Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ಪರಿಹರಿಸಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ಪರಿಹರಿಸಲು ಆಗ್ರಹಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ಬುಧವಾರ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲಗಳನ್ನು ನಿವಾರಿಸಲು ಆಗ್ರಹಿಸಿ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಪದವಿ ವಿದ್ಯಾರ್ಥಿಗಳು ಡಿ.ಸಿ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದರು.

ಎಐಡಿಎಸ್ಓ ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಬಿಳೂರು ಮಾತನಾಡಿ, "ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ.

ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ. ಸೆಪ್ಟೆಂಬರ್ ನಲ್ಲಿ ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆ ನಡೆಯಬೇಕಿದ್ದು ಪಾಠಗಳು ಇನ್ನೂ ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟಿನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನೆನೆಗುದಿಗೆ ಬಿದ್ದಿದೆ. ಖಾಸಗಿ ಕಾಲೇಜುಗಳಲ್ಲಿ ಪಾಠಗಳು ನಡೆಯುತ್ತಿದ್ದರೆ, ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಮಾತ್ರ ದಿನವೂ ಕಾಲೇಜಿಗೆ ಬಂದು ತರಗತಿಗಳು ನಡೆಯದೇ ಮನೆಗಳಿಗೆ ಹಿಂದಿರುಗುವಂತಾಗಿದೆ.


ಈ ಮೂಲಕ ಸರ್ಕಾರವು ಬಡವಿದ್ಯಾರ್ಥಿಗಳಿಗೆ ಅನ್ಯಾಯವೆಸಗುತ್ತಿದೆ. ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರಗಳನ್ನು ಪಾಲಿಸವುದು ಖಡ್ಡಾಯವಲ್ಲ ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು. ಇಂತಹ ಪರಿಸ್ಥಿತಿಯಲ್ಲಿ, ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತುರ್ತಾಗಿ ಕೈಗೊಂಡು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾ ಸಂಚಾಲಕ ಕೆ ಈರಣ್ಣ, ವಿದ್ಯಾರ್ಥಿಗಳು, ಗಜೇಂದ್ರ, ಮೌನೇಶ್, ಸ್ವಪ್ನ, ಸಾನಿಯಾ, ಭಾರ್ಗವಿ, ದ್ಯಾನೇಶ್ ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು