Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುರ್ಚಿ ಉಳಿಸಿಕೊಳ್ಳಲು ಜಾತಿ ಗಣತಿ ವರದಿ ಡ್ರಾಮಾ ಮಾಡುತ್ತಿರುವ ಸಿದ್ದರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಒಡೆದು ಅಳುವ ಕುತಂತ್ರ ಬುದ್ಧಿ ಕರ್ನಾಟಕ ಕಾಂಗ್ರೆಸ್
ಪಕ್ಷಕ್ಕೆ ಅಂಟಿಕೊಂಡಿರುವ ರೋಗ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ. ಅಲುಗಾಡುತ್ತಿರುವ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ "ಜಾತಿ ಗಣತಿ ವರದಿ"ಯ ಡ್ರಾಮಾ ಶುರು ಮಾಡಿದ್ದಾರೆ.  

ಅಂದು ಭಾರತಕ್ಕೆ ಬಂದು ಬ್ರಿಟಿಷರು ಭಾರತೀಯರನ್ನು ಒಡೆದು ಆಳ್ವಿಕೆ ಮಾಡುತ್ತಿದ್ದರು. ಇಂದು ಇಟಲಿ ಭಾರತೀಯ ಕಾಂಗ್ರೆಸ್ ಪಕ್ಷದ ಗುಲಾಮರು ಅದನ್ನೇ ಮುಂದುವರಿಸಿದ್ದಾರೆ ಎಂದು ಜೆಡಿಎಸ್ ಹರಿಹಾಯ್ದಿದೆ.

ವೈಜ್ಞಾನಿಕವಲ್ಲದ 10 ವರ್ಷಗಳ ಹಿಂದಿನ ಹಳಸಲು, ಕಾಟಾಚಾರದ ಸಮೀಕ್ಷೆಯನ್ನು ಜಾತಿ ಗಣತಿ ವರದಿಯಂದು ಬಿಂಬಿಸಿ, ಸಮುದಾಯಗಳ ಮಧ್ಯೆ "ದ್ವೇಷದ ವಿಷ ಬೀಜ" ಬಿತ್ತಲಾಗುತ್ತಿದೆ. ರಾಜ್ಯದ ಜನಸಂಖ್ಯೆಗೂ ವರದಿಯ ಅಂಕಿ- ಅಂಶಗಳಿಗೂ ತಾಳಮೇಳವೇ ಇಲ್ಲ ಎಂದು ಜೆಡಿಎಸ್ ಟೀಕಿಸಿದೆ.

ನನ್ನ ಮನೆಗೆ ಜಾತಿ ಗಣತಿ ಮಾಡುವವರು ಬಂದೇ ಇಲ್ಲ ಎಂದು ಸ್ವತಃ ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ ನೀಡಿದ್ದ ಬಹಿರಂಗ ಹೇಳಿಕೆ ಇದಕ್ಕೆ ಸಾಕ್ಷಿ.  ಇದು ಸಿದ್ದರಾಮಯ್ಯ ಅಂಡ್‌ಟೀಂ ಸಿದ್ಧಪಡಿಸಿರುವ ರೆಡಿಮೇಡ್‌ವರದಿ ಎಂದು ಜೆಡಿಎಸ್ ಆರೋಪಿಸಿದೆ.

ದಶಕಗಳ ಹಿಂದಿನ ಈ ವರದಿಯಲ್ಲಿ ಹಲವು ನೂನ್ಯತೆಗಳಿವೆ, ಕ್ರಮಬದ್ಧವಾಗಿ ನಡೆದಿಲ್ಲ. ಮತ್ತು ಅಂಕಿ -ಅಂಶಗಳು ಅವಾಸ್ತವಿಕತೆಯಿಂದ ಕೂಡಿದೆ ಎಂದು ಸಂಪುಟದ ಸಚಿವರು ಮತ್ತು ಶಾಸಕರೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಭ್ರಷ್ಟ ಕಾಂಗ್ರೆಸ್‌ಸರ್ಕಾರದ ಪ್ರಾಯೋಚಿತ "ಜಾತಿ ಗಣತಿ ವರದಿ" ರಾಜ್ಯದಲ್ಲಿ ಜಾತಿ ಜಾತಿಗಳ ನಡುವೆ ವೈಷಮ್ಯ ಸೃಷ್ಟಿಗೆ ಕಾರಣವಾಗುತ್ತಿದೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ