Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಘೋಷಣೆ: ಅಕ್ಟೋಬರ್ 23ಕ್ಕೆ ಮತದಾನ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಒಬ್ಬ ಸದಸ್ಯನನ್ನು ಆಯ್ಕೆ ಮಾಡಲು ಚುನಾವಣೆ ಪ್ರಕ್ರಿಯೆ ಆರಂಭಗೊಂಡಿದ್ದು, ಅಧಿಕೃತ ಚುನಾವಣಾ ತಿಳಿವಳಿಕೆ ಪತ್ರ (ನಮೂನೆ-1) ಹೊರಡಿಸಲಾಗಿದೆ. 

ನಾಮಪತ್ರ ಸಲ್ಲಿಕೆ: ಉಮೇದುವಾರರು ಅಥವಾ ಅವರ ಸೂಚಕರು 2026 ನೇ ಅಕ್ಟೋಬರ್ 06 (ಮಂಗಳವಾರ) ರೊಳಗೆ (ಸರ್ಕಾರಿ ರಜಾ ದಿನ ಹೊರತುಪಡಿಸಿ) ಯಾವುದೇ ದಿನ ಬೆಳಿಗ್ಗೆ 11.00 ರಿಂದ ಮಧ್ಯಾಹ್ನ 3.00 ಗಂಟೆಯೊಳಗೆ, ಪ್ರಾದೇಶಿಕ ಆಯುಕ್ತರ ಕಛೇರಿ (ಬೆಂಗಳೂರು ವಿಭಾಗ, 2ನೇ ಮಹಡಿ, ಬಿ.ಎಂ.ಟಿ.ಸಿ. ಕಟ್ಟಡ, ಕೆ.ಹೆಚ್.ರಸ್ತೆ, ಶಾಂತಿನಗರ, ಬೆಂಗಳೂರು-560027) ಇಲ್ಲಿನ ಚುನಾವಣಾ ಅಧಿಕಾರಿಗಳಿಗೆ ಅಥವಾ ಸಹಾಯಕ ಚುನಾವಣಾಧಿಕಾರಿಯಾದ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಶ್ರೀ ಪ್ರಭು.ಜಿ. (ಭಾ.ಆ.ಸೇ.) ಇವರಿಂದ ನಾಮಪತ್ರಗಳನ್ನು ಪಡೆದುಕೊಂಡು, ಭರ್ತಿ ಮಾಡಿದ  ನಾಮಪತ್ರದ ನಮೂನೆಗಳನ್ನೂ ಸಲ್ಲಿಸಬಹುದು. 

Advertisement

ನಾಮಪತ್ರಗಳ ಪರಿಶೀಲನೆ: ಸ್ವೀಕೃತವಾದ ನಾಮಪತ್ರಗಳ ಪರಿಶೀಲನೆಯು 2026 ನೇ ಅಕ್ಟೋಬರ್ 07ರ (ಬುಧವಾರ)  ಬೆಳಿಗ್ಗೆ 11.00 ಗಂಟೆಗೆ ಮೇಲ್ಕಂಡ ಸ್ಥಳದಲ್ಲಿ ನಡೆಯಲಿದೆ. 

ಉಮೇದುವಾರಿಕೆ ಹಿಂತೆಗೆತ: ಸ್ಪರ್ಧೆಯಿಂದ ಹಿಂದೆ ಸರಿಯಲು ಬಯಸುವ ಅಭ್ಯರ್ಥಿಗಳು ಅಥವಾ ಅವರ ಸೂಚಕರು/ಅಧಿಕೃತ ಚುನಾವಣಾ ಏಜೆಂಟರು 2026 ನೇ ಅಕ್ಟೋಬರ್ 09 ರ (ಶುಕ್ರವಾರ) ಮಧ್ಯಾಹ್ನ 3.00 ಗಂಟೆಯ ಒಳಗಾಗಿ ತಿಳಿವಳಿಕೆ ಪತ್ರವನ್ನು ಸಲ್ಲಿಸಬೇಕಾಗಿರುತ್ತದೆ. 

ಮತದಾನ ದಿನಾಂಕ: ಚುನಾವಣೆಯಲ್ಲಿ ಸ್ಪರ್ಧೆ ಏರ್ಪಟ್ಟಲ್ಲಿ, 2026  ನೇ ಅಕ್ಟೋಬರ್ 23 ರ (ಶುಕ್ರವಾರ)  ಬೆಳಿಗ್ಗೆ 8.00 ಗಂಟೆಯಿಂದ ಸಂಜೆ 4.00 ಗಂಟೆಯವರೆಗೆ ಮತದಾನ ನಡೆಯಲಿದೆ‌ಎಂದು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ