Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಿದ್ಯಾವಂತರ ತಾತ್ಸಾರದಿಂದ ಎಸ್‌ಐಆರ್ ಪ್ರಕ್ರಿಯೆಗೆ ಹಿನ್ನಡೆ: ಬಿಎಲ್‌ಒ ಕುಮಾರ್ ಕಳವಳ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರ ಪ್ರದೇಶಗಳಲ್ಲಿ ವಾಸಿಸುವ ವಿದ್ಯಾವಂತರ ತಾತ್ಸಾರ ಮನೋಭಾವದಿಂದಾಗಿ ಎಸ್‌ಐಆರ್ ಪ್ರಕ್ರಿಯೆಯು ಹಿನ್ನಡೆ ಅನುಭವಿಸುತ್ತಿದೆ ಎಂದು ಬಿಎಲ್‌ಒ-೨ ಎನ್.ಡಿ. ಕುಮಾರ್ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಶನಿವಾರ ಚಿತ್ರದುರ್ಗ ನಗರದ ೪ನೇ ವಾರ್ಡ್‌ನ ೧೨೩ನೇ ಬೂತ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

Advertisement

ಫಾರಂ ಭರ್ತಿ ಮತ್ತು ಸುರಕ್ಷತೆ ಬಗ್ಗೆ ಮಾಹಿತಿ:
ಚುನಾವಣಾ ಆಯೋಗದ ನಿಯಮಾವಳಿಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದ ಅವರು, "ಚುನಾವಣಾ ಆಯೋಗವು ಪ್ರತಿ ಮತದಾರರಿಗೆ ಎರಡು ಫಾರಂಗಳನ್ನು ನೀಡುತ್ತಿದೆ. ಮತದಾರರು ಇದರಲ್ಲಿ ಸರಿಯಾದ ಮಾಹಿತಿಯನ್ನು ಭರ್ತಿ ಮಾಡಿ, ಒಂದು ಫಾರಂಗೆ ಸಹಿ ಹಾಕಿ ಬಿಎಲ್‌ಒಗಳಿಗೆ ನೀಡಬೇಕು. ಮತ್ತೊಂದು ಫಾರಂಗೆ ಬಿಎಲ್‌ಒಗಳು ಸಹಿ ಮಾಡಿ ಮತದಾರರಿಗೆ ವಾಪಸ್ ನೀಡಲಿದ್ದಾರೆ," ಎಂದು ವಿವರಿಸಿದರು.

ಮುಂದುವರಿದು ಮಾತನಾಡಿದ ಅವರು, "ಬಿಎಲ್‌ಒಗಳು ಸಹಿ ಮಾಡಿ ನೀಡಿದ ಫಾರಂ ಅನ್ನು ಮತದಾರರ ಕರಡು ಪ್ರತಿ ಪ್ರಕಟವಾಗುವವರೆಗೂ ಸಾರ್ವಜನಿಕರು ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು. ಈ ಪ್ರಕ್ರಿಯೆಯ ಬಗ್ಗೆ ಮತದಾರರು ಯಾವುದೇ ರೀತಿಯ ಆತಂಕ ಪಡುವ ಅಥವಾ ಹೆದರುವ ಅಗತ್ಯವಿಲ್ಲ," ಎಂದು ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ನಗರಸಭೆ ವ್ಯವಸ್ಥಾಪಕ ಜಯಣ್ಣ, ಶಾಸಕರ ಆಪ್ತ ಸಹಾಯಕ ಶಿವಾನಂದ್, ಕಮ್ಯೂನಿಟಿ ಮೊಬಿಲೈಜರ್ ದೀಪಾ, ಬಿಎಲ್‌ಒ ರೇಣುಕಾ, ನಗರಸಭೆ ಮಾಜಿ ಸದಸ್ಯ ರಾಜೇಶ್, ಕಾಂಗ್ರೆಸ್ ಮುಖಂಡರಾದ ಶಶಿಕಿರಣ್ ಸೇರಿದಂತೆ ವಾರ್ಡಿನ ನೂರಾರು ಮತದಾರರು ಉಪಸ್ಥಿತರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು