Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕರಾಗಿದ್ದರು: ಸಿದ್ದರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ‌ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಯ ಮುಂಭಾಗ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಂತ ಕನಕದಾಸರ ಜಯಂತಿಯನ್ನು ಸರ್ಕಾರ ಶ್ರದ್ಧಾಭಕ್ತಿಗಳಿಂದ ರಾಜ್ಯಾದ್ಯಂತ ಆಚರಿಸುತ್ತಿದೆ. ಕನಕದಾಸರ ಸಂದೇಶಗಳನ್ನು ಈ ನಾಡಿನ ಜನತೆಗೆ ತಿಳಿಸುವಂತಹ ಪ್ರಯತ್ನವನ್ನು  ಮಾಡುತ್ತಿದೆ ಎಂದರು.

ಕನಕದಾಸರು ವಿಶ್ವಮಾನವರು-
ಕನಕದಾಸರು ಸಮಾಜದಲ್ಲಿ ಬದಲಾವಣೆಯನ್ನು ತರಲು ಬಯಸಿದ್ದರು.  ಶ್ರೀಕೃಷ್ಣನ ಮಹಾ ಭಕ್ತರಾಗಿದ್ದು ಉಡುಪಿಯಲ್ಲಿ  ಕನಕನ ಕಿಂಡಿ ನಿರ್ಮಾಣವಾಗಲು ಕಾರಣರಾದರು. ಅಂಥವರ ಜನ್ಮ ದಿನವನ್ನು ಇಂದು ಆಚರಿಸುವ ಮೂಲಕ ಜನತೆಗೆ ಕನಕದಾಸರ ಬಗ್ಗೆ ಜನರಿಗೆ ತಿಳಿಸಿಕೊಡಲಾಗುತ್ತಿದೆ. ಅವರು ಆಕಸ್ಮಿಕವಾಗಿ ಕುರುಬ ಜನಾಂಗದಲ್ಲಿ ಹುಟ್ಟಿದ್ದರೂ ವಿಶ್ವಮಾನವರಾದರು ಎಂದರು.

"ಕುಲಕುಲ ವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ"  ಎಂದು ಹೇಳಿ ಮನುಷ್ಯರೆಲ್ಲರೂ ಒಂದೇ ಎಂದು ಸಾರಿದರು. ತಮ್ಮ ಕೀರ್ತನೆ, ಹಾಡುಗಳ ಮೂಲಕ ಈ ಸಂದೇಶವನ್ನು ತಿಳಿಸಿದ್ದಾರೆ. ಅವರನ್ನು ಗೌರವಿಸಿ ಸ್ಮರಿಸುವ ಕೆಲಸವನ್ನು ಸರ್ಕಾರ ಇಂದು ಮಾಡುತ್ತಿದೆ ಎಂದರು.

ಪ್ರತಿ ಟನ್ ಕಬ್ಬಿಗೆ 3300 ದರ ನಿಗದಿ-
ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರೊಂದಿಗೆ  ಚರ್ಚಿಸಿ ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರದ ಬಗ್ಗೆ ಮಾಜಿ ಸಚಿವ ಮುರುಗೇಶ್ ನಿರಾಣಿ ಸೇರಿದಂತೆ  ಸಕ್ಕರೆ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿ ಅವರೆಲ್ಲರ ಸಮ್ಮುಖದಲ್ಲಿಯೇ ಈ ತೀರ್ಮಾನವಾಗಿದೆ. ಜೂನ್ ನಲ್ಲಿ ಜಿಲ್ಲಾಧಿಕಾರಿಗಳು ಹೇಳುವವರಿಗೆ 3200 ರೂ.ಗಳಿಗೆ ಅವರು ಒಪ್ಪಿರಲಿಲ್ಲ.

ನಂತರದಲ್ಲಿ ಒಪ್ಪಿಕೊಂಡರು.50 ರೂ.ಗಳನ್ನು ಕಾರ್ಖಾನೆ ಮಾಲೀಕರು ಕೊಡಬೇಕೆಂದು ಬಹಳ ಸ್ಪಷ್ಟವಾಗಿ ಹೇಳಲಾಗಿದೆ. ಸರ್ಕಾರ 50 ರೂ. ಪ್ರೋತ್ಸಾಹಧನ  ಪಾವತಿಸಲಿದೆ. 10.25  ರಿಕವರಿ ಇದ್ದರೆ  3100 ರೂ.ಜೊತೆಗೆ 100 ರೂ.ಗಳು, ಹಾಗೂ  11.25 ರಿಕವರಿ ಇದ್ದರೆ 3200 ಜೊತೆಗೆ  100 ರೂ. ಸೇರಿದಂತೆ ಒಟ್ಟು 3300  ಒದಗಿಸಲಾಗುವುದು ಎಂದರು. 

ಆದೇಶ ಹೊರಡಿಸಲಾಗುವುದು-
ಈ ಬಗ್ಗೆ ಸರ್ಕಾರದ  ಆದೇಶ ಹೊರಡಿಸಲಾಗುವುದು. ಸಚಿವ ಶಿವಾನಂದ ಪಾಟೀಲರು ಅಲ್ಲಿಯೇ ಘೋಷಣೆ ಮಾಡಲಿದ್ದಾರೆ ಎಂದರು.

ಪ್ರತ್ಯೇಕ ಸಭೆ-
ಸರ್ಕಾರ ಬೇರೆ ವಿಚಾರಗಳ ಬಗ್ಗೆ ಪ್ರತ್ಯೇಕ ಸಭೆ ನಡೆಸಲು ತೀರ್ಮಾನಿಸಿದೆ ಎಂದು ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದರು.

ಕೈದಿಗಳಿಗೆ ರಾಜಾಥಿತ್ಯ: ಪರಿಶೀಲನೆ
ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜಾಥಿತ್ಯ ದೊರಕುತ್ತಿರುವ ಬಗ್ಗೆ ವೀಡಿಯೋ ವೈರಲ್ ಆಗಿರುವ ಬಗ್ಗೆ  ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ