Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ನವೆಂಬರ್ 2ಕ್ಕೆ ರಾಹುಲ್ ಗಾಂಧಿ ಭೇಟಿಯಾಗಲಿರುವ ಸಿದ್ದರಾಮಯ್ಯ: 'ಸ್ಟಿಂಗ್' ಷಡ್ಯಂತ್ರದ ಕುರಿತು ಚರ್ಚೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಂಡಳಿ ಸದಸ್ಯ ಸಿದ್ದರಾಮಯ್ಯ ಅವರು, ತಮ್ಮ ವಿರುದ್ಧ ನಡೆದಿದೆ ಎನ್ನಲಾದ ನಕಲಿ 'ಸ್ಟಿಂಗ್ ಆಪರೇಷನ್' ಮತ್ತು ರಾಜಕೀಯ ಷಡ್ಯಂತ್ರದ ಕುರಿತು ಚರ್ಚಿಸಲು ನವೆಂಬರ್ 2ರಂದು ನವದೆಹಲಿಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿ ಪ್ರವಾಸ ಹಾಗೂ ಭೇಟಿಯ ಹಿನ್ನೆಲೆ: ಅಖಿಲ ಭಾರತ ಕಾಂಗ್ರೆಸ್ ಸಮಿತಿ ನವೆಂಬರ್ 1ರಂದು ನವದೆಹಲಿಯಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಳ್ಳಲು ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದಾರೆ.

ಇದೇ ವೇಳೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಸಮಯ ಕೋರಲಾಗಿತ್ತು. ಸಿದ್ದರಾಮಯ್ಯ ಅವರ ಮನವಿಗೆ ಸ್ಪಂದಿಸಿರುವ ರಾಹುಲ್ ಗಾಂಧಿ ಅವರು ನವೆಂಬರ್ 2ರಂದು ಭೇಟಿಯಾಗಲು ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ.

ಕರ್ನಾಟಕದಲ್ಲಿ ರಾಜಕೀಯ ಕಾವು:ಸಿದ್ದರಾಮಯ್ಯ ಅವರ ವಿರುದ್ಧ ನಡೆದಿದೆ ಎನ್ನಲಾದ ಸ್ಟಿಂಗ್ ಕಾರ್ಯಾಚರಣೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ. "ನನ್ನ ವರ್ಚಸ್ಸಿಗೆ ಧಕ್ಕೆ ತರುವ ಹಾಗೂ ನಕಲಿ ವಿಡಿಯೊ ಮೂಲಕ ಬ್ಲ್ಯಾಕ್‌ಮೇಲ್ ಮಾಡುವ ದುರುದ್ದೇಶದಿಂದ ಈ ಷಡ್ಯಂತ್ರ ರೂಪಿಸಲಾಗಿದೆ. ಇದರ ಹಿಂದೆ ದೊಡ್ಡ ಜಾಲವೇ ಕೆಲಸ ಮಾಡುತ್ತಿದೆ" ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸಿಸಿಬಿ ತನಿಖೆ ತೀವ್ರ:ಸಿದ್ದರಾಮಯ್ಯ ಅವರು ಈ ಕುರಿತು ಈಗಾಗಲೇ ಅಧಿಕೃತವಾಗಿ ದೂರು ದಾಖಲಿಸಿದ್ದು, ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ವಿಡಿಯೊ ಪ್ರಸಾರವಾದ ಮೂಲ, ನಕಲಿ ವಿಡಿಯೊ ತುಣುಕುಗಳನ್ನು ಸೃಷ್ಟಿಸಿದವರು ಹಾಗೂ ಇದರ ಹಿಂದಿರುವ ರೂವಾರಿಗಳನ್ನು ಪತ್ತೆಹಚ್ಚಲು ಸಿಸಿಬಿ ಪೊಲೀಸರು ತೀವ್ರ ಜಾಲ ಬೀಸಿದ್ದಾರೆ.  

ಈ ಭೇಟಿಯ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್‌ನ ಪ್ರಚಲಿತ ರಾಜಕೀಯ ಬೆಳವಣಿಗೆಗಳು ಹಾಗೂ ಪ್ರಕರಣದ ಕಾನೂನು ಹೋರಾಟದ ಕುರಿತು ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರಿಗೆ ವಿವರಣೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಿರಿಯೂರು-ಧರ್ಮಪುರ ಮಾರ್ಗದಲ್ಲಿ KSRTC ಚಾಲಕನ ಉದ್ಧಟತನ: ಖಾಸಗಿ ಬಸ್‌ಗಳಿಗೆ ಲಾಭ ಮಾಡಿಕೊಡಲು ಸಾರಿಗೆ ಸಂಸ್ಥೆಗೆ ಆರ್ಥಿಕ ಕನ್ನ?ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಕಿರಿಯ ಮಗಳ ಅದ್ಧೂರಿ ವಿವಾಹ: 14 ವರ್ಷಗಳ ಪ್ರೀತಿಗೆ ಶುಭಂ ಎಂದ ನವಜೋಡಿ!ರೂಢಿಯ ಗೋಡೆಯಾಚೆ ಚಿಂತನೆಯ ಹೊಸ ಕಿಟಕಿ ತೆರೆಯಲಿಮಹರ್ಷಿ ವಾಲ್ಮೀಕಿ — ವ್ಯಕ್ತಿತ್ವದ ಉನ್ನತಿಗೆ ಜ್ಞಾನದ ದಾರಿದೀಪನವೆಂಬರ್ 2ಕ್ಕೆ ರಾಹುಲ್ ಗಾಂಧಿ ಭೇಟಿಯಾಗಲಿರುವ ಸಿದ್ದರಾಮಯ್ಯ: 'ಸ್ಟಿಂಗ್' ಷಡ್ಯಂತ್ರದ ಕುರಿತು ಚರ್ಚೆಎಸ್‌ಸಿ-ಎಸ್‌ಟಿ ಕಾಯ್ದೆ ಅನ್ವಯಕ್ಕೆ 'ಜಾತಿ ಆಧಾರಿತ ಅವಮಾನ'ದ ಸ್ಪಷ್ಟ ಆರೋಪ ಕಡ್ಡಾಯ: ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪುಪ್ರಧಾನಿ ಮೋದಿಗೆ ಹೇಳಿ ಜ್ಞಾನೇಶ್ ಕುಮಾರ್ ವಜಾ ಮಾಡಿಸಿ, 30 ಸೆಕೆಂಡುಗಳಲ್ಲಿ ಪ್ರತಿಭಟನೆ ವಾಪಸ್: ರಾಹುಲ್ದೆಹಲಿಯ ನಾರ್ತ್ ಬ್ಲಾಕ್ ಕಟ್ಟಡದಲ್ಲಿ ಬೆಂಕಿ ಅವಘಡ: ಆರು ಅಗ್ನಿಶಾಮಕ ವಾಹನಗಳಿಂದ ಕಾರ್ಯಚರಣೆಖರ್ಗೆ ಹೇಳಿಕೆ ಕ್ಷಮಾರ್ಹವಲ್ಲ: ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶಕನ್ನಡಿಗರಿಗೆ ಉದ್ಯೋಗ: ಕೌಶಲ ಅಭಿವೃದ್ಧಿಗೆ ಮೋಹನ್ ದಾಸ್ ಪೈ ಆಗ್ರಹ