Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ನೀರಿನ ಮರು ಬಳಕೆ ನೀತಿ ಆಯೋಗದ ರಾಷ್ಟ್ರೀಯ ಕಾರ್ಯಾಗಾರ ಉದ್ಘಾಟಿಸಿದ ಶಿವಕುಮಾರ್

ನೀರಿನ ಮರು ಬಳಕೆ ನೀತಿ ಆಯೋಗದ ರಾಷ್ಟ್ರೀಯ ಕಾರ್ಯಾಗಾರ ಉದ್ಘಾಟಿಸಿದ ಶಿವಕುಮಾರ್
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೇಶದ ಪ್ರಮುಖ ನೀತಿ ನಿರೂಪಣಾ ಸಂಸ್ಥೆಯಾದ ನೀತಿ ಆಯೋಗವು
, ಕರ್ನಾಟಕ ಸರ್ಕಾರ ಹಾಗೂ ಬೆಂಗಳೂರು ಜಲಮಂಡಳಿ ಸಹಯೋಗದಲ್ಲಿ ಶುದ್ಧೀಕರಿಸಿದ ತ್ಯಾಜ್ಯ ನೀರಿನ ಮರುಬಳಕೆ' ಕುರಿತು ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರವನ್ನು ಆಯೋಜಿಸಿದೆ. ನವೆಂಬರ್ 6 ಮತ್ತು 7 ರಂದು ಈ ಎರಡು ದಿನಗಳ ಕಾರ್ಯಕ್ರಮ ನಡೆಯಲಿದ್ದು, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಕಾರ್ಯಾಗಾರಕ್ಕೆ ಚಾಲನೆ ನೀಡಲಿದ್ದಾರೆ.

ಈ ಮಹತ್ವದ ಕಾರ್ಯಾಗಾರದಲ್ಲಿ ದೇಶದ ವಿವಿಧ ರಾಜ್ಯಗಳ ಉನ್ನತ ಅಧಿಕಾರಿಗಳು, ಜಲ ತಜ್ಞರು ಮತ್ತು ಕೈಗಾರಿಕಾ ಮುಖಂಡರು ಭಾಗವಹಿಸಲಿದ್ದು, ಶುದ್ಧೀಕರಿಸಿದ ನೀರನ್ನು ಗರಿಷ್ಠ ಪ್ರಮಾಣದಲ್ಲಿ ಮರುಬಳಕೆ ಮಾಡಲು ರಾಷ್ಟ್ರೀಯ ಯೋಜನೆಯನ್ನು ರೂಪಿಸುವ ನಿಟ್ಟಿನಲ್ಲಿ ಚರ್ಚೆ ನಡೆಯಲಿದೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಬ್ರಾಂಡ್ ಬೆಂಗಳೂರು ಅಭಿಯಾನದ ಅಡಿಯಲ್ಲಿ ತ್ಯಾಜ್ಯ ನೀರಿನ ಸಮರ್ಪಕ ಬಳಕೆಗೆ ಒತ್ತು ನೀಡಲಾಗಿದೆ. ಈ ಮೂಲಕ ತ್ಯಾಜ್ಯ ನೀರಿನ ಬಳಕೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಏಷ್ಯ ಖಂಡಕ್ಕೆ ಬೆಂಗಳೂರು ಜಲಮಂಡಳಿ ಮಾದರಿಯಾಗಿದೆ.

ಸಕ್ರ್ಯೂಲರ್ ವಾಟರ್ ಎಕಾಮನಿಯನ್ನು ಅಳವಡಿಸಿಕೊಂಡಿರುವ ಮಹಾನಗರಗಳ ಪೈಕಿ ಬೆಂಗಳೂರು ನಗರ ಮುಂಚೂಣಿಯಲ್ಲಿದೆ. ಬೆಂಗಳೂರು ನಗರದಲ್ಲಿ ಶೇಕಡಾ 90 ರಷ್ಟು ಒಳಚರಂಡಿ ಶುದ್ದೀಕರಣ ಸಾಮಥ್ರ್ಯವನ್ನು ಹೊಂದಿದ್ದು, 1,348 ಎಂ.ಎಲ್.ಡಿ ಯಷ್ಟು ನೀರನ್ನು ಶುದ್ದೀಕರಿಸಲಾಗುತ್ತಿದೆ. ಈ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಕೆರೆಗಳನ್ನು ತುಂಬಿಸಲಾಗುತ್ತಿದೆ. ಅಲ್ಲದೇ, ಪಾರ್ಕ್ ಮತ್ತು ಉದ್ಯಾನವಗಳ ನಿರ್ವಹಣೆ ಜೊತೆಯಲ್ಲಿಯೇ ಕೈಗಾರಿಕೆಗಳಿಗೂ ಪೂರೈಸಲಾಗುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದೂರದೃಷ್ಟಿಯ ಕಾರಣದಿಂದ ಬೆಂಗಳೂರು ತ್ಯಾಜ್ಯ ನೀರನ್ನು ಆಸ್ತಿಯನ್ನಾಗಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಶುದ್ಧೀಕರಿಸಿದ ನೀರು ತ್ಯಾಜ್ಯವಲ್ಲ, ಇದು ನಗರದ ಸುಸ್ಥಿರತೆಯನ್ನು ಬಲಪಡಿಸುವ ಸಂಪನ್ಮೂಲ ಎಂದು ನಮ್ಮ ನಗರದ ಯಶಸ್ಸು ಸಾಬೀತು ಪಡಿಸಿದೆ.

ನೀತಿ ಆಯೋಗದ ಕಾರ್ಯಾಗಾರಕ್ಕೆ ಆತಿಥ್ಯ ವಹಿಸುವುದು ಕರ್ನಾಟಕಕ್ಕೆ ಹೆಮ್ಮೆಯ ವಿಚಾರ. ತ್ಯಾಜ್ಯ ನೀರು ಶುದ್ದೀಕರಣದಲ್ಲಿ ನಮ್ಮ ಬೆಂಗಳೂರು ಪ್ರಗತಿಯನ್ನು ಪ್ರದರ್ಶಿಸಲು ಮತ್ತು ಅನುಭವಗಳನ್ನು ದೇಶದೊಂದಿಗೆ ಹಂಚಿಕೊಳ್ಳಲು ಇದೊಂದು ಉತ್ತಮ ಅವಕಾಶವಾಗಿದೆ.


ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಬ್ರಾಂಡ್ ಬೆಂಗಳೂರು ಅಭಿಯಾನದ ಅಡಿಯಲ್ಲಿ ಬೆಂಗಳೂರು ನಗರ ತ್ಯಾಜ್ಯ ನೀರು ನಿರ್ವಹಣೆಯಲ್ಲಿ ಕೈಗೊಂಡಿರುವಂತಹ ಯೋಜನೆಗಳನ್ನು ಪ್ರದರ್ಶಿಸಲು ಉತ್ತಮ ವೇದಿಕೆ ಇದಾಗಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ. ರಾಮ್‍ಪ್ರಸಾತ್ ಮನೋಹರ್ ಹೇಳಿದರು.

ಈ ವಿಧಾನದಿಂದ ಬೆಂಗಳೂರಿನಂತಹ ದೊಡ್ಡ ನಗರಗಳು ಕಾವೇರಿಯಂತಹ ಸಿಹಿನೀರಿನ ಮೂಲಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಿ, ಭವಿಷ್ಯದ ಬೆಳವಣಿಗೆಗೆ ನೆರವಾಗಲು ಸಾಧ್ಯ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಜಲ-ಸುಭದ್ರ ಭಾರತಕ್ಕಾಗಿ ಮಾರ್ಗಸೂಚಿ:
ಮರುಬಳಕೆಯ ರಾಷ್ಟ್ರೀಯ ಯೋಜನೆಯನ್ನು ರೂಪಿಸಲು ಕಾರ್ಯಾಗಾರದಲ್ಲಿ ಈ ಮೂರು ಮುಖ್ಯ ವಿಷಯಗಳ ಮೇಲೆ ಗಮನ ಹರಿಸಲಾಗುತ್ತದೆ:

1.ನೀತಿ ನಿಯಮಗಳು (Policy Frameworks)
2.
ಹಣಕಾಸು ಮಾದರಿಗಳು (Financing Models)
3.
ನೂತನ ತಂತ್ರಜ್ಞಾನದ ಅಳವಡಿಕೆ (Technology Integration)

ಶುದ್ಧೀಕರಿಸಿದ ತ್ಯಾಜ್ಯ ನೀರಿನ ಮರುಬಳಕೆಯನ್ನು ಭಾರತದಾದ್ಯಂತ ಕಡ್ಡಾಯಗೊಳಿಸಲು ಒಂದು ಸಮಗ್ರ ರಾಷ್ಟ್ರೀಯ ಯೋಜನೆಯನ್ನು ರೂಪಿಸುವುದು ಈ ಕಾರ್ಯಾಗಾರದ ಮುಖ್ಯ ಗುರಿಯಾಗಿದೆ.

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು