Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ವರಿಗೂ ಸೂರು ಒದಗಿಸುವುದು ಸರ್ಕಾರದ ಆದ್ಯತೆ-ಸಿದ್ದರಾಮಯ್ಯ

Advertisement
 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸರ್ವರಿಗೂ ನೆಮ್ಮದಿಯ ಸೂರು ಒದಗಿಸುವುದು ನಮ್ಮ ಸರ್ಕಾರದ ಆದ್ಯತೆ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಈ ನಿಟ್ಟಿನಲ್ಲಿ ನಾವು ಕಾರ್ಯಪ್ರವೃತ್ತರಾಗಿದ್ದು, ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಅಡಿ ಹಿಂದಿನ ಬಾರಿ ನಮ್ಮ ಸರ್ಕಾರವಿದ್ದಾಗ 43,874 ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಿತ್ತು. ಇದರಲ್ಲಿ 13,303 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಒಟ್ಟು 25,815 ಮನೆಗಳು ನಿರ್ಮಾಣ ಹಂತದಲ್ಲಿವೆ.

ಇದರಲ್ಲಿ ಫಲಾನುಭವಿಗಳ ವಂತಿಕೆ ಒಟ್ಟು ರೂ. 134 ಕೋಟಿ ಸಂಗ್ರಹಿಸಲಾಗಿದೆ. ಮೊದಲ ಹಂತದಲ್ಲಿ 7,900 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಫಲಾನುಭವಿಗಳ ವಂತಿಕೆ ಮೊತ್ತ ರೂ. 216 ಕೋಟಿ ಬಾಕಿಯಿದೆ. ಮನೆ ಹಂಚಿಕೆ ಮಾಡಲು ಸಾಧ್ಯವಾಗುವಂತೆ ಈ ಬಾಕಿ ಮೊತ್ತದ ಪಾವತಿ ಬಗ್ಗೆ ಹುಡ್ಕೋದಿಂದ ಸಾಲ ಪಡೆಯುವುದು ಸೇರಿದಂತೆ ಸೂಕ್ತ ಪ್ರಸ್ತಾವನೆ ಸಿದ್ಧಪಡಿಸಬೇಕಿದೆ.

ಸ್ಲಂ ಬೋರ್ಡ್ ಅಡಿ 42,000 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಇಲ್ಲಿ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲು ನಮ್ಮ ಸರ್ಕಾರ ಅನುದಾನ ಒದಗಿಸಲಿದೆ.

ಅಂಬೇಡ್ಕರ್ ವಸತಿ ಯೋಜನೆ (ಗ್ರಾಮೀಣ) ಅಡಿ ರೂ.900 ಕೋಟಿ ಅನುದಾನ ಬಜೆಟ್‌ನಲ್ಲಿ ನಿಗದಿಪಡಿಸಲಾಗಿದೆ. ಈ ಯೋಜನೆಯಡಿ 94,939 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, 56,682 ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.

ವಿವಿಧ ವಸತಿ ಯೋಜನೆಗಳ ಅಡಿ ನಿರ್ಮಿಸಲಾಗುತ್ತಿರುವ ಮನೆಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನ ಹಂಚಿಕೆಗೆ ಪ್ರಸ್ತಾವನೆಗಳನ್ನು ಸಲ್ಲಿಸಿ, ಅನುಮೋದನೆ ಪಡೆದು, ಶೀಘ್ರ ಅವುಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ