Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉತ್ತಮ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳಿಗೆ, ನಿರಂತರ ಅಭ್ಯಾಸ, ಸಮಯ ನಿರ್ವಹಣೆ ಅವಶ್ಯಕ: ಸೌಮ್ಯ ಹರಳಪ್ಪ

Advertisement
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ :

ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಗೆ ಸಮಯದ ಪರಿಪಾಲನೆ, ನಿರಂತರ ಅಭ್ಯಾಸ, ಛಲ ಬಿಡದ ಪ್ರಯತ್ನ, ಓದುವ ಸಮಯದ ನಿಗಧಿ, ಕಲಿಕಾ ಕೊಠಡಿಯ ವಾತಾವರಣ, ಅಭ್ಯಾಸದ ವೇಳಾ ಪಟ್ಟಿಯ ಸಿದ್ಧತೆ & ಅದರ ಪಾಲನೆ ಎಲ್ಲವನ್ನು ಅವಲಂಬಿಸಿದ್ದು, ಅವುಗಳನ್ನು ಹೇಗೆ ನಿರ್ವಹಿಸಬೇಕು ಎಂಬುದನ್ನು ಶಿವಮೊಗ್ಗ ನಗರದ ರೋಟರಿ ಪೂರ್ವ ಆಂಗ್ಲ ಶಾಲೆಯಲ್ಲಿ ಇಂದು ನಡೆದ ಅಧ್ಯಯನ ಕೌಶಲ ಹಾಗೂ ಸಮಯ ನಿರ್ವಹಣೆಉಪನ್ಯಾಸ ಮಾಲಿಕೆಯಲ್ಲಿ ಮುಖ್ಯ ತರಬೇತುದಾರರಾಗಿ ಮಾತನಾಡಿದ ಜೆ.ಸಿ.ಐ. ವಲಯ ತರಬೇತುದಾರ ಸೌಮ್ಯ ಹರಳಪ್ಪ ಇವರು ಪ್ರತಿಪಾದಿಸಿದರು.

 ಇದೇ ಸಂದರ್ಭದಲ್ಲಿ ಮಾತನಾಡಿದ ಶರಾವತಿ ಜೆ.ಸಿ.ಐ.ನ ಅಧ್ಯಕ್ಷೆ ಸ್ವಪ್ನ ಸಂತೋಷ್ ಇವರು ವಿದ್ಯಾರ್ಥಿಗಳ ಪ್ರೌಢ ಶಿಕ್ಷಣವು ವ್ಯಕ್ತಿತ್ವ ನಿರ್ಮಾಣದ ಹಾಗೂ ಭವಿಷ್ಯದ ಜೀವನವನ್ನು ರೂಪಿಸುವ ಪ್ರಮುಖ ಘಟ್ಟವಾಗಿದ್ದು, ಈ ಹಂತದಲ್ಲಿ ವಿದ್ಯಾರ್ಥಿಗಳು ಸಮಯದ ಸರಿಯಾದ ನಿರ್ವಹಣೆ ಮಾಡುವುದರ ಜೊತೆಗೆ ಬೋಧಕರು ಹಾಗೂ ಪೋಷಕರ ಸಲಹೆ ಸೂಚನೆಯನ್ನು ಪಾಲಿಸಿದಾಗ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಬಹುದು ಎಂದರು.

 ಉಪನ್ಯಾಸ ಮಾಲಿಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ರೋಟರಿ ಶಿವಮೊಗ್ಗ ಪೂರ್ವ ಎಜುಕೇಷನಲ್ & ಛಾರಿಟನಲ್ ಟ್ರಸ್ಟ್ ಇದರ ಮ್ಯಾನೇಜಿಂಗ್ ಟ್ರಸ್ಟಿ ಚಂದ್ರಶೇಖರಯ್ಯ ಎಂ., ಇವರು ಮಾತನಾಡಿ ವಿದ್ಯಾರ್ಥಿಗಳು ಪರೀಕ್ಷೆ ಸಮೀಪಿಸಿದಾಗ ರಾತ್ರಿ ಇಡೀ ಓದಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುವ ಬದಲಾಗಿ ಶೈಕ್ಷಣಿಕ ವರ್ಷದ ಪ್ರಾರಂಭದಿಂದ ಅತಿಥಿ ಉಪನ್ಯಾಸಕರು ಸೂಚಿಸಿದಂತೆ ಅಭ್ಯಾಸದ ವೇಳಾಪಟ್ಟಿಯನ್ನು ರೂಪಿಸಿಕೊಂಡು ಅದರಂತೆ ಪ್ರತಿದಿನ ಓದಿ ಆಗಿಂದಾಗ್ಗೆ ಬರುವ ಕಿರು ಪರೀಕ್ಷೆ, ಘಟಕ ಪರೀಕ್ಷೆಗಳನ್ನು ಗಂಭೀರವಾಗಿ ತೆಗೆದುಕೊಂಡಾಗ ವರ್ಷದ ಕೊನೆಯಲ್ಲಿ ಲೀಲಾಜಾಲವಾಗಿ ಎದುರಿಸಬಹುದೆಂದರು.

 ಈ ಕಾರ್ಯಕ್ರಮದಲ್ಲಿ ಟ್ರಸ್ಟ್ನ ಉಪಾಧ್ಯಕ್ಷರಾದ ಡಾ.ಪರಮೇಶ್ವರ್ ಡಿ. ಶಿಗ್ಗಾಂವ್, ಕಾರ್ಯದರ್ಶಿ ರಾಮಚಂದ್ರ ಎಸ್.ಸಿ., ಖಜಾಂಚಿ ಜಿ. ವಿಜಯ್ ಕುಮಾರ್, ಪ್ರಾಂಶುಪಾಲ ಸೂರ್ಯನಾರಾಯಣ್ ಆರ್., ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ