Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳಾ ಸಾಹಿತಿಗಳ ಸಾಮಾಜಿಕ ಕಾಳಜಿ ಅನನ್ಯ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಇಲ್ಲಿನ ಶ್ರೀ ದೇವರಾಜ್‌ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಕನ್ನಡ ವಿಭಾಗ
, ಮಹಿಆ ಕೋಶ ಹಾಗೂ ಲಯನ್ಸ್‌ ಕ್ಲಬ್‌ ಆಫ್‌ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ನ ಸಹಯೋಗದಲ್ಲಿ ಮಹಿಳಾ ಸಬಲೀಕರಣದ ಆಶಯದಲ್ಲಿ ಕನ್ನಡ ಸಾಹಿತ್ಯ ಮತ್ತು ಮಹಿಳಾ ಸಾಹಿತಿಗಳ ಅವಲೋಕನ ಕುರಿತ ಉಪನ್ಯಾಸ ಕಾರ್ಯಕ್ರಮ ಬುಧವಾರ ನಡೆಯಿತು.

ವಿಷಯದ ಕುರಿತು ಮಾತನಾಡಿದ ತಾ.ಕಸಾಪ ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹದೇವ್‌, ಕನ್ನಡ ಸಾಹಿತ್ಯಕ್ಕೆ ಮಹಿಳಾ ಸಾಹಿತಿಗಳ ಕೊಡುಗೆ ಅನನ್ಯವಾಗಿದ್ದು, ಸಾಮಾಜಿಕ ಸಮಾನತೆಯ ದನಿಯಾಗಿ ಮಹಿಳಾ ಬರೆಹಗಾರರು ತಮ್ಮ ಅಸ್ತಿತ್ವವನ್ನು ಪ್ರತಿಪಾದಿಸಿದ್ದಾರೆ. ವಚನಕಾರ್ತಿ ಅಕ್ಕಮಹಾದೇವಿಯಿಂದ ಹಿಡಿದು ಇತ್ತೀಚಿನ ಮಹಿಳಾ ಸಾಹಿತಿಗಳವರೆಗೆ ಕನ್ನಡದಲ್ಲಿ ಬಹುದೊಡ್ಡ ಸ್ತ್ರೀ ಸಂವೇದನೆಯ ಸಾಹಿತ್ಯ ಪರಂಪರೆ ಇದೆ. ವಿವಿಧ ಕಾಲಘಟ್ಟಗಳಲ್ಲಿ ಈ ಬರೆಹಗಾರರು ಪ್ರತಿಪಾದಿಸಿರುವ ಮೌಲ್ಯಗಳು ಹಾಗೂ ಚಿಂತನ ಕ್ರಮ ಸಾಹಿತ್ಯದ ವಿದ್ಯಾರ್ಥಿಗಳಿಗೆ ದಾರಿದೀಪವಾಗಿದೆ ಎಂದು ತಿಳಿಸಿದರು.

ಮಹಿಳಾ ಸಬಲೀಕರಣದ ಆಶಯಗಳ ಕುರಿತು ಮಾತನಾಡಿದ ಲಯನ್ಸ್‌ ಜಿಲ್ಲೆ 317ರ ಎಫ್‌ಡಬ್ಲ್ಯೂಎಸ್‌ ಸಂಯೋಜಕರಾದ ಬಿ.ಎನ್.ದೇವತಾ, ವಿವಿಧ ಸ್ತರಗಳಲ್ಲಿ ಛಾಪು ಮೂಡಿಸಿರುವ ಆಧುನಿಕ ಕಾಲಘಟ್ಟ ಮಹಿಳೆಯ ಆಶೋತ್ತರಗಳು ಬದಲಾಗಿವೆ. ಸವಾಲು, ದೌರ್ಜನ್ಯ ಮತ್ತು ಶೋಷಣೆಗಳ ಬಗ್ಗೆ ಹೆಚ್ಚು ಕಾಳಜಿ ವಹಿಸಿ ಅವುಗಳಿಂದ ಮುಕ್ತವಾಗುವ ಚಿಂತನೆಗಳು ಇಂದಿನ ಅಗತ್ಯವಾಗಿದ್ದು, ಸಾಮಾಜಿಕ ಮಾಧ್ಯಮಗಳ ಬಗ್ಗೆ ಜಾಗರೂಕ ನಿಲುವು ಅತ್ಯಂತ ಅಗತ್ಯ. ಹಲವು ಸಾಮಾಜಿಕ ಸಮಸ್ಯೆಗಳಿಗೆ ತಾಂತ್ರಿಕತೆಯ ಬೆಳವಣಿಗೆಯ ಉಪಕ್ರಮಗಳೇ ಕಾರಣವಾಗಿವೆ ಎಂಬ ವಾದವಿದೆ. ತಾಂತ್ರಿಕತೆಯನ್ನು ಸದ್ಭಳಕೆ ಮಾಡಿಕೊಳ್ಳುವುದು ಅಗತ್ಯ ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ.ಆರ್.ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು. ಲಯನ್ಸ್‌ ಕ್ಲಬ್‌ ಆಫ್‌ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ ಅಧ್ಯಕ್ಷ ಪ್ರೊ.ಕೆ.ಆರ್.ರವಿಕಿರಣ್, ವಲಯ ಅಧ್ಯಕ್ಷ ಜೆ.ಆರ್.ರಾಕೇಶ್, ಪ್ರಾಂತೀಯ ಅಧ್ಯಕ್ಷ ಎಲ್.ಎನ್.ಪ್ರದೀಪ್‌ಕುಮಾರ್, ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ.ಎಂ.ಚಿಕ್ಕಣ್ಣ, ಉಪಪ್ರಾಂಶುಪಾಲ ಕೆ.ದಕ್ಷಿಣಾಮೂರ್ತಿ, ಲಯನ್ಸ್‌ ಕಾರ್ಯದರ್ಶಿ ಸುಮಾ ಪ್ರಸನ್ನ, ಖಜಾಂಚಿ ಕೆ.ಸಿ.ನಾಗರಾಜ್, ಮಹಿಳಾ ಕೋಶದ ಸಂಯೋಜಕಿ ಪಿ.ಚೈತ್ರ, ಎನ್.ದಿವ್ಯ, ವೆಂಕಟೇಶ್‌, ಬಾಬು ಸಾಬಿ, ಡಾ.ತಾವರೆನಾಯಕ್‌ ಮತ್ತಿತರರು ಉಪಸ್ಥಿತರಿದ್ದರು.

 

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ