Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯನವರೇ ಸಾರ್ವಜನಿಕ ಜೀವನದಲ್ಲಿರುವವರು ಲಜ್ಜೆಗೇಡಿಗಳಾಗಬಾರದು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿಎಂ ಸಿದ್ದರಾಮಯ್ಯ
ನವರೇ, ಮತಿಗೇಡಿಗಳಾದರೂ ಪರವಾಗಿಲ್ಲ, ಜೀವನದಲ್ಲಿ, ಅದರಲ್ಲೂ ಸಾರ್ವಜನಿಕ ಜೀವನದಲ್ಲಿರುವವರು ಲಜ್ಜೆಗೇಡಿಗಳಾಗಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 87 ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬುದನ್ನು ಸ್ವತಃ ಅಂದಿನ ಸಚಿವರೇ ಒಪ್ಪಿಕೊಂಡರೂ, ಭ್ರಷ್ಟಾಚಾರ ನಡೆದಿದೆ ಎನ್ನುವುದನ್ನ ಸದನದಲ್ಲಿ ತಾವೇ  ಗಂಟಾಘೋಷವಾಗಿ ಒಪ್ಪಿಕೊಂಡ ಮೇಲೂ ನಿರ್ಲಜ್ಜವಾಗಿ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಿರುವ ಲಜ್ಜೆಗೇಡಿತನಕ್ಕೆ ಏನನ್ನಬೇಕು?

ಸ್ವತಃ ತಮ್ಮ ಆರ್ಥಿಕ ಸಲಹೆಗಾರರು, ಹಿರಿಯ ಕಾಂಗ್ರೆಸ್ ಶಾಸಕರಾದ ಬಸವರಾಜ ರಾಯರೆಡ್ಡಿ ಅವರು ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ಎಂದು ಸರ್ಟಿಫಿಕೇಟ್ ಕೊಟ್ಟ ಮೇಲೂ ಮುಖ್ಯಮಂತ್ರಿ ಕುರ್ಚಿಗೆ ಅಂಟಿಕೊಂಡು ಕೂತುಕೊಳ್ಳುವ ಲಜ್ಜೆಗೇಡಿತನಕ್ಕೆ ಏನನ್ನಬೇಕು?

ಅದು ಹೋಗಲಿ ಬಿಡಿ. ಹಿರಿಯ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರು ವಸತಿ ಇಲಾಖೆಯಲ್ಲಿ ನಡೆಯುತ್ತಿರುವ "ಮನಿ ಫಾರ್ ಮನೆ" ಭ್ರಷ್ಟಾಚಾರವನ್ನು ಬಯಲಿಗೆಳೆದು ತಮ್ಮಲ್ಲಿರುವ ಭ್ರಷ್ಟಾಚಾರದ ಮಾಹಿತಿಯನ್ನು ಬಹಿರಂಗ ಪಡಿಸಿದರೆ ಸರ್ಕಾರವೇ ಅಲ್ಲಾಡುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇಷ್ಟಾದರೂ ಅವರ ಮೇಲೆ ಕ್ರಮ ಕೈಗೊಂಡಿಲ್ಲ. ಸ್ವಪಕ್ಷದ ಹಿರಿಯ ಶಾಸಕರೇ ಭ್ರಷ್ಟಾಚಾರದ ಆರೋಪ ಮಾಡಿದರೂ, ವಸತಿ ಸಚಿವರ ಮೇಲೆ ಕ್ರಮವೂ ಕೈಗೊಳ್ಳದೆ, ತನಿಖೆಯೂ ನಡೆಸದೆ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಿರುವ ಲಜ್ಜೆಗೇಡಿತನಕ್ಕೆ ಏನನ್ನಬೇಕು? ಎಂದು ಅಶೋಕ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ತಾವೇ ನೇಮಕ ಮಾಡಿದ್ದ ತನಿಖಾ ಆಯೋಗ ಹಿಂದಿನ ಬಿಜೆಪಿ ಸರ್ಕಾರದ ಮೇಲೆ ತಾವು ಮಾಡಿದ್ದ 40% ಕಮಿಷನ್ ಆರೋಪ ಹಸಿ ಸುಳ್ಳು ಎಂದು ವರದಿ ನೀಡಿದ ಮೇಲೂ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಿರುವ ಲಜ್ಜೆಗೇಡಿತನಕ್ಕೆ ಏನನ್ನಬೇಕು?

40% ಕಮಿಷನ್ ಎಂದು ಹಸಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿ, ಮತದಾರರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬರುವ ಲಜ್ಜೆಗೇಡಿತನಕ್ಕೆ ಏನನ್ನಬೇಕು?

ಕಳೆದ 2.5 ವರ್ಷಗಳಲ್ಲಿ ನಿಮ್ಮ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಕಮಿಷನ್ ದಾಹಕ್ಕೆ ಬಲಿಯಾದ ಅಧಿಕಾರಿಗಳು, ಗುತ್ತಿಗೆದಾರರ ಪ್ರಕರಣಗಳನ್ನು ಪಟ್ಟಿ ಮಾಡುತ್ತಾ ಹೋದರೆ ಜಾಗವೇ ಸಾಕಾಗುವುದಿಲ್ಲ.

ಶಿವಮೊಗ್ಗದಲ್ಲಿ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ. ಗ್ರಾಮೀಣಾಭಿವೃದ್ಧಿ ಇಲಾಖೆಯ ಲಂಚಕೋರತನಕ್ಕೆ ಬೇಸತ್ತು ದಾವಣಗೆರೆಯ ಗುತ್ತಿಗೆದಾರ ಪಿ.ಸಿ.ಗೌಡರ್ ಆತ್ಮಹತ್ಯೆ. ವರ್ಗಾವಣೆ ದಂಧೆಯ ಒತ್ತಡ, ಕಿರುಕುಳ ತಾಳಲಾರದೆ ಯಾದಗಿರಿ ಪಿಎಸ್ಐ ಪರಶುರಾಮ್ ಹೃದಯಾಘಾತದಿಂದ ಸಾವು.

ಬೀದರ್ ಜಿಲ್ಲೆ ಭಾಲ್ಕಿ ತಾಲ್ಲೂಕಿನ ಕಟ್ಟಿತೂಗಾಂವ್‌ಗ್ರಾಮದ ನಿವಾಸಿ ಸಿವಿಲ್‌ಎಂಜಿನಿಯರ್‌ಸಚಿನ್‌ಮಾನಪ್ಪ ಪಾಂಚಾಳ್‌ರೈಲಿಗೆ ತಲೆಕೊಟ್ಟು ಆತ್ಮಹತ್ಯೆ. ಕಳೆದ 30 ತಿಂಗಳುಗಳಲ್ಲಿ ನಿಮ್ಮ ಸರ್ಕಾರ ಭ್ರಷ್ಟಾಚಾರದ ಎಲ್ಲ ದಾಖಲೆಗಳನ್ನೂ ಮುರಿದಿದೆ.

ನಿಮ್ಮ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಹೇಳುತ್ತಾ ಹೋದರೆ ಅದಕ್ಕೆ ಅಂತ್ಯವೇ ಇಲ್ಲ, ದಿನದ 24 ಗಂಟೆಗಳು ಸಾಕಾಗುವುದಿಲ್ಲ. ಮತಿಗೇಡಿಗಳಾದರೂ ಪರವಾಗಿಲ್ಲ ಸಿದ್ದರಾಮಯ್ಯನವರೇ, ಜೀವನದಲ್ಲಿ, ಅದರಲ್ಲೂ ಸಾರ್ವಜನಿಕ ಜೀವನದಲ್ಲಿರುವವರು ಅಧಿಕಾರಕ್ಕಾಗಿ, ಕುರ್ಚಿಗಾಗಿ ಲಜ್ಜೆಗೇಡಿಗಳಾಗಬಾರದು ಎಂದು ಅಶೋಕ್ ತೀಕ್ಷ್ಣವಾಗಿ ತಿವಿದಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ