Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಕಾನೂನು ಹೋರಾಟದಲ್ಲಿ ಸಚಿವ ಹೆಚ್​​. ಕೆ. ಪಾಟೀಲ್ ವಿರುದ್ಧ ಗೆದ್ದ ಸಹೋದರಿಯರು

ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ:
ಕಾನೂನು ಸಚಿವ ಹೆಚ್​​. ಕೆ. ಪಾಟೀಲ್​​ ಅವರ ವಿರುದ್ಧವೇ ಒಡ ಹುಟ್ಟಿದ ಸಹೋದರಿಯರು ಸುಪ್ರೀಂಕೋರ್ಟ್​​ನಲ್ಲಿ ಹೋರಾಡಿ ಗೆದ್ದಿದ್ದಾರೆ.


ಹುಬ್ಬಳ್ಳಿ ನಗರದ ಪಿಂಟೋ ಸರ್ಕಲ್ ಬಳಿಯ 15 ಗುಂಟೆ ಜಾಗ ಕಬಳಿಸಲಾಗಿದೆ ಎಂದು ಆರೋಪಿಸಿ ಸಹೋದರಿಯರಾದ ಹುಬ್ಬಳ್ಳಿ ನಗರದ ಸಾವಕ್ಕ ಸುಳ್ಳದ, ಧಾರವಾಡದ ಜಕ್ಕವ್ವ ಅವರು ಸುಪ್ರೀಂ ಕೋರ್ಟ್​​ ಮೊರೆ ಹೋಗಿದ್ದರು.


ಹೆಚ್​​.ಕೆ. ಪಾಟೀಲ್ ಕುಟುಂಬ ಆಸ್ತಿ ಬಿಟ್ಟುಕೊಡ್ತಿಲ್ಲ ಎಂದು ಆರೋಪಿಸಿದ್ದರು. ಈ ಬಗ್ಗೆ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ಡಿಸೆಂಬರ್- 9ರಂದು ಆದೇಶ ನೀಡಿದ್ದು, 15 ಗುಂಟೆ ಜಾಗ ಸಾವಕ್ಕ ಮತ್ತು ಜಕ್ಕವ್ವ ಸಹೋದರಿಯರಿಗೆ ಸೇರಿದ್ದು ಎಂದಿದೆ.

ಪ್ರಕರಣ ಏನು?
1894
ರಲ್ಲಿ ಸಾವಕ್ಕ, ಜಕ್ಕವ್ವ ತಂದೆ ಮರಿತಮ್ಮಪ್ಪ ಅಮರಶೆಟ್ಟಿ ಅವರು ಇಂಡಿಯನ್ ಕಾಟನ್ ಕಂಪನಿಗೆ 5 ಎಕರೆ ಜಾಗವನ್ನು 10 ವರ್ಷಗಳ ಕಾಲ ಲೀಸ್​​ಗೆ ನೀಡಿದ್ದರು.


ಬಳಿಕ 1941ರಲ್ಲಿ ಸಿದ್ದಲಿಂಗಪ್ಪ ಬುಳ್ಳಾ ಅನ್ನೋರು ಇಂಡಿಯನ್ ಕಾಟನ್ ಕಂಪನಿಯಿಂದ ಲೀಸ್ ಹೋಲ್ಡ್ ರೈಟ್ಸ್ ಖರೀದಿಸಿದ್ದರು. ಅದಾದಮೇಲೆ 1964ರಲ್ಲಿ ಬುಳ್ಳಾರಿಂದ ಹೆಚ್. ಕೆ. ಪಾಟೀಲ್​​ರ ತಂದೆ ಕೆ. ಹೆಚ್. ಪಾಟೀಲರು ಆ ಪೈಕಿ 15 ಗುಂಟೆ ಜಾಗವನ್ನು ಸಬ್​​ಲೀಸ್​​ಗೆ ಪಡೆದಿದ್ದರು. ಬಳಿಕ ಲೀಸ್​​ಗೆ ಪಡೆದ ಜಾಗವನ್ನು ಬುಳ್ಳಾ ಕುಟುಂಬ ಮತ್ತು ಹೆಚ್. ಕೆ. ಪಾಟೀಲ್ ಕುಟುಂಬ ಬಿಟ್ಟುಕೊಡದ ಕಾರಣ ಸಹೋದರಿಯರು ಕೋರ್ಟ್​​ ಮೊರೆ ಹೋಗಿದ್ದರು.

2024ರಲ್ಲಿ ಸಾವಕ್ಕ ಮತ್ತು ಜಕ್ಕವ್ವ ಪರ ಸುಪ್ರೀಂಕೋರ್ಟ್​​ ಆದೇಶವಾಗಿತ್ತು. ಕೋರ್ಟ್​​ ತನ್ನ ಆದೇಶದಲ್ಲಿ ಮೂಲ ಬಾಡಿಗೆದಾರ ಬುಳ್ಳಾ ಜಾಗದ ಮಾಲೀಕರಲ್ಲಎಂದು ಹೇಳಿದ್ದ ಕಾರಣ, ಅವರ ಕುಟುಂಬ ಕಬ್ಜಾ ಮಾಡಿದ್ದ ಜಾಗವನ್ನು ಮಾಲಿಕರಿಗೆ ಬಿಟ್ಟುಕೊಟ್ಟಿತ್ತು. ಆದರೆ ಹೆಚ್. ಕೆ. ಪಾಟೀಲ್ ಕುಟುಂಬ ಮಾತ್ರ ಇದಕ್ಕೆ ತಕರಾರು ತೆಗೆದ ಕಾರಣ ಸಹೋದರಿಯರು ಮತ್ತೆ ಸುಪ್ರೀಂಕೋರ್ಟ್​​ ಮೆಟ್ಟಿಲೇರಿದ್ದರು.

ಇದೀಗ ಈ ಕಾನೂನು ಹೋರಾಟದಲ್ಲಿಯೂ ಸಾವಕ್ಕ ಮತ್ತು ಜಕ್ಕವ್ವ ಸಹೋದರಿಯರಿಗೆ ಜಯವಾಗಿದೆ. ಸುಪ್ರೀಂಕೋರ್ಟ್ ಆದೇಶದಿಂದ ಸಂತಸಗೊಂಡಿರುವ ಇವರು, 135 ವರ್ಷಗಳ ನಂತರ ನಮ್ಮ ಆಸ್ತಿ ನಮಗೆ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

 

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು