಸಂಪರ್ಕಿಸಿದ್ದರೆ ಮತ್ತಷ್ಟು ಸಮರ್ಪಕವಾಗಿರುತ್ತಿತ್ತು. ಮುಂದೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಸಂದರ್ಭದಲ್ಲಿ ರಾಜ್ಯ ಸರ್ಕಾರವನ್ನು ಸಕಾಲದಲ್ಲಿ ಸಂಪರ್ಕಿಸುವಂತೆ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆಗೆ ಸೂಚನೆ ನೀಡಬೇಕು ಎಂದು ತಮ್ಮಲ್ಲಿ ವಿನಂತಿಸುತ್ತೇನೆ.

ಇಂದಿನ ಕಾರ್ಯಕ್ರಮವನ್ನು ಮುಂದೂಡಿ, ನಿಮಗೆ ಅನುಕೂಲವಾಗುವ ಒಂದೆರೆಡು ದಿನಾಂಕಗಳನ್ನು ನನಗೆ ಒದಗಿಸಬೇಕೆಂದು ಕೋರುತ್ತೇನೆ. ಆ ಮೂಲಕ ಇಂಥದ್ದೊಂದು ಮಹತ್ವದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ನಾನು ಕೂಡ ಭಾಗವಹಿಸಲು ಸಾಧ್ಯವಾಗಲಿದೆ. ಇಂತಿ ಮುಖ್ಯಮಂತ್ರಿ ಸಿದ್ದರಾಮಯ್ಯ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ