Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಖರ್ಗೆ ಮತ್ತು ಪ್ರಿಯಾಂಕ ಗಾಂಧಿ ಅವರನ್ನು ಸ್ವಾಗತಿಸಿದ ಸಿದ್ದರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಜೈ ಬಾಪು-ಜೈ ಭೀಮ್-ಜೈ ಸಂವಿಧಾನ ಅಭಿಯಾನದ ಉದ್ಘಾಟನೆಗೆ ಆಗಮಿಸಿದ ಎಐಸಿಸಿ
ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕಿ ಸಂಸದೆ ಪ್ರಿಯಾಂಕ ಗಾಂಧಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ವಿಶೇಷ ವಿಮಾನದಲ್ಲಿ ದೆಹಲಿಯಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ, ಗೃಹ ಸಚಿವ ಡಾ. ಜಿ. ಪರಮೇಶ್ವರ ಸೇರಿ ಮತ್ತಿತರ ನಾಯಕರು ಸ್ವಾಗತಿಸಿದರು.

ಸಮಾವೇಶಕ್ಕೆ ರಾಹುಲ್ ಗಾಂಧಿ ಬರಲ್ಲ: ರಾಹುಲ್ ಗಾಂಧಿಗೆ ಹುಷಾರಿಲ್ಲದ ಕಾರಣ ಅವರು ಸಮಾವೇಶಕ್ಕೆ ಬರುತ್ತಿಲ್ಲ. ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಸೇರಿ ಮತ್ತಿತರ ನಾಯಕರು ಬರುತ್ತಿದ್ದಾರೆ. ಹಾಗಾಗಿ, ಸಮಾವೇಶದಿಂದ ರಾಹುಲ್ ಗಾಂಧಿ ದೂರ ಎಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡುತ್ತಿರುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಗರಂ ಆದರು.

 ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ, ಇಡೀ ವರ್ಷ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನ ಮಾಡುತ್ತಿದ್ದೇವೆ. ಗಾಂಧೀಜಿ ಅವರ ತತ್ವಾದರ್ಶಗಳು ಜನಸಾಮಾನ್ಯರಿಂದ ದೂರ ಆಗುತ್ತಿವೆ. ಹಾಗಾಗಿ, ಮತ್ತೆ ಅವುಗಳನ್ನು ಜನರ ಮನಸ್ಸಿನಲ್ಲಿ ಪುನರ್ ಸ್ಥಾಪಿಸುವ ಉದ್ದೇಶ ಹೊಂದಿದ್ದೇವೆ. ಗಾಂಧೀಜಿ ಮತ್ತು ಅವರ ವಿಚಾರಧಾರೆಗಳು ಇವತ್ತಿಗೂ ಪ್ರಸ್ತುತವಾಗಿವೆ ಎಂದರು.

ಗಾಂಧೀಜಿ ಅವರು ಸೌಹಾರ್ದತೆ ಇರಬೇಕು. ಸಮಾನತೆ ಬರಬೇಕು. ಅಸ್ಪೃಶ್ಯತೆ ನಿವಾರಣೆ ಆಗಬೇಕು. ಮಹಿಳೆಯರಿಗೆ ಸ್ವಾತಂತ್ರ್ಯ ಸಿಗಬೇಕು ಮತ್ತು ಅವರ ರಕ್ಷಣೆ ಆಗಬೇಕು ಎಂದು ಪ್ರತಿಪಾದಿಸಿದ್ದರು. ಬಸವಣ್ಣ, ಗಾಂಧೀಜಿ, ಕನಕದಾಸರು ಹೇಳಿದ ವಿಚಾರಗಳನ್ನೇ ಸಂವಿಧಾನದಲ್ಲಿ ಅಳವಡಿಸಲಾಗಿದೆ ಎಂದು ತಿಳಿಸಿದರು.ಸಂವಿಧಾನ, ಗಾಂಧೀಜಿ, ಅಂಬೇಡ್ಕರ್ ಅವರನ್ನು ವಿರೋಧಿಸುವ ಕೆಲಸ ಆಗುತ್ತಿದೆ. ಇದನ್ನು ತಡೆಗಟ್ಟುವುದು ಕಾಂಗ್ರೆಸ್ ಪಕ್ಷದ ಜವಾಬ್ದಾರಿಯಾಗಿದೆ. ನಾವು ಸಂವಿಧಾನದ ಪರವಾಗಿ ಇದ್ದರೆ, ಬಿಜೆಪಿಗರು ಮನುವಾದ ಪರವಾಗಿದ್ದಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

ಐದು ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ, ಅತ್ಯಾಚಾರ ಪ್ರಕರಣಗಳು ನಡೆಯಬಾರದು. ಮಹಿಳೆಯರಿಗೆ ರಕ್ಷಣೆ ಸಿಗಬೇಕು. ಸಮಾಜಘಾತುಕ ಶಕ್ತಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ