Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭೀಕರ ಅಪಘಾತ ಸ್ಥಳದಲ್ಲೇ ಅಕ್ಕ, ತಮ್ಮ ಸಾವು

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ನಗರದ ಚಿತ್ರದುರ್ಗ ರಸ್ತೆಯ ವೀರದಿಮ್ಮನಹಳ್ಳಿ ರಾಷ್ಟ್ರೀಯ ಹೆದ್ದಾರಿ(೧೫೦ಎ) ಬೈಪಾಸ್‌ನಲ್ಲಿ ಮಂಗಳವಾರ ಮಧ್ಯಾಹ್ನ ಮೋಟಾರ್ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಕಾರು ಚಾಲಕ ಸಹ ಗಾಯಗೊಂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ಧಾನೆ.

ತಾಲ್ಲೂಕಿನ ತಳಕು ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ಟಿ.ರವಿಚಂದ್ರರವರ ಪತ್ನಿ ಕೆ.ಮಂಜುಳಾ(೩೨), ಮಂಜುಳಾ ಸಹೋದರ ಅಭಿಷೇಕ್(೨೮) ಬೈಕ್‌ನಲ್ಲಿ ತಳುಕಿನಿಂದ ಹಿರಿಯೂರು ತಾಲೂಕಿನ ದೇವರಕೊಟ್ಟ ಗ್ರಾಮದ ಮೊರಾರ್ಜಿಶಾಲೆಗೆ ತೆರಳುತ್ತಿದ್ದು, ಮಂಜುಳಾ, ರವಿಚಂದ್ರರವರ ಪುತ್ರ ಆರ್ಯನ್ ದೇವರಕೊಟ್ಟದ ಮೊರಾರ್ಜಿ ಶಾಲೆಯಲ್ಲಿ ೬ನೇ ತರಗತಿ ಓದುತ್ತಿದ್ದು ಪುತ್ರನನ್ನು ನೋಡಲು ಮಂಜುಳಾ ಸಹೋದರ ಅಭಿಷೇಕ್‌ನೊಂದಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು.


 ಹಿರಿಯೂರು ಕಡೆಯಿಂದ ಬಳ್ಳಾರಿ ಕಡೆಗೆ ಹೋಗುತ್ತಿದ್ದ ಕಾರು ವಿರುದ್ದ ದಿಕ್ಕಿನಲ್ಲಿ ಆಗಮಿಸಿ ಮೋಟಾರ್‌ ಬೈಕ್‌ಗೆ ಅಪ್ಪಳಿಸಿದೆ. ಕಾರಿನ ಅತಿವೇಗ ಈ ಅಪಘಾತಕ್ಕೆ ಕಾರಣವಾಗಿದ್ದು ಅಪಘಾತದ ನಂತರ ಸುಮಾರು ೩೦ ಮೀಟರ್ ದೂರದಲ್ಲಿ ಬೈಕ್ ಬಿದಿದ್ದು, ಅಭಿಷೇಕ್ ಮತ್ತು ಮಂಜುಳಾರವರ ಶವಗಳು ಅಲ್ಲಲ್ಲಿ ಬಿದ್ದಿದ್ದವು. ಕಾರುಚಾಲಕ ರಾಯಚೂರು ಜಿಲ್ಲೆ ಸಂಕನಹಾಳ್ ಗ್ರಾಮದ ನಾಗರಡ್ಡೆಪ್ಪ(೩೫) ಬೈಕ್‌ಗೆ ಡಿಕ್ಕಿಪಡಿಸಿದ್ದು, ಅರೆಪ್ರಜ್ಞ ವ್ಯವಸ್ಥೆಯಲ್ಲಿ ಬಿದಿದ್ದ ನಾಗರಡೆಪ್ಪನನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ಧಾರೆ.



ಡಿಕ್ಕಿ ರಂಭಸಕ್ಕೆ ಕಾರು ಹಾಗೂ ಬೈಕ್ ಎರಡು ಜಖಂಗೊಂಡಿವೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಿಎಸ್‌ಐ ಈರೇಶ್ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ಧಾರೆ. 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ