Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ತಜ್ಞರ ವರದಿ ಆಧಾರಿಸಿ ಟಿಬಿ ಡ್ಯಾಂ ಗೇಟ್ ಗಳ ನಿರ್ವಹಣೆ: ಸಿದ್ದರಾಮಯ್ಯ

ಚಂದ್ರವಳ್ಳಿ ನ್ಯೂಸ್, ಕೊಪ್ಪಳ :
ತಜ್ಞರ ವರದಿಯ ಆಧಾರದ ಮೇಲೆ ಗೇಟ್ ಗಳ ನಿರ್ವಹಣೆ ಮಾಡಲಾಗುವುದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ಕೊಪ್ಪಳದ ಗಿಣಿಗೇರಾ ಏರ್ ಸ್ಟ್ರಿಪ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕ್ರಸ್ಟ್ ಗೇಟ್ ಗಳ ಕಾಲಕಾಲಕ್ಕೆ ದುರಸ್ತಿ ಮಾಡುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು 50 ವರ್ಷಕ್ಕೆ ಗೇಟ್ ಗಳನ್ನು ಬದಲಿಸಬೇಕು. 70 ವರ್ಷಗಳಿಂದ ಗೇಟ್ ಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದೆ. ಉತ್ತಮ ನಿರ್ವಹಣೆ ಮಾಡಿರುವುದರಿಂದ  70 ವರ್ಷ ಕೆಲಸ ಮಾಡಿದೆ. ಪ್ರಸ್ತುತ ತಜ್ಞರ ಸಮಿತಿ  ರಚನೆಯಾಗಿದ್ದು ವರದಿ ನೀಡಬೇಕಿದೆ ಎಂದರು.

 ಹಿಂಗಾರಿನ ಎರಡನೇ ಬೆಳೆಗೆ ನೀರು ಲಭ್ಯ- ತುಂಗಭದ್ರಾ ಜಲಾಶಯ ಮತ್ತೆ ತುಂಬಿದೆ. 101.77 ಟಿ.ಎಂ.ಸಿ ನೀರು ಲಭ್ಯವಿದೆ. ಮುಂಗಾರು ಮತ್ತು ಹಿಂಗಾರು ಬಿತ್ತನೆಗೆ ನೀರು ಸಿಗಲಿದೆ. ಕೊಚ್ಚಿಹೋಗಿದ್ದ 19 ನೇ ಕ್ರಸ್ಟ್ ಗೇಟ್ ನ್ನು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ , ಶಿವರಾಜ ತಂಗಡಗಿ, ಜಮೀರ್ ಅಹಮದ್ ಖಾನ್ ಅವರು ಸ್ಥಳದಲ್ಲಿಯೇ ಇದ್ದು ಗೇಟ್ ದುರಸ್ತಿ ಗೆ ಕ್ರಮ ವಹಿಸಿದರು.

ತಜ್ಞ ಕನ್ನಯ್ಯ ನಾಯ್ಡು ಅವರ ನೇತೃತ್ವದಲ್ಲಿ, ಜಿಂದಾಲ್, ನಾರಾಯಣ್ ಇಂಜಿನಿಯರಿಂಗ್  ಹಾಗೂ ಇಂಜಿನಿಯರ್ ಗಳು, ಅಧಿಕಾರಿಗಳು  ಹಗಲು ರಾತ್ರಿ ಕೆಲಸ ಮಾಡಿದ್ದರಿಂದ ಆದಷ್ಟು ತ್ವರಿತವಾಗಿ ಗೇಟ್ ಅಳವಡಿಸಲು ಸಾಧ್ಯವಾಯಿತು. ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಯಿತು.

20ಕ್ಕೂ ಹೆಚ್ಚು ಟಿ.ಎಂ.ಸಿ ನೀರು ಉಳಿಯಿತು. ಬೆಳೆಗೆ ನೀರು ಸಿಗುತ್ತದೋ ಇಲ್ಲವೋ ಎಂಬ ರೈತರ ಆತಂಕ ನಿವಾರಣೆಯಾಗಿದೆ. ಹಿಂಗಾರಿನ ಬೆಳೆಗೆ ಯಾವುದೇ ತೊಂದರೆ ಇಲ್ಲ. ಎರಡನೇ ಬೆಳೆಗೆ ನೀರು ಒದಗಿಸಲು ಪ್ರಯತ್ನಿಸಲಾಗುವುದು. 101 ಟಿಎಂಸಿ ಲಭ್ಯವಿರುವುದರಿಂದ ನೀರು ಲಭ್ಯವಾಗಬಹುದು  ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ರಸ್ತೆಗಳ ದುರಸ್ತಿ-
ನಮ್ಮ ಸರ್ಕಾರವಿದ್ದಾಗ ರಸ್ತೆಗಳ ನಿರ್ಮಾಣ ಮಾಡಿದ್ದೇವೆ. ಬಿಜೆಪಿ ಕಾಲದಲ್ಲಿ ರಸ್ತೆಗಳಾಗಿಲ್ಲ. ಈ ವರ್ಷ  ಉತ್ತಮ ಮಳೆಯಾಗಿರುವುದರಿಂದ ರಸ್ತೆಗಳು ಹಾಳಾಗಿವೆ ಅದರ ದುರಸ್ತಿ ಮಾಡಿಸಲಾಗುವುದು ಎಂದರು.


 ರಾಜ್ಯಪಾಲರ ಕಛೇರಿಯಿಂದಲೇ ಮಾಹಿತಿ ಸೋರಿಕೆ-
ಅರ್ಕಾವತಿ ಬಡಾವಣೆ ಬಗ್ಗೆ ರಾಜ್ಯಪಾಲರು ಸರ್ಕಾರಕ್ಕೆ  ಪತ್ರ ಬರೆದಿದ್ದರೆ ಸರ್ಕಾರ ಈ ಬಗ್ಗೆ ಗಮನಹರಿಸಲಿದೆ ಎಂದರು. ರಾಜ್ಯಪಾಲರ ಮಾಹಿತಿ ಸೋರಿಕೆಯಾಗಿದೆ ಎಂಬ ಬಗ್ಗೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ  ಬರೆದಿರುವ ಬಗ್ಗೆ  ಮಾತನಾಡಿ ರಾಜ್ಯಪಾಲರ ಕಛೇರಿಯಿಂದಲೇ ಸೋರಿಕೆಯಾಗಿರಬಹುದು ಎಂದರು. ಈ ಬಗ್ಗೆ ತನಿಖೆಯಾಗಲಿ ಎಂದರು. ಈ ಬಗ್ಗೆ ಪತ್ರಿಕೆಯಲ್ಲಿ ಓದಿ ತಿಳಿದಿದ್ದೇನೆ ಎಂದರು. ರೀ ಡೂ ಮಾಡಿ ಎಂದು ಬಿಡಿಎಗೆ ಸುಪ್ರೀಂ ಕೋರ್ಟ್ ಹೇಳಿದೆ ಎಂದು ತಿಳಿಸಿದರು.


ಹೈ-ಕಕ್ಕೆ ಸಂಬಂಧಿಸಿದ 46 ವಿಷಯಗಳ ತೀರ್ಮಾನ-ಕೊಪ್ಪಳ ಜಿಲ್ಲೆಯ ನಗರಸಭೆಯಲ್ಲಿ 8.5 ಕೋಟಿ ಬಾಕಿ ಕಾಮಗಾರಿಗಳ ಬಗ್ಗೆ ಮಾತನಾಡಿ ಕಲಬುರ್ಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 56 ವಿಷಯಗಳಲ್ಲಿ 46 ವಿಷಯಗಳು ಹೈದರಾಬಾದ್ ಕರ್ನಾಟಕಕ್ಕೆ ಸಂಬಂಧಿಸಿತ್ತು. ಇದರಲ್ಲಿ ಕೆಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದರು.

 ಹಾಲಿನ ದರ ಹೆಚ್ಚು ಮಾಡಿದರೆ ಅದು ಸಂಪೂರ್ಣವಾಗಿ ರೈತರಿಗೆ ವರ್ಗಾಯಿಸಲಾಗುವುದು ಮಾಗಡಿಯಲ್ಲಿ ಬಹಳ ಶಾಸಕರು, ರೈತರು ಹಸು ಸಾಕಣೆಯ ವೆಚ್ಚ ಹೆಚ್ಚಾಗಿದ್ದು  ಹಾಲಿನ ದರ ಹೆಚ್ಚಳ ಮಾಡಲು ಒತ್ತಾಯ ಮಾಡಿದರು. ಒಂದು ವೇಳೆ ಹಾಲಿನ ದರ ಹೆಚ್ಚಿಸುವ ಬಗ್ಗೆ ತೀರ್ಮಾನವಾದರೆ ಅದನ್ನು ಸಂಪೂರ್ಣವಾಗಿ ರೈತರಿಗೆ ಕೊಡಬೇಕೆಂದು ಹೇಳಿದ್ದೇನೆ ಎಂದರು.

 ಹಾಲಿನ ದರ ಹೆಚ್ಚು ಮಾಡಿದರೆ ಅದನ್ನು ಸಂಪೂರ್ಣವಾಗಿ ರೈತರಿಗೆ ವರ್ಗಾಯಿಸಬೇಕೆಂದು ಸೂಚಿಸಲಾಗಿದೆ ಎಂದರು. ಮುನಿರತ್ನ ಸುಳ್ಳು ಆರೋಪ- ಶಾಸಕ  ಮುನಿರತ್ನ ಅವರು ಸರ್ಕಾರ ಬಂಧಿಸಿರುವುದು ಕಿರುಕುಳ ನೀಡಲು ಹಾಗೂ ನನ್ನ ಆಪ್ತ ಬಳಗಕ್ಕೆ ಕಿರುಕುಳ ನೀಡಿ ಪ್ರಕರಣ ದಾಖಲಿಸುತ್ತಿದ್ದಾರೆ  ಎಂದು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ನಾವು ಯಾರ ಮೇಲೂ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದರು. 

ಅಪರಾಧ ಮಾಡಿ ಎಂದು ನಾವು ಯಾರಿಗೂ ಹೇಳಿಲ್ಲ. ಶಾಸಕರು ನನ್ನನ್ನು ಭೇಟಿ ಮಾಡಿ ಎಸ್.ಐ.ಟಿ ರಚಿಸಲು ಕೋರಿದರು. ಅವರ ಮೇಲೆ ಮೂರು ಪ್ರಕರಣಗಳು ದಾಖಲಾಗಿದೆ. ತಪ್ಪು ಮಾಡಿದರೆ ತಾನೇ  ಎಫ್ ಐ ಆರ್ ಆಗುವುದು ಎಂದರು. ನಾವು ಯಾರಿಗೂ ಕಿರುಕುಳ ನೀಡಿ ಕೇಸು ದಾಖಲಿಸಿಲ್ಲ ಈ ಆರೋಪ ಸುಳ್ಳು ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ