Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ರಾಜ್ಯಪಾಲರ ನಡೆಗೆ ಸಿದ್ದರಾಮಯ್ಯ ಆಕ್ರೋಶ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2026ನೇ ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣ ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ.‌ ಸಂವಿಧಾನ ಬಾಹಿರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಜಂಟಿ ಅಧಿವೇಶನಕ್ಕೆ ಆಗಮಿಸಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಮ್ಮ ಭಾಷಣವನ್ನು ಅರ್ಧದಲ್ಲೇ ಮೊಟಕುಗೊಳಿಸಿ ತೆರಳಿದ್ದಕ್ಕೆ ಅಸಮಾಧಾನಗೊಂಡ ಸಿಎಂ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, "ಪ್ರತಿ ವರ್ಷದ ಆರಂಭದಲ್ಲಿ ನಡೆಯುವ ಹಾಗೂ ಹೊಸ ಸರ್ಕಾರ ಸ್ಥಾಪನೆಗೊಂಡ ಸಂದರ್ಭದಲ್ಲಿ ನಡೆಸಲಾಗುವ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡುವುದು ಸಂವಿಧಾನದ ರೀತ್ಯ ರಾಜ್ಯಪಾಲರ ಕರ್ತವ್ಯವಾಗಿರುತ್ತದೆ. ಸಂವಿಧಾನ ಕಲಂ 176 ಮತ್ತು 163ರಂತೆ ಸರ್ಕಾರದ ಸಚಿವ ಸಂಪುಟ ಸಿದ್ಧಪಡಿಸಿರುವ ಭಾಷಣವನ್ನು ಓದಲೇಬೇಕೆಂಬ ನಿಯಮವಿದ್ದು, ರಾಜ್ಯಪಾಲರು ಸಿದ್ಧಪಡಿಸಿದ ಭಾಷಣವನ್ನು ಓದುವಂತಿಲ್ಲ.

ವರ್ಷದ ಮೊದಲ ಜಂಟಿ ಅಧಿವೇಶನ ಮತ್ತು ವಿಶೇಷ ಅಧಿವೇಶನವನ್ನು ಕರೆಯಲಾಗಿತ್ತು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ ರದ್ದುಪಡಿಸಿ, ವಿಬಿಜಿರಾಮ್ ಜಿ (ವಿಕಸಿತ ಭಾರತ - ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಎಂಬ ಕಾಯ್ದೆಯನ್ನು ಕೇಂದ್ರ ಸರ್ಕಾರ ಹೊಸದಾಗಿ ರಚಿಸಿದೆ. ಇದಕ್ಕೆ ನಮ್ಮ ಸರ್ಕಾರದ ತೀವ್ರ ವಿರೋಧವಿದೆ ಎಂದರು.

ಮೊದಲನೆಯದಾಗಿ ಕಾಯ್ದೆಯಿಂದ ಮಹಾತ್ಮಾ ಗಾಂಧಿ ಅವರ ಹೆಸರನ್ನು ತೆಗೆಯಲಾಗಿದೆ. 2005ರಲ್ಲಿ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ, ಸಂವಿಧಾನದ ನಿರ್ದೇಶನಗಳಂತೆ, ಆಹಾರ ಭದ್ರತೆ, ಮಾಹಿತಿ ಹಕ್ಕು, ಶಿಕ್ಷಣ ಹಕ್ಕು, ಉದ್ಯೋಗದ ಹಕ್ಕು ಕಾಯ್ದೆಗಳನ್ನು ಜಾರಿಗೆ ತಂದಿದ್ದರು. ಬಡ ಕಾರ್ಮಿಕರಿಗೆ ಕನಿಷ್ಠ 100 ದಿನಗಳ ಕಾಲ ಉದ್ಯೋಗ ಒದಗಿಸುವ ಉದ್ದೇಶದಿಂದ ಜಾರಿಗೆ ತರಲಾಗಿದ್ದ ಈ ಕಾಯ್ದೆಯಿಂದ ದಲಿತರು, ಕಾರ್ಮಿಕರು ಮತ್ತು ಮಹಿಳೆಯರು ಮತ್ತು ಸಣ್ಣ ರೈತರಿಗೆ ಅನುಕೂಲವಾಗುತ್ತದೆ.

ಹೊಸ ಕಾಯ್ದೆಯಲ್ಲಿ ವಿಶೇಷವಾಗಿ ಶೇ.53 ಮಹಿಳೆಯರು, ಶೇ.28 ದಲಿತರಿದ್ದು, ಇವರಿಗೆ ಉದ್ಯೋಗದ ಖಾತ್ರಿ ಇಲ್ಲ. ಅವರು ಅಪೇಕ್ಷಿಸಿದ ಸ್ಥಳದಲ್ಲಿ, ಸಣ್ಣ ರೈತರು ಅವರ ಜಮೀನುಗಳಲ್ಲಿಯೇ ಕೆಲಸ ಮಾಡುವ ಅವಕಾಶವನ್ನು ಮುಂಚಿನ ಕಾಯ್ದೆ ಕಲ್ಪಿಸಿತ್ತು. ಆದರೆ ವಿಬಿ ಜಿ ರಾಮ್ ಜಿ ಕಾಯ್ದೆಯಲ್ಲಿ ಈ ನಿರ್ಣಯವನ್ನು ಕೇಂದ್ರ ಸರ್ಕಾರ ಕೈಗೊಳ್ಳುತ್ತದೆ. ಕೇಂದ್ರ ಸರ್ಕಾರ ನಿರ್ಧರಿಸುವ ಕಡೆಗಳಲ್ಲಿ ಬಡ ಕಾರ್ಮಿಕರು ಕೆಲಸ ಮಾಡಬೇಕಾಗಿದೆ. ಹಿಂದಿನ ಕಾಯ್ದೆಯಲ್ಲಿ ವರ್ಷದ 365 ದಿನದಲ್ಲಿ ಯಾವಾಗಲಾದರೂ ಕೆಲಸ ಕೊಡಬಹುದಾಗಿದ್ದು, ಅದು ಸರ್ಕಾರದ ಕರ್ತವ್ಯವಾಗಿತ್ತು. ಅಲ್ಲದೇ, ಈ ಬಗ್ಗೆ ಕ್ರಿಯಾಯೋಜನೆ ರಚಿಸುವ ಹಕ್ಕು ಆಯಾ ಗ್ರಾಮಸಭೆ ಮತ್ತು ಪಂಚಾಯ್ತಿಗಳಿಗೆ ಅವಕಾಶವಿತ್ತು. ಆದರೆ ಈ ಹೊಸ ಕಾಯ್ದೆಯಲ್ಲಿ ಈ ಅವಕಾಶವನ್ನು ರದ್ದು ಪಡಿಸಲಾಗಿದೆ ಎಂದು ವಿವರಿಸಿದರು.

ಹೊಸ ಕಾಯ್ದೆಯನ್ನು ಉದ್ದೇಶಪೂರ್ವಕವಾಗಿ ಸಮರ್ಥಿಸಿಕೊಳ್ಳುತ್ತಿದ್ದಾರೆ. ಅವರಿಗೆ ಸ್ವಾತಂತ್ರ್ಯವಿಲ್ಲ ಹಾಗೂ ಕೇಂದ್ರದ ಕಾಯ್ದೆಯಗಳನ್ನು ಸಹಕರಿಸಲೇಬೇಕೆಂಬ ನೀತಿಯಂತೆ ನಡೆದುಕೊಳ್ಳುತ್ತಿದ್ದಾರೆ. ಆದರೆ ಆಡಳಿತ ಪಕ್ಷವಾಗಿ ನಮಗೆ ಅದರ ಬಗ್ಗೆ ವಿರೋಧವಿದ್ದು, ಈ ವಿಚಾರಗಳನ್ನು ರಾಜ್ಯಪಾಲರ ಭಾಷಣದಲ್ಲಿ ಸೇರಿಸಲಾಗಿತ್ತು. MGNREGA ಕಾಯ್ದೆಯನ್ನು ಮರುಸ್ಥಾಪಿಸುವುದು ಮತ್ತು ಹೊಸ ಕಾಯ್ದೆಯನ್ನು ರದ್ದುಗೊಳಿಸಬೇಕೆಂಬುದೇ ನಮ್ಮ ಉದ್ದೇಶ. ನಮ್ಮ ಪಕ್ಷ ಮತ್ತು ಸರ್ಕಾರದಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. MGNREGA ಮರುಸ್ಥಾಪನೆ ಮಾಡುವವರೆಗೆ ನಿರಂತರವಾಗಿ ನಮ್ಮ ಹೋರಾಟ ನಡೆಯಲಿದೆ. ಈ ಹಿಂದೆ ರೈತರ ವಿರೋಧಿ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಸ್ಸು ತೆಗೆದುಕೊಂಡಂತೆ, ಈ ಹೊಸ ಕಾಯ್ದೆಯನ್ನು ವಾಪಸ್ಸು ತೆಗೆದುಕೊಳ್ಳುವವರೆಗೆ ನಮ್ಮ ಹೋರಾಟ ನಡೆಯಲಿದೆ" ಎಂದರು.

ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೆ, ತಾವೇ ಸಿದ್ಧಪಡಿಸಿದ ಭಾಷಣವನ್ನು ಓದುವ ಮೂಲಕ ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಇದನ್ನು ನಮ್ಮ ಪಕ್ಷ ಮತ್ತು ಸರ್ಕಾರ, ಶಾಸಕರು, ಎಂಎಲ್​ಸಿಗಳು ಸೇರಿ ಪ್ರತಿಭಟನೆ ಮಾಡುತ್ತೇವೆ. ಇಡೀ ರಾಜ್ಯದಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ.

ರಾಜ್ಯಪಾಲು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ. ಕೇಂದ್ರ ಸರ್ಕಾರ ತಾವು ಮಾಡಿದ ತಪ್ಪನ್ನು ಮರೆಮಾಚಲು ರಾಜ್ಯಪಾಲರ ಕೈಯಲ್ಲಿ ಬೇರೆ ಭಾಷಣವನ್ನು ಓದಿಸಿದ್ದಾರೆ. ಇದು ಸಂವಿಧಾನ ಬಾಹಿರ ಕೃತ್ಯ. ರಾಜ್ಯಪಾಲರು ತಮ್ಮ ಕರ್ತವ್ಯವನ್ನು ಪಾಲನೆ ಮಾಡಿಲ್ಲ ಎಂದರು.

ಕಾನೂನು ಹೋರಾಟ: ಸರ್ಕಾರ ಸಿದ್ಧಪಡಿಸಿರುವ ಭಾಷಣದ ಪ್ರತಿಯನ್ನು ಎಲ್ಲ ಶಾಸಕರು ಎಂಎಲ್​ಸಿಗಳಿಗೆ ವಿತರಿಸಲಾಗಿದೆ. ಈ ವಿಚಾರದ ಬಗ್ಗೆ ಸುಪ್ರೀಂ ಕೋರ್ಟ್ ಮೊಕದ್ದಮೆ ಹೂಡುವ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು