Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನ ಅನಾವರಣ ಮಾಡಿದ ಸಿದ್ದರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೀದರ್ ಜಿಲ್ಲೆಯಲ್ಲಿ ಮಾರ್ಚ್‌ನಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸಂಘಟಿಸುವ 40ನೇ ರಾಜ್ಯ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಗುರುವಾರ ಅನಾವರಣ ಮಾಡಿದರು.


ಈ ಸಂದರ್ಭದಲ್ಲಿ ಅರಣ್ಯ ಸಚಿವ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾದ ಈಶ್ವರ ಬಿ ಖಂಡ್ರೆ ಅವರು ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಸಮ್ಮೇಳನಕ್ಕೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷ ಎಚ್.ಬಿ.ಮದನಗೌಡ, ಪ್ರಧಾನ ಕಾರ್ಯದರ್ಶಿ ಲೋಕೇಶ್, ಕಾರ್ಯದರ್ಶಿ ಸೋಮಶೇಖರ ಕೆರಗೋಡು, ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ್ ದೇವಪ್ಪ, ಬಾಬುವಾಲಿ, ಶಿವಕುಮಾರಸ್ವಾಮಿ, ಪೃಥ್ವಿ ಮತ್ತಿತರರು ಪಾಲ್ಗೊಂಡಿದ್ದರು.

ಅರ್ಥಪೂರ್ಣ ಸಮ್ಮೇಳನವಾಗಿಸಲು ಶ್ರಮಿಸಿ:
ವಿಕಾಸಸೌಧದ ತಮ್ಮ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) 40ನೇ ರಾಜ್ಯ ಸಮ್ಮೇಳನದ ಲಾಂಛನವನ್ನು ಸಚಿವ ಈಶ್ವರ ಖಂಡ್ರೆ ಅವರು ಮತ್ತೊಮ್ಮೆ ಬಿಡುಗಡೆ ಮಾಡಿ
, ಬೀದರ್ ಜಿಲ್ಲಾ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಸಿದ್ದೂಪಾಟೀಲ್ ಸಮ್ಮುಖದಲ್ಲಿ ರಾಜ್ಯ ಸಂಘಕ್ಕೆ ಹಸ್ತಾಂತರಿಸಿದರು. ಎರಡು ದಶಕಗಳ ಬಳಿಕ ಬೀದರ್‌ನಲ್ಲಿ ನಡೆಯುತ್ತಿರುವ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಅರ್ಥಪೂರ್ಣ ಸಮ್ಮೇಳನವಾಗಿಸಲು ಶ್ರಮಿಸುವಂತೆ ಸಚಿವರು ಕರೆ ನೀಡಿದರು.



ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಲೋಕೇಶ್, ಕಾರ್ಯದರ್ಶಿ ಸೋಮಶೇಖರ ಕೆರಗೋಡು, ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ್ ದೇವಪ್ಪ, ಬಾಬುವಾಲಿ, ಶಿವಕುಮಾರಸ್ವಾಮಿ, ದೀಪಕ್ ವಾಲಿ, ಮಾಳಪ್ಪ ಅಡಸಾರೆ, ಸಿದ್ರಾಮಯ್ಯ ಸ್ವಾಮಿ, ಪೃಥ್ವಿರಾಜ್, ಬಸವರಾಜ ಪವಾರ್, ವಿಜಯಕುಮಾರ ಅಷ್ಟುರೆ ಮತ್ತಿತರರು ಪಾಲ್ಗೊಂಡಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ