Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶುಚಿತ್ವದ ಇತರ ನೌಕರರನ್ನೂ ಖಾಯಂಗೊಳಿಸಲಾಗುವುದು-ಸಿದ್ದರಾಮಯ್ಯ ಭರವಸೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪೌರಕಾರ್ಮಿಕರು ಪ್ರಸ್ತುತ  ಖಾಯಂ ಮಾಡಲಾಗಿದ್ದು
, ಮುಂದಿನ ದಿನಗಳಲ್ಲಿ ಸುಮಾರು 9000 ಸಂಖ್ಯೆಯಷ್ಟಿರಬಹುದಾದ ವಾಹನಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಿಬಿಎಂಪಿ ವತಿಯಿಂದ ಆಯೋಜಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಹಾಗೂ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಿಸಿದ ನಂತರ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

ಪೌರಕಾರ್ಮಿಕರು ಮುಕ್ತ-
ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ, ಪೌರಕಾರ್ಮಿಕರನ್ನು  ಗುತ್ತಿಗೆದಾರರು ಶೋಷಣೆ ಮಾಡುತ್ತಿದ್ದು, ನ್ಯಾಯಯುತವಾದ ಸಂಬಳ ಕೊಡದೇ ಇದ್ದುದ್ದನ್ನು ಗಮನಿಸಿದ್ದೆ. ಅದಕ್ಕಾಗಿ ಶೋಷಣೆಗೊಳಗಾದ ಪೌರಕಾರ್ಮಿಕರ ಸಹಾಯಕ್ಕಾಗಿ ಕನಿಷ್ಟ ವೇತನ ಕಾಯ್ದೆ ಪ್ರಕಾರ ದೊರೆಯಬೇಕಾದ ಕನಿಷ್ಟ ಸಂಬಳವನ್ನು ಕಡ್ಡಾಯವಾಗಿ ದೊರೆಯುವ ವ್ಯವಸ್ಥೆಯನ್ನು ಮಾಡಿದೆ. ಮೊದಲು 7000 ರೂ. ದೊರೆಯುತ್ತಿದ್ದ ಸಂಬಳವನ್ನು 17000 ಕ್ಕೆ ಹೆಚ್ಚಿಸಿ, ನೇರವಾಗಿ ಬ್ಯಾಂಕ್ ಖಾತೆಗೆ ಪಾವತಿಯಾಗುವ  ವ್ಯವಸ್ಥೆ ಮಾಡಲಾಯಿತು. ಈ ರೀತಿ ಪೌರಕಾರ್ಮಿಕರಿಗೆ ಮದ್ಯವರ್ತಿಗಳ ಹಾವಳಿಯಿಂದ ಮುಕ್ತಗೊಳಿಸಲಾಯಿತು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಪೌರಕಾರ್ಮಿಕರ ಬೇಡಿಕೆ ಈಡೇರಿಸಿದ್ದು ಕಾಂಗ್ರೆಸ್ ಸರ್ಕಾರ-
ವಿರೋಧ ಪಕ್ಷದ ನಾಯಕನಾಗಿದ್ದ ಸಂದರ್ಭದಲ್ಲಿ ಪೌರಕಾರ್ಮಿಕರ ಬಹುದಿನಗಳ ಬೇಡಿಕೆಯಾಗಿದ್ದ ಖಾಯಂ ನೇಮಕಾತಿ ಬೆಂಬಲಿಸಿ
, ಆಗಿನ ಸರ್ಕಾರ ಖಾಯಂ ನೇಮಕಾತಿ ಬೇಡಿಕೆಯನ್ನು ಈಡೇರಿಸದಿದ್ದಲ್ಲಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಪೌರ ಕಾರ್ಮಿಕರ ಈ ಬೇಡಿಕೆಯನ್ನು ಪೂರೈಸುವುದಾಗಿ ನೀಡಲಾಗಿದ್ದ ಭರವಸೆಯನ್ನು ಇಂದು ಈಡೇರಿಸಲಾಗಿದೆ. ಇದರಿಂದ 4ನೇ ದರ್ಜೆಯ ಪೌರಕಾರ್ಮಿಕನ ವೇತನ, ಅವರ ಖಾತೆಗೆ ನೇರವಾಗಿ 39000 ರೂ.ಗಳು ಪಾವತಿಯಾಗಲಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಕಾಯಕದಲ್ಲಿ ಮೇಲು-ಕೀಳು ಇಲ್ಲ-
ಶುಚಿತ್ವದಲ್ಲಿ ದೈವತ್ವವನ್ನು ಕಾಣಬೇಕು ಎಂದು ಮಹಾತ್ಮಾಗಾಂಧೀಜಿಯವರು ನುಡಿದಿದ್ದರು. ಪರಿಸರದ ಸ್ವಚ್ಛತೆ ಕಾಪಾಡುವುದು ಶ್ರೇಷ್ಠವಾದ ಕೆಲಸ. ಬಸವಣ್ಣನವರು ಕಾಯಕವೇ ಕೈಲಾಸ ಎಂದು ತಿಳಿಸಿದ್ದು
, ಯಾವುದೇ ಕೆಲಸದಲ್ಲಿ ಮೇಲು ಕೀಳೆಂಬುದು ಇಲ್ಲ ಎಂದು ಅವರು ತಿಳಿಸಿದರು.



ಪೌರಕಾರ್ಮಿಕರ ಮಕ್ಕಳು ಮುಖ್ಯವಾಹಿನಿಗೆ ಬರುವಂತಾಬೇಕು-
1000 ಪೌರಕಾರ್ಮಿಕರನ್ನು ವಿದೇಶಕ್ಕೆ ಕಳಿಸುವ ಯೋಜನೆ ಸೇರಿದಂತೆ ಹಲವಾರು ಕಲ್ಯಾಣ ಯೋಜನೆಗಳನ್ನು ಪೌರಕಾರ್ಮಿಕರಿಗಾಗಿ ಹಮ್ಮಿಕೊಳ್ಳಲಾಗಿದೆ. ಪೌರಕಾರ್ಮಿಕರು, ಅವರ ಕುಟುಂಬದವರೂ  ಮುಖ್ಯವಾಹಿನಿಗೆ ಬರಬೇಕು. ತನ್ಮೂಲಕ ಸಮಸಮಾಜವನ್ನು ನಿರ್ಮಿಸುವ ಉದ್ದೇಶ ಸರ್ಕಾರದ್ದಾಗಿದೆ. ರಾಜ್ಯದ ಎಲ್ಲ ವರ್ಗದ ಜನರಿಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಾನತೆ ದೊರೆಯುವಂತಾಗಬೇಕು. ಪೌರಕಾರ್ಮಿಕ ವರ್ಗದ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸರ್ಕಾರಕ್ಕೆ ಬೆಂಬಲವಾಗಿ ನಿಲ್ಲಬೇಕೆಂದು ಕೋರಿದರು. ಪೌರಕಾರ್ಮಿಕರ ಮಕ್ಕಳು ವಿದ್ಯಾವಂತರಾಗಿ ಸಮಾಜದ ಮುಖ್ಯವಾಹಿನಿಗೆ ಬರುವಂತಾಬೇಕು. ಸಾರ್ವಜನಿಕರೂ ತಮ್ಮ ಪರಿಸರದ ಸ್ವಚ್ಛತೆ ಬಗ್ಗೆ ಸ್ವಯಂಪ್ರೇರಣೆಯಿಂದ ಗಮನಹರಿಸಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ