Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾದಕ ವ್ಯಸನದ ದಾಸ್ಯ ಅಪಾಯಕಾರಿ: ನ್ಯಾ.ಶ್ರೀಶೈಲ್‌ ಭೀಮಸೇನ್‌ ಬಾಗಡಿ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೇಶದ ಭವಿಷ್ಯವನ್ನು ಸದೃಢವಾಗಿಸುವ ಹೊಣೆಗಾರಿಕೆ ಹೊತ್ತ ಯುವಜನರು ಮಾದಕ ವ್ಯಸನದ ದಾಸ್ಯಕ್ಕೆ ಒಳಗಾಗಿ ತಮ್ಮ ಬದುಕನ್ನು ದುಸ್ತರವಾಗಿಸಿಕೊಳ್ಳುತ್ತಿರುವುದು ಅಪಾಯಕಾರಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ
, ಹಿರಿಯ ಸಿವಿಲ್‌ನ್ಯಾಯಾಧೀಶ ಶ್ರೀಶೈಲ್‌ಭೀಮಸೇನ್‌ಬಾಗಡಿ ಹೇಳಿದರು.

ಇಲ್ಲಿನ ಲಯನ್ಸ್‌ಕ್ಲಬ್‌ಆಫ್‌ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ನೇತೃತ್ವದಲ್ಲಿ ಬೆಂ.ಗ್ರಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ಆರ್.ಎಲ್.ಜಾಲಪ್ಪ ಪಾಲಿಟೆಕ್ನಿಕ್‌ಸಹಯೋಗದಲ್ಲಿ ಸೋಮವಾರ ನಡೆದ ಸ್ವಾಮಿ ವಿವೇಕಾನಂದರ ಜಯಂತ್ಯುತ್ಸವ ರಾಷ್ಟ್ರೀಯ ಯುವ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸ್ವಾಮಿ ವಿವೇಕಾನಂದರು ತಮ್ಮ ಪ್ರಖರ ಚಿಂತನೆಗಳಿಂದ ಈ ದೇಶದ ಯುವಜನರನ್ನು ಪ್ರಭಾವಿಸಿದ್ದಾರೆ. ದೇಶದಲ್ಲಿ ಶೇ.70ರಷ್ಟು ಜನಸಂಖ್ಯೆಯ ಯುವಜನರಿದ್ದಾರೆ. ಇದರಿಂದಾಗಿ ದೇಶ ಅತ್ಯಂತ ಸದೃಢವಾಗಿ ಮುನ್ನಡೆಯಲಿದೆ ಎಂಬ ಆಶಾಭಾವನೆ ಇದೆ. ಉತ್ಸಾಹ, ಸಾಧನೆಯ ಹಂಬಲ, ಸಮರ್ಪಣಾ ಮನೋಭಾವಗಳಿಂದ ನಾವು ಸಾಧನೆಯ ಹಾದಿಯಲ್ಲಿ ನಡೆಯುವ ಮಾರ್ಗಸೂಚಿ ನಮ್ಮ ಕಣ್ಣಮುಂದೆ ಇದೆ. ತಮ್ಮನ್ನು ತಾವು ಅರಿತುಕೊಳ್ಳುವ ಮೂಲಕ ಜಗತ್ತಿನ ಪರಮೋಚ್ಛ ಜ್ಞಾನವನ್ನು ತಮ್ಮದಾಗಿಸಿಕೊಳ್ಳಬಹುದು ಎಂಬ ಸಂದೇಶವನ್ನು ವಿವೇಕಾನಂದರು ಸಾರಿದರು ಎಂದು ತಿಳಿಸಿದರು.

ಹಿರಿಯ ಸಿವಿಲ್‌ನ್ಯಾಯಾಧೀಶರಾದ ಜೆಎಂಎಫ್‌ಸಿ ಕ್ರಾಂತಿ ಕಿರಣ್‌ಮಾತನಾಡಿ, ಮನುಷ್ಯ ಹುಟ್ಟಿನಿಂದ ಸಾವಿನವರೆಗೂ ಕಾನೂನು ಕಟ್ಟಲೆಗಳ ಮಿತಿಯಲ್ಲೇ ತನ್ನ ಬದುಕನ್ನು ಕಟ್ಟಿಕೊಂಡಿರುತ್ತಾನೆ. ಹುಟ್ಟಿನ ಮುನ್ನವೇ ಕಾನೂನುಗಳು ವ್ಯಕ್ತಿಯನ್ನು ಆವರಿಸಲಿದ್ದು, ಮರಣಾನಂತರವೂ ಪ್ರಾಮುಖ್ಯತೆಯನ್ನು ಪಡೆಯುತ್ತದೆ. ಹೀಗಾಗಿ ಸರಳ, ಸಹಜ ಕಾನೂನುಗಳ ಬಗ್ಗೆ ಅರಿವು ಅತ್ಯಗತ್ಯ. ವಿವಿಧ ಹಂತಗಳಲ್ಲಿ ಸುರಕ್ಷತೆ, ಜೀವನ ಭದ್ರತೆ ಹಾಗೂ ಭರವಸೆಯನ್ನು ನೀಡುವ ಕಾನೂನು ಜ್ಞಾನದ ಬಗ್ಗೆ ಯುವಜನತೆ ಅಗತ್ಯ ಅರಿವು ಹೊಂದಬೇಕು. ವಿವೇಕಾನಂದರ ಚಿಂತನೆ ಹಾಗೂ ಆಶಯಗಳನ್ನು ಸಾಕಾರಗೊಳಿಸಬೇಕು ಎಂದರು.

ಶ್ರೀ ದೇವರಾಜ ಅರಸ್‌ಎಜುಕೇಶನಲ್‌ಟ್ರಸ್ಟ್‌ನ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಸ್ವಾಮಿ ವಿವೇಕಾನಂದರ ಉದಾತ್ತ ಆಶಯಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಯುವಜನರು ಸನ್ಮಾರ್ಗದಲ್ಲಿ ಬದುಕು ಕಟ್ಟಿಕೊಳ್ಳುವ ಸಂಕಲ್ಪ ಮಾಡಬೇಕು. ದಾರಿ ತಪ್ಪುತ್ತಿರುವ ಯುವಜನರ ರೀತಿನೀತಿಗಳು ಬದಲಾಗಬೇಕು. ಅದಕ್ಕೆ ಸ್ವಾಮಿ ವಿವೇಕಾನಂದರ ತತ್ವಗಳು ಪೂರಕ ಎಂದು ಹೇಳಿದರು.

ಲಯನ್ಸ್‌ಕ್ಲಬ್‌ಆಫ್‌ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ಅಧ್ಯಕ್ಷ ಪ್ರೊ.ಕೆ.ಆರ್.ರವಿಕಿರಣ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ವಕೀಲರ ಸಂಘದ ಅಧ್ಯಕ್ಷ ಡಿ.ಎಂ.ರೇಣುಕಾಮೂರ್ತಿ, ಹಿರಿಯ ವಕೀಲ ಮಧುಸೂದನ್‌, ಕಾನೂನು ಸೇವಾ ಪ್ರಾಧಿಕಾರದ ಅರೆಕಾಲಿಕ ಸ್ವಯಂಸೇವಕ ಕೃಷ್ಣಪ್ರಸಾದ್, ಲಯನ್ಸ್‌ಜಿಎಂಟಿ ಸಂಯೋಜಕ ಎಂ.ಆರ್.ಶ್ರೀನಿವಾಸ್, ಪ್ರಾಂತೀಯ ಅಧ್ಯಕ್ಷ ಎಲ್.ಎನ್.ಪ್ರದೀಪ್‌ಕುಮಾರ್, ಮಾಜಿ ಅಧ್ಯಕ್ಷ ಡಾ.ಶ್ರೀನಿವಾಸರೆಡ್ಡಿ, ಉಪಾಧ್ಯಕ್ಷ ಬಾಬು ಸಾಬಿ ಮತ್ತಿತರರು ಹಾಜರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ