ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ತ್ಯಾಗರಾಜ ಬೀದಿಯಲ್ಲಿನ ವಾಸವಿ ಸ್ಕೂಲ್ ಮುಂಭಾಗವಿರುವ ಶಂಕರನಾರಾಯಣ ದೇವಸ್ಥಾನದ ಬಳಿ ಅಪರಿಚಿತನೋರ್ವ ವೃದ್ದೆಯ ಕತ್ತಿನಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ಹಾಡುಹಗಲೆ ಕಿತ್ತುಕೊಂಡು ಪರಾರಿಯಾಗಿದ್ದಾನೆ.
ಧರ್ಮಶಾಲಾ ರಸ್ತೆಯ ನಿವಾಸಿ ಅಹಲ್ಯಬಾಯಿ ಪ್ರತಿನಿತ್ಯದಂತೆ ಶನಿವಾರ ಶಂಕರನಾರಾಯಣ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿ ದೇವಸ್ಥಾನವನ್ನು ಪ್ರದಕ್ಷಿಣೆ ಹಾಕುತ್ತಿದ್ದ ಸಮಯವನ್ನು ಹೊಂಚು ಹಾಕಿ ಕಾಯುತ್ತಿದ್ದ ಅಪರಿಚಿತ ಮಾಂಗಲ್ಯ ಸರ ಎಗರಿಸಿಕೊಂಡು ಓಟ ಕಿತ್ತಿದ್ದಾನೆ. ಈ ಸಂಬಂಧ ನಗರ ಪೊಲೀಸ್ ಠಾಣೆ ಅಪರಾಧ ವಿಭಾಗದಲ್ಲಿ ದೂರು ದಾಖಲಾಗಿದೆ.




