Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ
, ರಾಜ್ಯದ ಕೆಲ ಬೇಡಿಕೆಗಳ ಬಗ್ಗೆ ಮನವಿ ಪತ್ರ ಸಲ್ಲಿಸಿದರು.

ಅಲ್ಪಾವಧಿ ಬೆಳೆ ಸಾಲ ವಿತರಣೆಗೆ ಸಾಧ್ಯವಾಗುವಂತೆ ಪ್ರಸಕ್ತ ಸಾಲಿನಲ್ಲಿ ರಾಜ್ಯಕ್ಕೆ ಒದಗಿಸಿರುವ ನಬಾರ್ಡ್ ನೆರವು ಕಡಿತಗೊಳಿಸಿರುವುದರಿಂದ ರಾಜ್ಯದ ರೈತಾಪಿ ವರ್ಗ ಸಂಕಷ್ಟಕ್ಕೆ ಈಡಾಗಿದೆ. 2023 -24ರ ಸಾಲಿನಲ್ಲಿ 5,600 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿತ್ತು. 2024-25ರ ಸಾಲಿನಲ್ಲಿ 2,340 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ. ಇದರಿಂದಾಗಿ ನಬಾರ್ಡ್ ನೆರವು ಪ್ರಸಕ್ತ ಸಾಲಿನಲ್ಲಿ ಶೇ.58 ರಷ್ಟು ಕಡಿತವಾಗಿದೆ ಎಂದು ತಿಳಿಸಿದರು.

ರಾಜ್ಯವು ಹೆಚ್ಚುವರಿ ಬಡ್ಡಿ ಸಹಾಯಧನ ನೀಡದ ಹೊರತು, ಇದು ರಾಜ್ಯದ ರೈತಾಪಿ ವರ್ಗದ ಆರ್ಥಿಕ ವೆಚ್ಚದ ಮೇಲೆ ಗಂಭೀರ ಪರಿಣಾಮ ಬೀರುವುದಲ್ಲದೇ, ರಾಜ್ಯದ ಆರ್ಥಿಕ ಸ್ಥಿತಿಯ ಮೇಲೂ ಪರಿಣಾಮ ಬೀರಲಿದೆ. ಆದ್ದರಿಂದ ಈ ಕೂಡಲೇ ಇದನ್ನು ಪರಾಮರ್ಶಿಸಿ ನಬಾರ್ಡ್ ನೆರವು ಹೆಚ್ಚಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ರಾಜ್ಯದ ರೈತರು ಅಲ್ಪಾವಧಿ ಬೆಳೆ ಸಾಲಗಳನ್ನು ಪಡೆಯಲು ಯಾವುದೇ ರೀತಿಯ ತೊಂದರೆಯಾಗದಂತೆ ತಾವು ಹಣಕಾಸು ಸಚಿವಾಲಯಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಸಿಎಂ ಮನವಿ ಮಾಡಿದರು.

ಭದ್ರಾ ಯೋಜನೆ: ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ 2023-24ರ ಕೇಂದ್ರ ಬಜೆಟ್​​ನಲ್ಲಿ ಅನುಮೋದನೆಯಾಗಿರುವ 5,300 ಕೋಟಿ ರೂ. ಅನುದಾನ ಬಿಡುಗಡೆ ಮಾಡುವ ಕೇಂದ್ರ ಹಣಕಾಸು ಸಚಿವರ ಭರವಸೆ ಈವರೆಗೆ ಈಡೇರಿಲ್ಲ. ತ್ವರಿತ ನೀರಾವರಿ ಲಾಭ ಕಾರ್ಯಕ್ರಮದಡಿ ನೆರವು ಒದಗಿಸಲು ಸಚಿವ ಸಂಪುಟದ ಟಿಪ್ಪಣಿಯನ್ನು ಸಿದ್ದಮಾಡಿರುವ ಬಗ್ಗೆ ತಿಳಿದು ಬಂದಿದೆ.

ಪ್ರಸಕ್ತ ಯೋಜನೆ ಶೀಘ್ರ ಅನುಮೋದನೆಗೊಂಡಲ್ಲಿ ಭದ್ರಾ ಮೇಲ್ದಂಡೆ ಯೋಜನೆ ವ್ಯಾಪ್ತಿಗೆ ಒಳಪಡುವ ಮಧ್ಯ ಕರ್ನಾಟಕದ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಅನುಕೂಲವಾಗುತ್ತದೆ. ಆದ್ದರಿಂದ ಈ ಪ್ರಸ್ತಾವನೆಗೆ ಶೀಘ್ರ ಅನುಮೋದನೆ ನೀಡುವಂತೆ ಕೋರಿದರು.

ಕಳಸಾ ಬಂಡೂರಿ: ಕರ್ನಾಟಕ ರಾಜ್ಯದಲ್ಲಿ ನೀರಾವರಿ ಸೌಲಭ್ಯ ಸಾಮರ್ಥ್ಯಗಳನ್ನು ಸಬಲಗೊಳಿಸುವುದು ಅತ್ಯಗತ್ಯವಾಗಿದೆ. ಈ ಕಾರ್ಯವನ್ನು ಬಹುತೇಕ ರಾಜ್ಯವು ತನ್ನ ಸಂಪನ್ಮೂಲಗಳಿಂದಲೇ ಭರಿಸುತ್ತಿದೆ. ಆದರೆ, ಜಲ ಶಕ್ತಿ ಸಚಿವಾಲಯ ಹಾಗೂ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಗಳಲ್ಲಿ ಯೋಜನೆಗಳ ತೀರುವಳಿ ಬಾಕಿ ಇರುವುದು ನಮ್ಮ ಯೋಜನೆಗಳನ್ನು ವಿಳಂಬ ಮಾಡಿದೆ.

ಕಾವೇರಿ ನದಿ ಪಾತ್ರದ ಮೇಕೇದಾಟು ಯೋಜನೆ ಹಾಗೂ ಮಹದಾಯಿ ನದಿಯ ಕಳಸಾ ಬಂಡೂರಿ ಯೋಜನೆಗಳಗತ್ತ ತಾವು ತುರ್ತು ಗಮನ ಹರಿಸಬೇಕಿದೆ ಜಲಶಕ್ತಿ ಹಾಗೂ ಅರಣ್ಯ, ಪರಿಸರ ಸಚಿವಾಲಯಗಳಿಂದ ಶೀಘ್ರ ತೀರುವಳಿ ದೊರಕಿಸಿಕೊಡಲು ಸಿಎಂ ಕೋರಿದರು.

ಕರ್ನಾಟಕ ಅತ್ಯಂತ ವೇಗವಾಗಿ ನಗರೀಕರಣಗೊಳ್ಳುತ್ತಿರುವ ರಾಜ್ಯವಾಗಿದ್ದು, 13 ಮಹಾನಗರ ಪಾಲಿಕೆಗಳಿದ್ದು, ಈ ಎರಡನೇ ಸ್ತರದ ನಗರಗಳ ಅಭಿವೃದ್ಧಿಗೆ ಹೆಚ್ಚಿನ ಬಂಡವಾಳ ಅಗತ್ಯವಿದೆ. ಕರ್ನಾಟಕ ರಾಜ್ಯ ಸರ್ಕಾರ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಡಿ ಮುಂದಿನ ಮೂರು ವರ್ಷಗಳ ಅವಧಿಗೆ 2ಸಾವಿರ ಕೋಟಿ ರೂ. ಈ ಉದ್ದೇಶಕ್ಕಾಗಿ ತೆಗೆದಿರಿಸಿದೆ.

ಆದರೆ ಈ ನಗರಗಳಿಗೆ ಸಮಗ್ರ ಮೂಲಸೌಕರ್ಯಗಳನ್ನು ಕಲ್ಪಿಸಲು ಈ ಅನುದಾನ ಸಾಕಾಗುವುದಿಲ್ಲ. ಆದ್ದರಿಂದ ಅಮೃತ್ ಅಥವಾ ಇನ್ನಾವುದೇ ಯೋಜನೆಯಡಿ ಕರ್ನಾಟಕ ರಾಜ್ಯಕ್ಕೆ 10 ಸಾವಿರ ಕೋಟಿ ರೂ. ಬಿಡುಗಡೆ ಮಾಡುವಂತೆ ಕೇಂದ್ರ ನಗರಾಭಿವೃದ್ಧಿ ಇಲಾಖೆಗೆ ನಿರ್ದೇಶನ ನೀಡಲು ಮನವಿ ಮಾಡಿದರು.

ಪೆರಿಫೆರಲ್ ರಿಂಗ್ ರಸ್ತೆ: ಕರ್ನಾಟಕ ರಾಜ್ಯಕ್ಕೆ 15ನೇ ಹಣಕಾಸು ಆಯೋಗ ಸರಿಯಾದ ನ್ಯಾಯ ಒದಗಿಸುತ್ತಿಲ್ಲ ಎಂದು ನಾವು ನಿರಂತರವಾಗಿ ಪ್ರಸ್ತಾಪಿಸುತ್ತಾ ಬಂದಿದ್ದೇವೆ. ತೆರಿಗೆ ಹಂಚಿಕೆಯಲ್ಲಿ ರಾಜ್ಯದ ಪಾಲನ್ನು ಶೇ.1ರಷ್ಟು ಕಡಿಮೆ ಮಾಡಿರುವ ಶಿಫಾರಸನು ಹಣಕಾಸು ಇಲಾಖೆ ಸರಿಪಡಿಸಬೇಕಾಗಿದೆ.

ಹಣಕಾಸು ಆಯೋಗವು ರಾಜ್ಯಕ್ಕೆ ಹಂಚಿಕೆ ಕಡಿಮೆಯಾಗಿರುವುದಕ್ಕೆ ಪರಿಹಾರವಾಗಿ 5495 ಕೋಟಿ ರೂ. ಅನುದಾನ ಬಿಡುಗಡೆಗೆ ಮತ್ತು ಪೆರಿಫೆರಲ್ ರಿಂಗ್ ರಸ್ತೆ ಮತ್ತು ನೀರಿನ ಮೂಲಗಳ ಪುನರುಜ್ಜೀವನಕ್ಕೆ 6ಸಾವಿರ ಕೋಟಿ ರೂ. ವಿಶೇಷ ಅನುದಾನ ನೀಡುವ ಬಗ್ಗೆ ಶಿಫಾರಸು ಮಾಡಿದೆ. ಕನಿಷ್ಠಪಕ್ಷ ಹಣಕಾಸು ಆಯೋಗ ಈ ಎರಡು ಶಿಫಾರಸುಗಳನ್ನು ಒಪ್ಪಿಕೊಳ್ಳಬೇಕಾಗಿದೆ. ನಾವು ಇನ್ನೂ 15ನೇ ಹಣಕಾಸು ಆಯೋಗದ ಅವಧಿಯಲ್ಲಿರುವುದರಿಂದ ರಾಜ್ಯಕ್ಕೆ ಹೆಚ್ಚುವರಿ ಅನುದಾನ ಒದಗಿಸಲು ಹಣಕಾಸು ಇಲಾಖೆಗೆ ನಿರ್ದೇಶನ ನೀಡುವಂತೆ ಸಿದ್ದರಾಮಯ್ಯ ಮನವಿ ಮಾಡಿದರು.

 16ನೇ ಹಣಕಾಸು ಆಯೋಗದ ಅವಧಿಯಲ್ಲಿ ಕೇಂದ್ರದ ತೆರಿಗೆ ಪಾಲಿಗೆ ಹೆಚ್ಚಿನ ದೇಣಿಗೆ ಒದಗಿಸುವ ರಾಜ್ಯಗಳಿಗೆ, ಕೇಂದ್ರದ ತೆರಿಗೆ ಪಾಲಿನಲ್ಲಿ ಭಾರೀ ಕಡಿತ ಮಾಡಿ ಶಿಕ್ಷಿಸದಂತೆ, ಹಣಕಾಸು ಇಲಾಖೆ ಖಾತ್ರಿಪಡಿಸಬೇಕು. ನಮ್ಮ ಮನವಿಗೆ ಸೂಕ್ತ ಪ್ರತಿಕ್ರಿಯೆ ದೊರಕುವ ನಿರೀಕ್ಷೆ ನಮ್ಮದು ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ