Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೌರ ಕಾರ್ಮಿಕರ ಹುದ್ದೆಗಳಿಗೆ ನೇಮಕಾತಿ-ಸಿದ್ದರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷ್ಣಾದಲ್ಲಿ ವಿವಿಧ ಪೌರ ಕಾರ್ಮಿಕ ಸಂಘಟನೆಗಳ ಬೇಡಿಕೆ ಕುರಿತು ನಡೆಸಿದ ಸಭೆಯ ಮುಖ್ಯಾಂಶಗಳು. 

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿಯಿರುವ ಪೌರ ಕಾರ್ಮಿಕರ ಹುದ್ದೆಗಳಿಗೆ ನೇಮಕಾತಿ ಸೇರಿದಂತೆ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿಯಿದ್ದ ಪೌರ ಕಾರ್ಮಿಕರ 2,992 ಹುದ್ದೆಗಳ ಪೈಕಿ 492 ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, ಇನ್ನುಳಿದ ಹುದ್ದೆಗಳನ್ನು ಭರ್ತಿ ಮಾಡಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ವೇತನ ಅಡಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಮೃತಪಟ್ಟ ಪೌರ ಕಾರ್ಮಿಕರ ಅವಲಂಬಿತರಿಗೆ ರೂ.10 ಲಕ್ಷ ಪರಿಹಾರವನ್ನು ನಗರ ಸ್ಥಳೀಯ ಸಂಸ್ಥೆಗಳ ಸ್ವಂತ ಸಂಪನ್ಮೂಲದಿಂದ ಭರಿಸಲು ಈಗಾಗಲೇ ಅನುಮೋದನೆ ನೀಡಲಾಗಿದೆ.


ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷ್ಣಾದಲ್ಲಿ ಪೌರ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಅವರ ಅಹವಾಲು, ಬೇಡಿಕೆಗಳನ್ನು ಆಲಿಸಿದರು.

ಸಚಿವರಾದ ಭೈರತಿ ಸುರೇಶ್, ರಹೀಂ ಖಾನ್, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ, ಮುಖ್ಯಮಂತ್ರಿ ಅವರ ಅಪರ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು, ಪೌರ ಕಾರ್ಮಿಕರ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ