Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅನುದಾನ ನೀಡದಿದ್ದರೂ ತುಸು ನೆಮ್ಮದಿ ನೀಡಿದ ಸಿದ್ದರಾಮಯ್ಯ ಬಜೆಟ್

Advertisement
 ಹೆಚ್.ಸಿ ಗಿರೀಶ್, ಹರಿಯಬ್ಬೆ.
ಚಂದ್ರವಳ್ಳಿ ನ್ಯೂಸ್
, ಚಿತ್ರದುರ್ಗ:
ಬಹು ನಿರೀಕ್ಷೆಯ ಸಿದ್ದರಾಮಯ್ಯ ಮಂಡಿಸಿದ ದಾಖಲೆಯ 17ನೇ ಬಜೆಟ್ ಚಿತ್ರದುರ್ಗ ಜಿಲ್ಲೆಯ ಮಟ್ಟಿಗೆ ನಿರಾಸೆ ಬಜೆಟ್ ಆಗಿದೆ. ಎಂದಿನಂತೆ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದತ್ತ ಕೈ ತೋರಿಸಿರುವ ಸಿದ್ದರಾಮಯ್ಯನವರು ಬಯಲು ಸೀಮೆ ಜಿಲ್ಲೆಗೆ ದೊಡ್ಡ ಪೆಟ್ಟು ನೀಡಿದ್ದಾರೆ.
2026-27 ನೇ ಸಾಲಿನ ಕರ್ನಾಟಕ ರಾಜ್ಯ ಆಯವ್ಯಯದಲ್ಲಿ ಚಿತ್ರದುರ್ಗ

ಜಿಲ್ಲೆಗೆ ಸಂಬಂಧಿಸಿದ ಪ್ರಮುಖ ಯೋಜನೆಗಳು ಮತ್ತು ಭದ್ರಾ ಮೇಲ್ದಂಡೆ ಯೋಜನೆಯ ಕುರಿತಾದ ವಿವರಗಳು: ನಿರಾಸೆಗಳ ಮಧ್ಯ ತುಸು ನೆಮ್ಮದಿ ಎನ್ನುವಂತಹ ಕೆಲ ವಿಷಯಗಳಲ್ಲಿ ಚಿತ್ರದುರ್ಗ ಹಾಗೆ ಬಂದು ಹೀಗೆ ಹೋಗುವ ಕೆಲಸ ಆಗಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಬಬ್ಬೂರು ಕೃಷಿ ವಿಜ್ಞಾನ ಕೇಂದ್ರದಲ್ಲಿ ಈಗಾಗಲೇ ಇದ್ದ ಜಿಲ್ಲಾ ಕೃಷಿ ತರಬೇತಿ ಕೇಂದ್ರವನ್ನು ರಾಜ್ಯಮಟ್ಟದ
ʻಕೃಷಿ ಉದ್ದಿಮೆ ತರಬೇತಿ ಕೇಂದ್ರʼವನ್ನಾಗಿ ಉನ್ನತೀಕರಿಸಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಗಳನ್ನು ಒದಗಿಸುವ ಬಗ್ಗೆ ಕೇಂದ್ರ ಸರ್ಕಾರದ 2023-24ರ ಆಯವ್ಯಯ ಭಾಷಣದಲ್ಲಿ ಘೋಷಿಸಿದ್ದರೂ ಸಹ ಇಲ್ಲಿಯವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ಕ್ರಮಗಳನ್ನು ಕೈಗೊಂಡಿರುವುದಿಲ್ಲ. ಆದರೂ, ರಾಜ್ಯ ಸರ್ಕಾರದ ವತಿಯಿಂದ ಈ ಯೋಜನೆಗೆ 11,343 ಕೋಟಿ ರೂ.ಗಳ ವೆಚ್ಚ ಭರಿಸಲಾಗಿದೆ. ಸುಮಾರು ಆರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಅಜ್ಜಂಪುರ ತಾಲ್ಲೂಕಿನ ಅಬ್ಬಿನಹೊಳಲು ಗ್ರಾಮದ ಭೂ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಇದರಿಂದಾಗಿ 135 ಕಿ.ಮೀ ಉದ್ದದ ಚಿತ್ರದುರ್ಗ ಶಾಖಾ ಕಾಲುವೆ ಹಾಗೂ ಇದರಡಿ ಬರುವ ಫೀಡರ್ ಕಾಮಗಾರಿಗಳನ್ನು 2027ನೇ ಸಾಲಿನಲ್ಲಿ ಪೂರ್ಣಗೊಳಿಸಿ 157 ಕೆರೆಗಳನ್ನು ತುಂಬಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಆದರೆ ರೈತಪರ ಹೋರಾಟಗಾರರು, ರೈತ ಸಂಘಟನೆಗಳು 5 ಸಾವಿರ ಕೋಟಿ ಬೇಡಿಕೆ ಈಡೇರಿಲ್ಲ. ಇಂತಿಷ್ಟು ಅನುದಾನ ಕೇಳಿದ್ದ ಹೋರಾಟಗಾರರಿಗೆ ನಿರಾಸೆಯಾಗಿದೆ.
 ಪ್ರಸ್ತುತ ಸಾಲಿನಲ್ಲಿ 6 ಹೊಸ ತಾರಾಲಯಗಳನ್ನು ಸ್ಥಾಪಿಸಲಾಗುತ್ತಿದೆ. ಆ ಪೈಕಿ ವಿಜಯನಗರ, ಬಳ್ಳಾರಿ, ಚಿತ್ರದುರ್ಗ, ಯಾದಗಿರಿ, ಕೊಪ್ಪಳ ಹಾಗೂ ಬೀದರ್‌ಜಿಲ್ಲೆಗಳಲ್ಲಿ ತಲಾ ನಾಲ್ಕು ಕೋಟಿ ರೂ.ಗಳಂತೆ ಒಟ್ಟು 24 ಕೋಟಿ ರೂ. ವೆಚ್ಚದಲ್ಲಿ ತಾರಾಲಯಗಳನ್ನು ಸ್ಥಾಪಿಸಲಾಗುತ್ತದೆ.

ಸಶಕ್ತ ಕರ್ನಾಟಕʼ ಕಾರ್ಯಕ್ರಮದಡಿ ಬೆಳಗಾವಿ, ಗೋಕರ್ಣ, ಚಿತ್ರದುರ್ಗ, ಹಂಪಿಯಲ್ಲಿ ರಾಷ್ಟ್ರಮಟ್ಟದ ಮ್ಯಾರಥಾನ್‌ಗಳನ್ನು ತಲಾ 10 ಲಕ್ಷ ರೂ. ವೆಚ್ಚದಲ್ಲಿ ಆಯೋಜಿಸಲಾಗುವುದು. ಇದರೊಂದಿಗೆ 10 ಜಿಲ್ಲಾ ಕೇಂದ್ರಗಳಲ್ಲಿ ತಲಾ ನಾಲ್ಕು ಲಕ್ಷ ರೂ. ವೆಚ್ಚದಲ್ಲಿ ಜಿಲ್ಲಾ ಮಟ್ಟದ ಮ್ಯಾರಥಾನ್‌ಗಳನ್ನು ಪ್ರಸಿದ್ಧ ಕ್ರೀಡಾಪಟುಗಳ ಹೆಸರಿನಲ್ಲಿ ಆಯೋಜನೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಾರ್ಮಿಕ ರಾಜ್ಯ ವಿಮಾ(ESI) ಚಿಕಿತ್ಸಾಲಯ:
ರಾಯಚೂರು
, ವಿಜಯಪುರ, ಬಾಗಲಕೋಟೆ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ, ಕೆ.ಜಿ.ಎಫ್ ಮತ್ತು ಚಿಕ್ಕಮಗಳೂರಿನಲ್ಲಿರುವ ಕಾರ್ಮಿಕ ರಾಜ್ಯ ವಿಮಾ (ESI) ಚಿಕಿತ್ಸಾಲಯಗಳನ್ನು ಉನ್ನತೀಕರಿಸಲಾಗುವುದು.

ಉನ್ನತ ಶಿಕ್ಷಣ:
ಸರ್ಕಾರದ 11 ಪಾಲಿಟೆಕ್ನಿಕ್‌ಗಳಲ್ಲಿ ಹಾಗೂ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಸರ್ಕಾರಿ ಇಂಜಿನಿಯರಿಂಗ್‌ಕಾಲೇಜಿನಲ್ಲಿ ಪ್ರಸ್ತುತ ಹೆಚ್ಚಿನ ಬೇಡಿಕೆ ಹಾಗೂ ಉದ್ಯೋಗಾವಕಾಶವಿರುವ ಕೋರ್ಸ್‌ಗಳಾದ AI, ಮಷಿನ್‌ಲರ್ನಿಂಗ್‌, ಕ್ಲೌಡ್‌ಕಂಪ್ಯೂಟಿಂಗ್‌, ಮೈನಿಂಗ್‌ಇಂಜಿನಿಯರಿಂಗ್‌, ಆಟೋಮೇಷನ್‌ಇಂಜಿನಿಯರಿಂಗ್‌ಮುಂತಾದ 15 ಹೊಸ ಕೋರ್ಸ್‌ಗಳನ್ನು ಪ್ರಾರಂಭಿಸುವ ಭರವಸೆ ನೀಡಲಾಗಿದೆ.

KMERC ಅಡಿ ಸಮಗ್ರ ಆರೋಗ್ಯ ಸೇವೆ:
ಗಣಿಬಾಧಿತ ಜಿಲ್ಲೆಗಳಾದ ಬಳ್ಳಾರಿ
, ವಿಜಯನಗರ, ಚಿತ್ರದುರ್ಗ ಮತ್ತು ತುಮಕೂರಿನ ಎಲ್ಲಾ ತಾಲ್ಲೂಕುಗಳಲ್ಲಿ ಸಮಗ್ರ ಆರೋಗ್ಯ ಸೇವೆಗಳನ್ನು KMERC ಅನುದಾನದಡಿಯಲ್ಲಿ ವಿಸ್ತರಿಸಲಾಗುವುದು.‌ ಅದೇ ರೀತಿ ಶಿಕ್ಷಣ, ರಸ್ತೆ, ಚರಂಡಿಯಂತಹ ಮೂಲ ಸೌಕರ್ಯ, ಕೃಷಿ, ತೋಟಗಾರಿಕೆ ಕ್ಷೇತ್ರಗಳಿಗೂ ವಿಸ್ತರಣೆ ಮಾಡಿದ್ದರೆ ಅನುಕೂಲ ಆಗುತ್ತಿತ್ತು.
ಸಂಚಾರಿ ಠಾಣೆ ಮತ್ತು ಶ್ರಮಿಕ ವಸತಿ ಶಾಲೆ:
ಚಿತ್ರದುರ್ಗ ಜಿಲ್ಲೆಯಲ್ಲಿ ಹಿರಿಯೂರು ಅತಿ ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಹಿರಿಯೂರಿನಲ್ಲಿ ಹೊಸದಾಗಿ ಸಂಚಾರ ಪೊಲೀಸ್ ಠಾಣೆ ಸ್ಥಾಪನೆ ಮಾಡಲಾಗುತ್ತದೆ
. ಇನ್ನೂ ಹೊಸದುರ್ಗ ಮತ್ತು ಚಳ್ಳಕೆರೆಯಲ್ಲಿ ಪ್ರಸ್ತುತ ವರ್ಷ ಹೊಸ ಶ್ರಮಿಕ ವಸತಿ ಶಾಲೆ ಪ್ರಾರಂಭಿಸಲಾಗುತ್ತದೆ ಎಂದು ಹೇಳಲಾಗಿದೆ. ಜಿಲ್ಲೆಯ ಆರು ತಾಲೂಕುಗಳಲ್ಲೂ ಶ್ರಮಿಕ ವಸತಿ ಶಾಲೆ ಆರಂಭಿಸಿದ್ದರೆ ಅನುಕೂಲ ಆಗುತ್ತಿತ್ತು.

​ಶಿಕ್ಷಣ ಇಲಾಖೆ:
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ಹೊಸದಾಗಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜನ್ನು ಪ್ರಾರಂಭಿಸಲು ಯೋಜಿಸಲಾಗಿದೆ.


​ಕೃಷಿ ಮತ್ತು ತೋಟಗಾರಿಕೆ:
ಜಿಲ್ಲೆಯ ಪ್ರಮುಖ ಬೆಳೆಯಾದ ಅಡಿಕೆ ಮತ್ತು ಇತರ ತೋಟಗಾರಿಕೆ ಬೆಳೆಗಳ ಸಂಶೋಧನೆ ಮತ್ತು ಅಭಿವೃದ್ಧಿಗೆ ಪೂರಕವಾದ ಕ್ರಮಗಳನ್ನು ಘೋಷಿಸಲಾಗಿದೆ.


​ಭದ್ರಾ ಮೇಲ್ದಂಡೆ ಯೋಜನೆ:
​ಭದ್ರಾ ಮೇಲ್ದಂಡೆ ಯೋಜನೆಯು ಚಿತ್ರದುರ್ಗ
, ತುಮಕೂರು, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ ಬರಪೀಡಿತ ಪ್ರದೇಶಗಳಿಗೆ ನೀರಾವರಿ ಮತ್ತು ಕುಡಿಯುವ ನೀರು ಒದಗಿಸುವ ಅತ್ಯಂತ ನಿರ್ಣಾಯಕ ಯೋಜನೆಯಾಗಿದೆ. ​ಕೇಂದ್ರದ

ನೆರವು:
ಈ ಯೋಜನೆಯನ್ನು
'ರಾಷ್ಟ್ರ ಮಟ್ಟದ ಯೋಜನೆ' ಎಂದು ಪರಿಗಣಿಸುವಂತೆ ಮತ್ತು ಕೇಂದ್ರ ಬಜೆಟ್‌ನಲ್ಲಿ ಈ ಹಿಂದೆ ಘೋಷಿಸಿದ 5,300 ಕೋಟಿ ರೂ.ಗಳ ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ.


​ರಾಜ್ಯ ಸರ್ಕಾರದ ಬದ್ಧತೆ:
ಕೇಂದ್ರದ ಅನುದಾನ ವಿಳಂಬವಾಗುತ್ತಿದ್ದರೂ
, ರಾಜ್ಯ ಸರ್ಕಾರವು ತನ್ನ ಪಾಲಿನ ಹಣವನ್ನು ಬಳಸಿಕೊಂಡು ಯೋಜನೆಯನ್ನು ಪೂರ್ಣಗೊಳಿಸಲು ಆದ್ಯತೆ ನೀಡಿದೆ. ವಿಶೇಷವಾಗಿ ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿಗಳನ್ನು ತ್ವರಿತಗೊಳಿಸಲು ಸೂಚಿಸಲಾಗಿದೆ.

​ನೀರಾವರಿ ಸೌಲಭ್ಯ:
ಈ ಯೋಜನೆಯಿಂದ ಚಿತ್ರದುರ್ಗ ಜಿಲ್ಲೆಯ ಸುಮಾರು
2.25 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಗುರಿ ಹೊಂದಲಾಗಿದೆ. ​ಇದಲ್ಲದೆ, ಚಿತ್ರದುರ್ಗ ಜಿಲ್ಲೆಯ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ 'ಪ್ರಗತಿ ಪಥ' ಯೋಜನೆಯಡಿ ಮತ್ತು ಕೆರೆ ತುಂಬಿಸುವ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತಪರ ಕಾಳಜಿಯ ನಾಯಕನನ್ನು ಕಳೆದುಕೊಂಡಿದ್ದೇವೆ-ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಿತ್ರದುರ್ಗದ 'ಅಜಾತಶತ್ರು' ಇನ್ನಿಲ್ಲ: ಸಚಿವ ಡಿ. ಸುಧಾಕರ್ ವಿಧಿವಶಸಚಿವ ಡಿ.ಸುಧಾಕರ್ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ​ ಮೌನವಾದ ಮಾತು, ಮರೆಯದ ನೆನಪು: ಡಿ. ಸುಧಾಕರ್ ಅವರಿಗೆ ಭಾವಪೂರ್ಣ ನಮನಡಿ. ಸುಧಾಕರ್ ನಿಧನ: ಮಾರ್ಗದರ್ಶಕ, ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡೆ ಎಂದು ಶಾಸಕ ವೀರೇಂದ್ರ ಪಪ್ಪಿ ಭಾವುಕ ನಮನಡಿ. ಸುಧಾಕರ್ ನಿಧನ: ಮಾರ್ಗದರ್ಶಕ, ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡೆ ಎಂದು ಶಾಸಕ ವೀರೇಂದ್ರ ಪಪ್ಪಿ ಭಾವುಕ ನಮನಸಚಿವ ಡಿ. ಸುಧಾಕರ್ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ: "ಅವರೊಬ್ಬ ನಿಜವಾದ ಜನಪರ ನಾಯಕ"ಟೀಕೆಗಳಿಗೆ ಕುಗ್ಗದ ಧೀಮಂತ: ನಿಂದನೆಗಳ ನಡುವೆಯೂ ಮೌನ ಕ್ರಾಂತಿ ಮಾಡಿದ ಸುಧಾಕರ್ಬಾರದ ಲೋಕದತ್ತ ಪಯಣಕ್ಕೆ ಸಿದ್ಧವಾದ ಆಪತ್ಬಾಂಧವ: ಚಿತ್ರದುರ್ಗದ ನೆಲದಲ್ಲಿ ಮೌನ ರೋದನಕಾರ್ಯಕರ್ತರ ಕಣ್ಮಣಿ, ಅಭಿಮಾನಿಗಳ ಆರಾಧ್ಯ ದೈವ: ಡಿ. ಸುಧಾಕರ್ ಅವರ ಸ್ನೇಹಯಾನ