Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನನ್ನ ಸೋಲಿಗೆ ಸಾವರ್ಕರ್ ಕಾರಣ ಎಂದು ಅಂಬೇಡ್ಕರ್ ಅವರೇ ಬರೆದಿದ್ದಾರೆ: ಸಿದ್ದರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚುನಾವಣೆಯಲ್ಲಿ ನನ್ನ ಸೋಲಿಗೆ ಸಾವರ್ಕರ್ ಕಾರಣ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ. ಆದರೆ ಅಂಬೇಡ್ಕರ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಮನುವಾದಿಗಳು ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದರು.


ವಿಧಾನಸೌಧದ  ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಮನುವಾದಿಗಳು ಇದ್ದಕಿದ್ದಂತೆ ಅಂಬೇಡ್ಕರ್ ಮೇಲೆ ಪ್ರೀತಿ ಬಂದಂತೆ ಆಡುತ್ತಿದ್ದಾರೆ. ಆದರೆ ಸಂವಿಧಾನವನ್ನು ಮೊದಲಿಗೆ ವಿರೋಧಿಸಿದ್ದು ಇವರೇ. ಸಂವಿಧಾನದ ಜಾರಿಯನ್ನು ವಿರೋಧಿಸಿದ್ದವರೇ ಈ ಮನುವಾದಿಗಳು ಎಂದು ಟೀಕಿಸಿದರು.

ಸಂವಿಧಾನ ಜಾರಿ ಆದ 75 ವರ್ಷಗಳ ಹಿಂದೆಯೇ ವೈರುದ್ಯ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ ಎಂದು ಅಂಬೇಡ್ಕರ್ ಹೇಳಿದ್ದರು.
ಸಂವಿಧಾನದ ಆಶಯ ಈಡೇರಬೇಕಾದರೆ ಅಸಮಾನತೆ
, ಅಸ್ಪ್ರಶ್ಯತೆ ಅಳಿಯಬೇಕು. ಜಾತಿ ವ್ಯವಸ್ಥೆ ಇರುವವರೆಗೆ ಸಮಾನತೆ ಬರುವುದಿಲ್ಲ, ಅಸ್ಪೃಶ್ಯತೆ ಅಳಿಯುವುದಿಲ್ಲ ಎಂದು ಅಂಬೇಡ್ಕರ್ ಹೇಳಿದ್ದಾರೆ. ಅಂಬೇಡ್ಕರ್ ಇಲ್ಲದೇ ಹೋಗಿದ್ದರೆ ಎಲ್ಲರಿಗೂ ಶಿಕ್ಷಣ ದೊರೆಯುತ್ತಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಬಜೆಟ್ ಗಾತ್ರ ಹೆಚ್ಚಾದಂತೆ scp/ tsp ಹಣ ಹೆಚ್ಚಾಗಬೇಕು. ಆದರೆ ಬಿಜೆಪಿ ಸರ್ಕಾರ ಕಡಿಮೆ ಮಾಡಿತು‌. ಆದರೆ ನಾವು ಅಧಿಕಾರಕ್ಕೆ ಬಂದ ಬಳಿಕ ಮತ್ತೆ ಯೋಜನಾ ಗಾತ್ರಕ್ಕೆ ತಕ್ಕಂತೆ ಹೆಚ್ಚಿಸಿದ್ದೀವಿ. ಈ ಬಾರಿ 42018 ಕೋಟಿ ರೂಪಾಯಿಯನ್ನು ನಾವು ತೆಗೆದಿಟ್ಟಿದ್ದೀವಿ. 8300 ಕೋಟಿ scsp/tsp ಹಣ ದುರುಪಯೋಗ ಪಡಿಸಿಕೊಂಡಿದ್ದು ಬಿಜೆಪಿ. ಇವರು ನಾಚಿಕೆ ಇಲ್ಲದೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು. ಅಂಬೇಡ್ಕರ್ ಅವರ ಆಶಯಗಳ ಜಾರಿಗಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ನಮ್ಮ ಜನರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ.

ವಿದ್ಯಾವಂತರೇ ಹೆಚ್ಚು ಜಾತಿವಾದಿಗಳಾಗುತ್ತಿರುವುದು ಸರಿಯಲ್ಲ. ಶಿಕ್ಷಣದ ಉದ್ದೇಶ ಜಾತಿವಾದಿಗಳಾಗುವುದಲ್ಲ. ಬಾಬಾ ಸಾಹೇಬ್ ಒಬ್ಬ ವ್ಯಕ್ತಿ ಇಡೀ ದೇಶದ ಶಿಕ್ಷಣ ವಂಚಿತ ನೂರಾರು ಜಾತಿ ಸಮುದಾಯಗಳಿಗೆ ಶಿಕ್ಷಣ ಸಿಗಲು ಕಾರಣಕರ್ತರಾದರು.

*ಮುಸಲ್ಮಾನರು ಶಿಕ್ಷಣದಿಂದ ವಂಚಿತರಾಗಬಾರದು, ಅವಕಾಶಗಳಿಂದ ವಂಚಿತರಾಗಬಾರದು, ಹೀಗಾಗಿ ಸಂವಿಧಾನ ಹೇಳಿದಂತೆ ನಾವು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ಅವಕಾಶ ಕಲ್ಪಿಸುತ್ತಿದ್ದೇವೆ. ಇಷ್ಟಕ್ಕೇ ಕಾಂಗ್ರೆಸ್ ಬರೀ ಮುಸಲ್ಮಾನರನ್ನು ಓಲೈಸುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ.

ಬಹುತ್ವದ ದೇಶ ನಿರ್ಮಾಣಕ್ಕೆ, ಬ್ರಾತೃತ್ವದ ಸಮಜ ನಿರ್ಮಾಣಕ್ಕೆ ಅಂಬೇಡ್ಕರ್ ಅವರು ಕೊಟ್ಟ ಮಾರ್ಗದಲ್ಲಿ ನಮ್ಮ ಸರ್ಕಾರ ನಡೆಯುತ್ತಿದೆ.

ಸರಾಯಿ ಬೇಡ, ಶಾಲೆ ಬೇಕು ಎನ್ನುವುದು ದಲಿತ ಸಂಘರ್ಷ ಸಮಿತಿ ಹೋರಾಟದ ಘೋಷಣೆಯಾಗಿತ್ತು. ನಾನು ಉಪಮುಖ್ಯಮಂತ್ರಿ ಆದ ತಕ್ಷಣ ಊರು ಊರಲ್ಲಿ ವಸತಿ ಶಾಲೆ ಆರಂಭಿಸಿದೆ. ಮುಂದಿನ ಆರ್ಥಿಕ ವರ್ಷದ ಕೊನೆಯ ವೇಳೆಗೆ ರಾಜ್ಯದ ಎಲ್ಲಾ ಹೋಬಳಿಗಳಲ್ಲೂ ವಸತಿ ಶಾಲೆ ತೆರೆದಿರುತ್ತವೆ.
ಮೊದಲಿಗೆ ವಿಧಾನಸೌಧದ ಎದುರಿನ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಿದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ