Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ರಕರ್ತರ ಸಮ್ಮೇಳನ ಯಶಸ್ವಿ, ಅಭಿನಂದನೆ ಸಲ್ಲಿಸಿದ ಶಿವಾನಂದ ತಗಡೂರು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೀದರನಲ್ಲಿ ಎರಡು ದಿನಗಳ ಕಾಲ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಭಾಗಿಯಾಗಿ ಯಶಸ್ವಿಯಾಗಿಸಿದ್ದಕ್ಕೆ ತಮಗೆಲ್ಲರಿಗೂ ಧನ್ಯವಾದಗಳನ್ನು ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.
ರಾಜ್ಯ ಮಟ್ಟದ ಸಮ್ಮೇಳನ ಸಂಘಟಿಸುವುದು ಕಷ್ಟದ ಮತ್ತು ಸವಾಲಿನ ಕೆಲಸ. ಕಡಿಮೆ ಅವಧಿಯಲ್ಲಿ ಈ ಸವಾಲನ್ನು ಸಾಧ್ಯವಾಗಿಸಿದ
, ಬೀದರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ, ಮುಖ್ಯವಾಗಿ ಸ್ವಾಗತ ಸಮಿತಿ ಅಧ್ಯಕ್ಷರು ಮತ್ತು ಸಚಿವರಾದ ಈಶ್ವರ ಖಂಡ್ರೆ ಅವರ ಪೂರ್ಣ ಸಹಕಾರಕ್ಕೆ, ಈ ನಿಟ್ಟಿನಲ್ಲಿ ಹಗಲು ರಾತ್ರಿ ಶ್ರಮ ವಹಿಸಿದ ಜಿಲ್ಲಾಧ್ಯಕ್ಷ ಆನಂದ ದೇವಪ್ಪ ಅವರ ನೇತೃತ್ವದ ತಂಡಕ್ಕೆ ಎಷ್ಟು ಧನ್ಯವಾದ ಹೇಳಿದರೂ ಸಾಲದು.

ಜೊತೆಗೆ ಸಾಥ್ ನೀಡಿದ ಸಮಿತಿ ಸದಸ್ಯರಾದ ಅಪ್ಪರಾವ್ ಸೌದಿ, ಶಿವಕುಮಾರಸ್ವಾಮಿ ಸೇರಿದಂತೆ ಅವರ ನೇತೃತ್ವದ ತಂಡಕ್ಕೆ, ಉಪಸಮಿತಿಗಳ ಜವಾಬ್ದಾರಿ ಹೊತ್ತು ಕೆಲಸ ಮಾಡಿದ ತಂಡಗಳಿಗೆ, ಜಿಲ್ಲಾಡಳಿತದ ಸಹಕಾರಕ್ಕಾಗಿ ವಂದನೆಗಳು. ಪತ್ರಕರ್ತರ ಸಮ್ಮೇಳನವನ್ನ ಬೀದರ ನೆಲದ ಹಬ್ಬವಾಗಿಸಿದ, ಬೀದರ ಜಿಲ್ಲೆಯ ಸಮಸ್ತರಿಗೆ ಅಭಿನಂದನೆಗಳು.

ಬಸವನ ನಾಡಿನಲ್ಲಿ ಈ ಸಮ್ಮೇಳನ ವಿಭಿನ್ನವಾಗಿ ಆಯೋಜಿಸಲು ಮತ್ತು ಅರ್ಥಪೂರ್ಣವಾಗಿಸಲು ನಿರಂತರವಾಗಿ ನಮ್ಮ ಜೊತೆಯಲ್ಲಿ ಸದಾ ಸಾಥ್ ನೀಡಿದ ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಘಟಕಗಳು ಮತ್ತು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳು.

ಸಮ್ಮೇಳನ ಕಳೆಗಟ್ಟಲು ಸದಸ್ಯರೆಲ್ಲರೂ ಮುಖ್ಯ. ಈ ಸಮ್ಮೇಳನ ಸಲುವಾಗಿ ನಮ್ಮ ಪ್ರೀತಿಯ ಕರೆಗೆ ವಿಶ್ವಾಸವಿಟ್ಟು ಬೀದರಗೆ ಬಂದು ಎರಡೂ ದಿನಗಳು ನಮ್ಮೊಂದಿಗಿದ್ದ ನಿಮಗೆಲ್ಲರಿಗೂ ಧನ್ಯವಾದಗಳು.

ಸಮ್ಮೇಳನದಲ್ಲಿ ಏನಾದರೂ ಲೋಪದೋಷಗಳಾಗಿದ್ದರೆ ಅದರ ಹೊರೆಯನ್ನು ನಾವೇ ಹೊರುತ್ತೇವೆ. ಯಾವುದಾದರೂ ಕಾರಣಕ್ಕಾಗಿ ನೋವಾಗಿದ್ದರೆ, ಬೇಸರವಾಗಿದ್ದರೆ ಕ್ಷಮೆ ಇರಲಿ. ಸವಿನೆನಪುಗಳು ಮಾತ್ರವೇ ನಿಮ್ಮ ಹೃದಯದಲ್ಲಿರಲಿ.

ಮತ್ತೊಮ್ಮೆ ಬೀದರ ಜಿಲ್ಲೆಯವರಿಗೆ ಮತ್ತು ನಿಮಗೂ ಧನ್ಯವಾದಗಳು. ಪ್ರಶಸ್ತಿ ಪುರಸ್ಕೃತರೆಲ್ಲರಿಗೂ ಅಭಿನಂದನೆಗಳು.
-
ಶಿವಾನಂದ ತಗಡೂರು ರಾಜ್ಯಾಧ್ಯಕ್ಷರು, ಕೆಯುಡಬ್ಲ್ಯೂಜೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಿರಿಯೂರು ಉಪಚುನಾವಣೆ: ಶೋಕಿ ನಾಯಕರಿಗೆ ‘ತಕ್ಕ ಪಾಠ’ ಕಲಿಸಲು ಹಿರಿಯೂರು ಮತದಾರ ಸಜ್ಜು!ಲೋಹಿತ್‌ ಕುಮಾರ್ ಪಿ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ: ಅಭಿನಂದನೆಗಳ ಮಹಾಪೂರಫ್ಯಾಕ್ಟರಿಯಿಂದ ಹೊರಬರುತ್ತಿರುವ ದುರ್ವಾಸನೆ: ದೊಡ್ಡಬಳ್ಳಾಪುರದ ವರದನಹಳ್ಳಿ ಗ್ರಾಮಸ್ಥರು ಹೈರಾಣು!ಗ್ರಾಮ ಪಂಚಾಯಿತಿಯಲ್ಲಿ ರಾತ್ರಿ ವೇಳೆ ರಹಸ್ಯ ಕೆಲಸ: ಗ್ರಾಮಸ್ಥರಲ್ಲಿ ಹೆಚ್ಚಿದ ಕಳ್ಳ ವ್ಯವಹಾರದ ಸಂಶಯ!ಚಿತ್ರದುರ್ಗ ಸಖಿ ಒನ್ ಸ್ಟಾಪ್ ಸೆಂಟರ್: ಸೋಶಿಯಲ್ ವರ್ಕರ್ ಹುದ್ದೆಗೆ ಅರ್ಜಿ ಆಹ್ವಾನಹಿರಿಯೂರು ನಗರಸಭೆ: ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನಮೇ 17ರಂದು ಪೊಲೀಸ್ ಅಧಿಕಾರಿಗಳ ಸ್ನೇಹ ಸಮ್ಮೀಲನಹೊಸ ರೈಲ್ವೆ ಕಾಮಗಾರಿಗಳ ಪರಾಮರ್ಶೆ- ಸಚಿವ ವಿ. ಸೋಮಣ್ಣಇ-ಬಸ್, ಇ-ಟ್ರಾಕ್ ಮತ್ತು ಹಸಿರು ಸಾರಿಗೆ, ಸುಸ್ಥಿರ ಕೈಗಾರಿಕಾ ಭವಿಷ್ಯಕ್ಕೆ ಒತ್ತು:  ಕುಮಾರಸ್ವಾಮಿದೇಶದಲ್ಲಿ ಎಲೆಕ್ಟ್ರಿಕ್ ಬಸ್‌ಗಳ ಸಂಚಾರಕ್ಕೆ ಮತ್ತಷ್ಟು ವೇಗ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ