Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಹ್ಯಾಕಾಶ ಸಾಧನೆಗಳು ಯುವಜನರಿಗೆ ಸ್ಫೂರ್ತಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
"2023 ರ ಆಗಸ್ಟ್ 23 ರಂದು ಭಾರತದ ಹೆಮ್ಮೆಯ ಚಂದ್ರಯಾನ -3 ರ ಮೂಲಕ ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದ ಮೇಲೆ ಯಶಸ್ವಿಯಾಗಿ ಇಳಿದಿತ್ತು. ಇದರ ಸ್ಮರಣೆಗಾಗಿ ಪ್ರತಿವರ್ಷವೂ ಆಗಸ್ಟ್ 23 ರಂದು "ರಾಷ್ಟ್ರೀಯ ಬಾಹ್ಯಾಕಾಶ ದಿನ" ಎಂದು ಆಚರಿಸುತ್ತಿದ್ದೇವೆ ಎಂದು ಇಸ್ರೋ ಹಿರಿಯ ವಿಜ್ಞಾನಿ ಹೆಚ್.ಎಲ್.ಶ್ರೀನಿವಾಸ್ ತಿಳಿಸಿದರು.


ಅವರು ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಹಾಗೂ ಭೌತಶಾಸ್ತ್ರ ವಿಭಾಗ ಸರ್ಕಾರಿ ವಿಜ್ಞಾನ ಕಾಲೇಜು ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಬಾಹ್ಯಾಕಾಶ ದಿನ ಕಾರ್ಯಕ್ರಮದಲ್ಲಿ ಇಸ್ರೋ ಸಾಧನೆಗಳನ್ನು ಪ್ರಾತ್ಯಕ್ಷಿಕೆ ಮೂಲಕ ಉಪನ್ಯಾಸ ನೀಡುತ್ತಿದ್ದರು. ಅವರು ಮುಂದುವರೆದು ಮಾತನಾಡಿ, "ಬಾಹ್ಯಾಕಾಶ ಅನ್ವೇಷಣೆಯಲ್ಲಿ ಭಾರತದ ಮಹತ್ವದ ಸಾಧನೆಗಳನ್ನು ಗುರುತಿಸಿ ವಿಜ್ಞಾನಿಗಳನ್ನು ಗೌರವಿಸಲು ಸೂಕ್ತವಾದ ದಿನವಾಗಿದೆ.

ಈ ಮೂಲಕ ದೇಶದ ತಾಂತ್ರಿಕ ಸಾಮರ್ಥ್ಯಕ್ಕೆ ಬೆಳಕು ಚೆಲ್ಲಿ, ವಿದ್ಯಾರ್ಥಿಗಳಿಗೆ ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ವೃತ್ತಿಜೀವನ ಹೊಂದಲು, ಆಸಕ್ತಿ ಮೂಡಿಸಲಿದೆ. ಅದರೊಡನೆ ಜನಸಾಮಾನ್ಯರಲ್ಲಿ ಬಾಹ್ಯಾಕಾಶ ಅನ್ವೇಷಣೆಗಳಿಂದ ದೊರೆಯುವ ಹತ್ತು ಹಲವಾರು ಪ್ರಯೋಜನಗಳ ಕುರಿತು ಅರಿವು ಮೂಡಿಸುವುದು ಈ ದಿನದ ಪ್ರಮುಖ ಉದ್ದೇಶ. ಇದು ಜನರಲ್ಲಿ ರಾಷ್ಟ್ರೀಯ ಹೆಮ್ಮೆ ಮತ್ತು ಐಕ್ಯತೆ, ವೈಜ್ಞಾನಿಕ ಚಿಂತನೆ, ವೈಜ್ಞಾನಿಕ ಮನೋಭಾವ ಬೆಳೆಸಲು ಸೂಕ್ತವಾಗಿದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಬಾಹ್ಯಾಕಾಶ ಕ್ಷೇತ್ರಕ್ಕೆ ಕೊಡುಗೆ ನೀಡಿ"ಎಂದು ತಿಳಿಸಿದರು.

ಆರ್ಥಿಕ ಚಿಂತಕ, ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಅಧ್ಯಕ್ಷ ಡಾ.ಜಿ. ಎನ್. ಮಲ್ಲಿಕಾರ್ಜುನಪ್ಪ  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಜ್ಞಾನದ ನಿರಂತರ ಅನ್ವೇಷಣೆ, ನಾವೀನ್ಯತೆ ಮತ್ತು ಸಾಮಾಜಿಕ ಕಾಳಜಿ ಇಲ್ಲದಿದ್ದರೆ, ನಾವು ಆದಿ ಮಾನವನ ಹಂತದಲ್ಲಿಯೇ ಕೊಳೆಯಬೇಕಾಗಿತ್ತು. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ, ಭಾರತೀಯರು ನೋಬೆಲ್ ಪ್ರಶಸ್ತಿ ಪಡೆಯಲಾಗಿಲ್ಲ. ವಿಜ್ಞಾನ ಮತ್ತು ತಂತ್ರಜ್ಞಾನಗಳ ಅರಿವು ಕೇವಲ ಆರ್ಥಿಕ ಬದುಕಿಗೆ ಮೀಸಲಾಗದೆ, ಸಾಮಾಜಿಕ ಅಸಮತೋಲನವನ್ನು ತೊಡೆದು ಹಾಕಬೇಕು. ಪ್ರತಿಯೊಬ್ಬರೂ ವೈಜ್ಞಾನಿಕ ಮನೋಭಾವ ಮೈಗೂಡಿಸಿಕೊಂಡು ಬದುಕುವುದು ಒಳ್ಳೆಯದು ಎಂದು ತಿಳಿಸಿದರು.


ಸರ್ಕಾರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರೊ.ರವಿಕಾಂತ್ ಅಧ್ಯಕ್ಷತೆ ವಹಿಸಿದ್ದರು.
ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಉಪಾಧ್ಯಕ್ಷ ಚಳ್ಳಕೆರೆ ಯರ್ರಿಸ್ವಾಮಿ
, ನಿರ್ದೇಶಕ ಡಾ.ಈ.ರುದ್ರಮುನಿ, ಕೆ.ವಿ.ನಾಗಲಿಂಗರೆಡ್ಡಿ ಉಪಸ್ಥಿತರಿದ್ದರು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ವಿದ್ಯಾ ವಿಜ್ಞಾನಿಗಳನ್ನು ಪರಿಚಯ  ಮಾಡಿಕೊಟ್ಟರು.

ಸೈನ್ಸ್ ಫೌಂಡೇಶನ್ ಕಾರ್ಯದರ್ಶಿ ಎಚ್.ಎಸ್.ಟಿ.ಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಭೌತಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಡಾ.ಬೊಮ್ಮಲಿಂಗಯ್ಯ ವಂದಿಸಿದರು. ಕಾರ್ಯಕ್ರಮ ಸಂಚಾಲಕ ಹೆಚ್.ಮಂಜುನಾಥ್ ನಿರೂಪಿಸಿದರು. ಅಂತಿಮ ಬಿಎಸ್ಸಿ ವಿದ್ಯಾರ್ಥಿ ಕು.ಪಲ್ಲವಿ ಮತ್ತು ತಂಡದವರು ಪ್ರಾರ್ಥಿಸಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ