ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
9ನೇ ಜನವರಿ ಶುಕ್ರವಾರ ಮುಖ್ಯಮಂತ್ರಿಗಳು ವಿಜಯಪುರಕ್ಕೆ ಆಗಮಿಸಲಿದ್ದು, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗಳನ್ನು ನೆರವೇರಿಸಲಿದ್ದಾರೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.
ಇದೇ ದಿನ ಕೇಂದ್ರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರು ನಾಮಕರಣ ಮಾಡುವುದು, ಅವರ ಪುತ್ಥಳಿ ಅನಾವರಣ ಹಾಗೂ ದರಬಾರ ಶಾಲಾ ಮೈದಾನದಲ್ಲಿ ವೇದಿಕೆ ಕಾರ್ಯಕ್ರಮಗಳು ನಡೆಯಲಿವೆ.
ಈ ಎಲ್ಲಾ ಕಾರ್ಯಕ್ರಮಗಳು ಸುಗಮವಾಗಿ, ಯಾವುದೇ ಲೋಪವಿಲ್ಲದೆ ನಡೆಯುವಂತೆ ಅಗತ್ಯ ಮುಂಜಾಗ್ರತೆ ವಹಿಸುವಂತೆ ಜಿಲ್ಲಾ ಆಡಳಿತಕ್ಕೆ ಸೂಚಿಸಿರುವೆ ಎಂದು ಅವರು ಹೇಳಿದರು.


