Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿ.ಸರೋಜಾದೇವಿ ಒಬ್ಬ ಮೇರು ನಟಿ. ಪಂಚಭಾಷೆ ತಾರೆಯಾಗಿ ಕನ್ನಡ
, ತಮಿಳು, ತೆಲುಗು, ಹಿಂದಿ ಭಾಷೆಗಳಲ್ಲಿ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅದ್ಭುತ ನಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬಿ.ಸರೋಜಾದೇವಿ ಅವರ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳಿಗೆ ಮುಖ್ಯಮಂತ್ರಿ ಅವರು ಪ್ರತಿಕ್ರಿಯೆ ನೀಡಿ, ಅನೇಕ ಬಾರಿ ಸರೋಜಾದೇವಿಯವರನ್ನು ಭೇಟಿ ಮಾಡಿದ್ದೇನೆ.


ಎಲ್ಲರೊಂದಿಗೆ ಆತ್ಮೀಯವಾಗಿ, ಪ್ರೀತಿಯಿಂದ ಮಾತನಾಡುತ್ತಿದ್ದರು. ದೊಡ್ಡ ವ್ಯಕ್ತಿತ್ವವಿದ್ದ ನಟಿ ಅವರು. ಅವರ ಸಿನಿಮಾಗಳಲ್ಲಿ ಮಲ್ಲಮ್ಮನ ಪವಾಡ, ಕಿತ್ತೂರು ಚೆನ್ನಮ್ಮ, ಭಾಗ್ಯವಂತರು, ಬಬ್ರುವಾಹನ, ನ್ಯಾಯವೇ ದೇವರು ಸೇರಿದಂತೆ ಅನೇಕ ಚಿತ್ರಗಳನ್ನು ನಾನು ನೋಡಿದ್ದೇನೆ ಎಂದು ತಿಳಿಸಿದರು.

ಬಹುಭಾಷಾ ನಟಿ ಬಿ.ಸರೋಜಾದೇವಿ ಅವರ ನಿಧನ ಇಡೀ ಚಿತ್ರರಂಗಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಚಿಕ್ಕವಯಸ್ಸಿನಲ್ಲಿಯೇ ಸಿನಿಮಾರಂಗವನ್ನು ಪ್ರವೇಶಿಸಿ ಏಳು ದಶಕಗಳ ಕಾಲ ಕಲಾವಿದೆಯಾಗಿದ್ದವರು. ಅಭಿನವ ಸರಸ್ವತಿ ಎಂಬ ಬಿರುದು ಚಿಕ್ಕವಯಸ್ಸಿಗೆ ದೊರೆತಿತ್ತು.  ಎಲ್ಲಾ ಭಾಷೆಯ ಹೆಸರಾಂತ ನಟರೊಂದಿಗೆ ನಟಿಸಿದ್ದರು. ದಿಲೀಪ್ ಕುಮಾರ್, ರಾಜೇಂದ್ರ ಕುಮಾರ್, ದೇವ್ ಆನಂದ್, ಎಂ.ಜಿ.ಆರ್, ಎನ್.ಟಿ.ಆರ್, ಶಿವಾಜಿ ಗಣೇಶನ್, ರಾಜ್ ಕುಮಾರ್ ಅವರೊಂದಿಗೂ ಅನೇಕ ಚಿತ್ರಗಳಲ್ಲಿ ನಟಿಸಿದ್ದರು ಎಂದು ಸಿದ್ದರಾಮಯ್ಯ ತಿಳಿಸಿದರು.

ಸರೋಜಾದೇವಿಯವರು ಯಾವುದೇ ಪಾತ್ರಕ್ಕೂ ಜೀವ ತುಂಬುತ್ತಿದ್ದರು. ಖಾಸಗಿ ಜೀವನದಲ್ಲಿಯೂ ಶಿಸ್ತುಬದ್ಧ ಜೀವನವನ್ನು ನಡೆಸಿದವರು. ಕನ್ನಡ ಚಿತ್ರರಂಗ ಬೆಳೆಯಲು ಅಪಾರ ಕೊಡುಗೆಯನ್ನು ಕೊಟ್ಟಿದ್ದಾರೆ. ಅವರ ಸಾವಿನಿಂದ ಚಿತ್ರರಂಗಕ್ಕೆ ಅಪಾರವಾದ ನಷ್ಟವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬ ವರ್ಗದವರಿಗೆ ಅವರ ಸಾವಿನಿಂದಾದ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ.

ಮೃತರ ಅಂತ್ಯಸಂಸ್ಕಾರವನ್ನು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಗುವುದು. ಅವರ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಸರೋಜಾದೇವಿಯವರ ಹೆಸರನ್ನು ಅವರು ವಾಸಿಸುತ್ತಿದ್ದ ರಸ್ತೆಗೆ ಇಡುವ ಬಗ್ಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಜೊತೆ ಚರ್ಚಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ