Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳ ಜೊತೆ ಸೋಶಿಯಲ್ ಮೀಡಿಯಾ ನಂಟು: ದೊಡ್ಡಬಳ್ಳಾಪುರದಲ್ಲಿ ಯುವಕನ ಬಂಧನ

ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳ ಜೊತೆ ಸೋಶಿಯಲ್ ಮೀಡಿಯಾ ನಂಟು: ದೊಡ್ಡಬಳ್ಳಾಪುರದಲ್ಲಿ ಯುವಕನ ಬಂಧನ
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಸಾಮಾಜಿಕ ಜಾಲತಾಣಗಳ ಮೂಲಕ ಪಾಕಿಸ್ತಾನದ ಗ್ಯಾಂಗ್‌ಸ್ಟರ್‌ಗಳ ಜೊತೆ ಸಂಪರ್ಕ ಹೊಂದಿದ್ದ ಹಾಗೂ ಅವರ ವಿಡಿಯೋಗಳನ್ನು ಶೇರ್ ಮಾಡುತ್ತಿದ್ದ ಯುವಕನೊಬ್ಬನನ್ನು ದೊಡ್ಡಬಳ್ಳಾಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ ಇಸ್ಲಾಂಪುರ ನಿವಾಸಿ ಸೈಯದ್ ಅಬೂಬಕರ್ (25) ಬಂಧಿತ ಆರೋಪಿ.
ಕೌಂಟರ್ ಇಂಟಲಿಜೆನ್ಸ್ ಸೆಲ್ ಮತ್ತು ಸೆಂಟ್ರಲ್ ಐಬಿ (Central IB) ನೀಡಿದ ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

ಪ್ರಕರಣದ ಪ್ರಮುಖ ಅಂಶಗಳು: ಪಾಕ್ ಗ್ಯಾಂಗ್‌ಸ್ಟರ್‌ಗಳ ರೀಲ್ಸ್‌ಗೆ ಲೈಕ್ಸ್, ಸ್ಟೇಟಸ್: ಎಸಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ಸೈಯದ್ ಅಬೂಬಕರ್, 'sayedabudakar313' ಎಂಬ ಇನ್‌ಸ್ಟಾಗ್ರಾಂ ಖಾತೆ ಹೊಂದಿದ್ದ. ಈತ ಪಾಕಿಸ್ತಾನದ 'Hammadmemon 333' ಎಂಬ ಖಾತೆಯಿಂದ ಪೋಸ್ಟ್ ಆಗುತ್ತಿದ್ದ ಗ್ಯಾಂಗ್‌ಸ್ಟರ್‌ಗಳ ವಿಡಿಯೋ ರೀಲ್ಸ್‌ಗಳಿಗೆ ಲೈಕ್ ಮಾಡಿ, ಅವುಗಳನ್ನು ತನ್ನ ಖಾತೆಯಲ್ಲಿ ಸ್ಟೇಟಸ್ ಹಾಕಿಕೊಳ್ಳುತ್ತಿದ್ದ.

Advertisement

ಐಡಿ ಕಾರ್ಡ್ ಶೇರ್ & ಪಿಸ್ತೂಲ್ ಪ್ರೇಮ: ತನಿಖೆ ವೇಳೆ ಆರೋಪಿಯು ತನ್ನ ಗುರುತಿನ ಚೀಟಿಯನ್ನು (ID Card) ಪಾಕಿಸ್ತಾನದ ಇನ್‌ಸ್ಟಾಗ್ರಾಂ ಖಾತೆಯೊಂದಿಗೆ ಹಂಚಿಕೊಂಡಿರುವುದು ಪತ್ತೆಯಾಗಿದೆ. ಅಲ್ಲದೆ, ಈತನ ಮೊಬೈಲ್‌ನಲ್ಲಿ ಹಲವು ಪಿಸ್ತೂಲ್ ಹಾಗೂ ಬಂದೂಕುಗಳ ಫೋಟೋಗಳು ಪತ್ತೆಯಾಗಿದ್ದು, ಶಸ್ತ್ರಾಸ್ತ್ರಗಳ ಬಗ್ಗೆ ತೀವ್ರ ಆಸಕ್ತಿ ಹೊಂದಿರುವುದು ಕಂಡುಬಂದಿದೆ.

ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿ: ಆ.20ರಂದು ಬಾತ್ಮೀದಾರರ ಮಾಹಿತಿಯಂತೆ ಪೊಲೀಸರು ಈತನನ್ನು ವಿಚಾರಣೆಗೆ ಒಳಪಡಿಸಿದಾಗ ಸೂಕ್ತ ಉತ್ತರ ನೀಡದೆ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದ. ಆಗ ಆತನನ್ನು ವಶಕ್ಕೆ ಪಡೆದು ಮೊಬೈಲ್ ಪರಿಶೀಲಿಸಿದಾಗ ಪಾಕ್ ನಂಟಿನ ಸತ್ಯಾಂಶ ಹೊರಬಂದಿದೆ.

ದೇಶದ್ರೋಹದ ಕೃತ್ಯದ ಶಂಕೆ - ಬಿಎನ್‌ಎಸ್ ಅಡಿ ಕೇಸ್: 
ಆರೋಪಿಯು ಮುಂದಿನ ದಿನಗಳಲ್ಲಿ ದೇಶದ ವಿರುದ್ಧ ಯುವಕರನ್ನು ಎತ್ತಿಕಟ್ಟುವ ಹಾಗೂ ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ತರುವ ಕೃತ್ಯಗಳನ್ನು ನಡೆಸುವ ಸಾಧ್ಯತೆ ಇದೆ ಎಂಬ ಶಂಕೆಯ ಮೇಲೆ,

ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 113(3) ಹಾಗೂ 197(2) ಅಡಿಯಲ್ಲಿ ಪ್ರಕರಣ (ಎಫ್‌ಐಆರ್ ಸಂಖ್ಯೆ 90/2026) ದಾಖಲಿಸಿಕೊಳ್ಳಲಾಗಿದೆ. ಪ್ರಸ್ತುತ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ