Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆಗೆ ಕಾನೂನು ರೆಡಿ: ಸಿದ್ದರಾಮಯ್ಯ

ಚಂದ್ರವಳ್ಳಿ ನ್ಯೂಸ್, ಮೈಸೂರು / ಬೆಂಗಳೂರು:
ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ.  ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.

ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ, ಪ್ರಶಸ್ತಿ ವಿತರಿಸಿ ಮಾತನಾಡಿದ ಅವರು ವಾಕ್ ಸ್ವಾತಂತ್ರ್ಯ ನಮಗೆ ನಮ್ಮ ಸಂವಿಧಾನ ನೀಡಿರುವ ಅತ್ಯುನ್ನತ ಮೌಲ್ಯ. ಸಂವಿಧಾನದ ಮೂರು ಅಂಗಗಳಿಗೆ ಅಪಾಯ ಬಂದರೆ ಸಮಾಜಕ್ಕೆ ಅಪಾಯ ಬಂದಂತೆ. ವಾಕ್ ಸ್ವಾತಂತ್ರ್ಯ ಆಚರಿಸುವ ಪತ್ರಿಕಾ ರಂಗಕ್ಕೆ ಯಾವ ನಿಬರ್ಂಧಗಳೂ ಇರಬಾರದು ಎನ್ನುವುದನ್ನು ಪಂಡಿತ್ ನೆಹರೂ ಅವರೂ ಬಹಳ ಒತ್ತಿ ಹೇಳಿದ್ದರು ಎಂದು ವಿವರಿಸಿದರು.

ಸುಳ್ಳು ಸುದ್ದಿಗಳ ಅನಾಹುತಗಳಿಗೆ ಉದಾಹರಣೆ ನೀಡಿದ ಮುಖ್ಯಮಂತ್ರಿಗಳು, "ನಾನು ಸದನದಲ್ಲಿ ಮಾತನಾಡುವಾಗ ಹಿಂದಿನ ಮುಖ್ಯಮಂತ್ರಿಗಳು ಆಡಿದ ಮಾತನ್ನು ನಾನು ಉದಾಹರಿಸಿದ್ದೆ. "ಸಾಲ ಮನ್ನಾ ಮಾಡೋದಕ್ಕೆ ನಮ್ಮ ಬಳಿ ಪ್ರಿಂಟಿಂಗ್ ಮೆಷಿನ್ ಇದೆಯಾ" ಎಂದು ಹಿಂದಿನ ಮುಖ್ಯಮಂತ್ರಿ ಅವರು ಸದನದಲ್ಲೇ ಹೇಳಿದ್ದರು. ಈ ಮಾತನ್ನು ನಾನು ಉದಾಹರಿಸಿದ್ದೆ. ಆದರೆ ಸಾಮಾಜಿಕ ಜಾಲ ತಾಣಗಳಲ್ಲಿ ನಾನೇ ಆ ಮಾತು ಹೇಳಿದ್ದಾಗಿ ನಕಲಿ ಸುದ್ದಿ ಸೃಷ್ಟಿಸಿ, ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಬೆರೆಸಿ ತಪ್ಪು ಸಂದೇಶ ಹರಡಿದರು. ಇದರಿಂದ ನಷ್ಟ ಆಗಿದ್ದು ಸಮಾಜಕ್ಕೇ ಹೊರತು ನನಗಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ನಾವು ಕಾನೂನು ಮಾಡಿದ್ದೇವೆ. ಆದರೆ ಕೇವಲ ಕಾನೂನಿನಿಂದ ಮಾತ್ರ ಫೇಕ್ ನ್ಯೂಸ್ ತಡೆಯಲು ಸಾಧ್ಯವಿಲ್ಲ. ಇಡೀ ಸಮಾಜ ಇದರ ವಿರುದ್ಧ ಧ್ವನಿ ಎತ್ತಿದರೆ ಮಾತ್ರ ಸಾಧ್ಯ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಪ್ರಜಾವಾಣಿ ಪತ್ರಿಕೆ ಸಂಪಾದಕರಾದ ರವೀಂದ್ರ ಭಟ್, ಗ್ಯಾರಂಟಿ ಅನುμÁ್ಠನ ಸಮಿತಿಯ ಪುμÁ್ಪ ಅಮರನಾಥ್, ಶಾಸಕರಾದ ರವಿಶಂಕರ್, ತನ್ವೀರ್ ಸೇಠ್, ನ್ಯೂಸ್ ಫಸ್ಟ್ ಸಿಇಒ ರವಿಕುಮಾರ್ ಉಪಸ್ಥಿತರಿದ್ದರು.
ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ದೀಪಕ್, ಕಾರ್ಯದರ್ಶಿ ರವಿ ಪಾಂಡವಪುರ ಸೇರಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ