Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ಯಾರಂಟಿಗಳ ಮೂಲಕ 80 ಸಾವಿರ ಕೋಟಿ ರೂ. ಜನರ ಜೇಬಿಗೆ ಹಾಕಿದ್ದೇವೆ: ಸಿದ್ದರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ದೇವನಹಳ್ಳಿ:
ಇಲ್ಲಿಯವರೆಗೆ ಗ್ಯಾರಂಟಿಗಳ ಮೂಲಕ 80 ಸಾವಿರ ಕೋಟಿ ರೂಪಾಯಿಯನ್ನು ಜನರ ಜೇಬಿಗೆ ಹಾಕಿದ್ದೇವೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು.

ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಗ್ರಾಮಾಂತರ ಜಿಲ್ಲೆಯ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

ಗ್ರಾಮಾಂತರ ಜಿಲ್ಲೆಯಲ್ಲಿ ಸಾವಿರ ಸಾವಿರ  ಕೋಟಿ ವೆಚ್ಚದ ಕಾಮಗಾರಿಗಳಿಗೆ ಒಂದೇ ದಿನ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿ ಪರಿವಾರದ ಸುಳ್ಳುಗಳೆಗೆ ಅಭಿವೃದ್ಧಿ ಮೂಲಕವೇ ಉತ್ತರ ನೀಡುತ್ತಿದ್ದೇವೆ ಎಂದರು.

ಬಿಜೆಪಿ ಕನ್ನಡಕದ ಗಾಜುಗಳು ಅವರ ಅಧಿಕಾರಾವಧಿಯ ಕಲೆಗಳಿಂದ ಕೂಡಿದೆ. ಅದಕ್ಕೇ ಅವರು ನೋಡುವ ಕಡೆಯಲ್ಲೆಲ್ಲಾ ಕಲೆಗಳೇ ಕಾಣುತ್ತಿವೆ.  ಬಿಜೆಪಿ ತನ್ನ ಕನ್ನಡಕ ಕ್ಲೀನ್ ಮಾಡಿಕೊಂಡರೆ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾಣುತ್ತದೆ ಎಂದು ಟೀಕಿಸಿದರು.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಅಭಿವೃದ್ಧಿ ಮತ್ತು ಪ್ರಗತಿಗೆ ನಮ್ಮ ಸರ್ಕಾರ ನಿರಂತರವಾಗಿ ಅನುದಾನಗಳನ್ನು ನೀಡಿ, ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿದೆ. ಚುನಾವಣೆ ವೇಳೆ ನಾವು ಕೊಟ್ಟ ಭರವಸೆಗಳನ್ನೆಲ್ಲಾ ಈಡೇರಿಸುತ್ತಲೇ ಇದ್ದೇವೆ. ಅಧಿಕಾರಕ್ಕೆ ಬಂದ ಬಳಿಕ ಮೊದಲ ಕ್ಯಾಬಿನೆಟ್ ನಲ್ಲೇ ಗ್ಯಾರಂಟಿಗಳನ್ನು ಜಾರಿ ಮಾಡಿ ಇದಕ್ಕಾಗಿ 80 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಿದ್ದೇವೆ ಎಂದರು.‌
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ