Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಮಾರ್ಟ್ ಮೀಟರ್ ಟೆಂಡರ್​​ ಹಗರಣ ಆರೋಪ ಬಿಜೆಪಿಗೆ ಹಿನ್ನೆಡೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸ್ಮಾರ್ಟ್ ಮೀಟರ್ ಟೆಂಡರ್​​ ಹಗರಣ ಆರೋಪ ಮಾಡಿದ್ದ ಬಿಜೆಪಿ ವಿಚಾರವಾಗಿ ಸಚಿವ ಕೆ.ಜೆ.ಜಾರ್ಜ್​​ಗೆ ಹೈಕೋರ್ಟ್ ನಲ್ಲಿ ರಿಲೀಫ್​​ ಸಿಕ್ಕಿದೆ.


ಸಚಿವ ಜಾರ್ಜ್ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಹೈಕೋರ್ಟ್​​ ರದ್ದುಪಡಿಸಿ ಆದೇಶಿಸಿದೆ.
ಬಿಜೆಪಿ ನಾಯಕರು ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಿ ನ್ಯಾ.ಎಂ.ಐ.ಅರುಣ್ ಅವರಿದ್ದ ಹೈಕೋರ್ಟ್ ಪೀಠ ಆದೇಶಿಸಿದೆ.
ಆ ಮೂಲಕ ಬೆಸ್ಕಾಂ ಅಧಿಕಾರಿಗಳಾದ ಗೌರವ್ ಗುಪ್ತಾ
, ಮಹಾಂತೇಶ ಬೀಳಗಿ, ಹೆಚ್.ಜೆ.ರಮೇಶ್ ವಿರುದ್ಧದ ಕೇಸ್ ಕೂಡ ರದ್ದಾಗಿದೆ.

ಬಿಜೆಪಿಗೆ ಹಿನ್ನಡೆ:
ಸ್ಮಾರ್ಟ್ ವಿದ್ಯುತ್ ಮೀಟರ್ ಖರೀದಿ ವಿಚಾರದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ಆರೋಪಿಸಿ ಇಂಧನ ಇಲಾಖೆ ವಿರುದ್ಧ ಸಮರ ಸಾರಲಾಗಿತ್ತು.


ಸ್ಮಾರ್ಟ್ ಮೀಟರ್ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ. ಇತರೆ ಕಂಪೆನಿಗಳನ್ನು ಕೈಬಿಟ್ಟು ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್​ಗೆ ಗುತ್ತಿಗೆ ನೀಡಲಾಗಿದೆ. ಈ ಕಂಪೆನಿಗಾಗಿ ಇತರೆ ಕಂಪೆನಿಗಳು ಟೆಂಡರ್​ನಲ್ಲಿ ಭಾಗವಹಿಸದಂತೆ ನೋಡಿಕೊಳ್ಳಲಾಗಿದೆ ಎಂದು ಬಿಜೆಪಿ ಆರೋಪಿಸಿತ್ತು.


ಬೇರೆ ರಾಜ್ಯಗಳಲ್ಲಿ 900 ರೂಪಾಯಿಗಳಿಗೆ ಸಿಗುವ ಸ್ಮಾರ್ಟ್ ಮೀಟರ್ ಅನ್ನು 5 ಸಾವಿರದಿಂದ 10 ಸಾವಿರ ರೂಪಾಯಿಗಳಿಗೆ ಗ್ರಾಹಕರಿಗೆ ನೀಡಲಾಗುತ್ತಿದೆ. ಹೀಗಾಗಿ ಇದೊಂದು ದೊಡ್ಡ ಹಗರಣ ಎಂದು ಆರೋಪಿಸಲಾಗಿತ್ತು.

ಸ್ಮಾರ್ಟ್ ಮೀಟರ್ ಟೆಂಡರ್ ಸುಮಾರ್ 10 ಸಾವಿರ ಕೋಟಿ ರೂಪಾಯಿ ಮೊತ್ತದ್ದಾಗಿರುವ ಕಾರಣ ಜಾಗತಿಕ ಟೆಂಡರ್ ಕರೆಯಬೇಕಿತ್ತು. ಆದರೆ ಕೇವಲ 354 ಕೋಟಿ ರೂ. ವ್ಯವಹಾರ ನಡೆಸುವ ರಾಜಶ್ರೀ ಎಲೆಕ್ಟ್ರಿಕಲ್ಸ್​​ಗೆ ಟೆಂಡರ್ ನೀಡಲಾಗಿದೆ.

10 ವರ್ಷಕ್ಕೆ 5296 ಕೋಟಿ ರೂಪಾಯಿಗೆ ನೀಡಲಾಗಿರುವ ಟೆಂಡರ್ ಅನ್ನು ಬೇಕೆಂದೇ 997 ಕೋಟಿ ರೂ. ಟೆಂಡರ್ ಎಂಬಂತೆ ಬಿಂಬಿಸಲಾಗಿದೆ. ಬೆಸ್ಕಾಂ ವ್ಯಾಪ್ತಿಗೆ ಮಾತ್ರ ಈ ಟೆಂಡರ್ ಅನ್ವಯವಾದರೂ ಇತರೆ ಎಸ್ಕಾಂಗಳಿಗೂ ಇದೇ ಸ್ಮಾರ್ಟ್ ಮೀಟರ್ ಖರೀದಿಸಿರುವಂತೆ ಸೂಚಿಸಲಾಗಿದೆ.


ಇದು ಸಂಪೂರ್ಣ ಕಾನೂನು ಬಾಹಿರ. ಕೇಂದ್ರದ ಆರ್‌ಡಿಎಸ್‌ಎಸ್‌ಯೋಜನೆಯಡಿ 900 ರೂ.ಗೆ ಸಿಗುವ ಮೀಟರ್ ಅನ್ನು 5 ಸಾವಿರದಿಂದ 8,800 ರೂಪಾಯಿಗಳಿಗೆ ಗ್ರಾಹಕರು ಖರೀದಿಸಬೇಕಾಗಿದೆ. ಇದಕ್ಕೆಲ್ಲಾ ಬೆಸ್ಕಾಂ ಅಧ್ಯಕ್ಷ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಹಾಗೂ ಇತರೆ ಅಧಿಕಾರಿಗಳೇ ಹೊಣೆ ಎಂದು ಬಿಜೆಪಿ ಆರೋಪ ಮಾಡಿತ್ತು. ಆದರೆ, ಬಿಜೆಪಿ ನಾಯಕರು ದಾಖಲಿಸಿದ್ದ ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.

 

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ