Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡ ನಾಡು ನುಡಿ ನೆಲ ಜಲ ಸಂಸ್ಕೃತಿ ಉಳಿಸಿ-ಹರೀಶ್ ಗೌಡ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕನ್ನಡ ನಾಡು ನುಡಿ ನೆಲ ಜಲ
  ಭಾಷೆ ಸಂಸ್ಕೃತಿ ಉಳಿಸಿ ಬೆಳೆಸುವ ಕೆಲಸವನ್ನು ಪ್ರತಿಯೊಬ್ಬ ಕನ್ನಡನಾಡಿನ  ಪ್ರಜೆಯು  ಮಾಡಬೇಕಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.

ನಗರದ  ಭಗತ್ ಸಿಂಗ್ ಮೈದಾನದಲ್ಲಿ   ಭುವನೇಶ್ವರಿ ಕನ್ನಡ ಸಂಘದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಅವರು ಮಾತನಾಡಿ ಕರ್ನಾಟಕವನ್ನು 1956 ರಲ್ಲಿ ಏಕೀಕರಣ ಗೋಳಿಸಿ ಕನ್ನಡ ನಾಡುನುಡಿ ಉಳಿಯಲು ಹಲವಾರು ಕನ್ನಡ ಹೋರಾಟಗಾರರು ಮಾರ್ಗದರ್ಶದ ಫಲವಾಗಿ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಕಾರಣ.

ನಾಡಿನ ರಾಜಧಾನಿಯಾದ ಬೆಂಗಳೂರಿನಲ್ಲಿ ದೇಶದ ಎಲ್ಲ ರಾಜ್ಯದ ಜನರು ಹಾಗೂ ದೇಶ ವಿದೇಶದ ಜನರು ಬಂದು ವಾಸವಾಗಿದ್ದಾರೆ. ನಾವು ಕನ್ನಡ ನಾಡಿನಲ್ಲಿ ಹುಟ್ಟಿ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕಿದೆ. ಕನ್ನಡ ಭಾಷೆಯನ್ನು ಭಾರತ ರಾಷ್ಟ್ರ ಭಾಷೆಯನ್ನಾಗಿ ಮಾಡುವುದು ಅತಿ ಅವಶ್ಯವಿದೆ ಹಾಗೂ ಎಲ್ಲ ಸಂಘಟನೆಗಳು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಮಾಡಬೇಕಿದೆ ಎಂದು ಹೇಳಿದರು.

 ಕನ್ನಡಪರ ಹಿರಿಯ ಹೋರಾಟಗಾರ ತ.ನ.ಪ್ರಭುದೇವ್ ಮಾತನಾಡಿಕನ್ನಡಿಗರ ಹೋರಾಟದ ಫಲವಾಗಿ ಕರ್ನಾಟಕ ಏಕೀಕರಣ ವಾಯಿತು. ಕರ್ನಾಟಕದಲ್ಲಿ ಕನ್ನಡ  ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ  ಅಗ್ರ ಸ್ಥಾನ ಇರಲೇಬೇಕು.  ಪ್ರತಿಯೊಬ್ಬ ಕನ್ನಡಿಗರಲ್ಲೂ  ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಹೊಂದಿರಬೇಕೆಂದು ಕರ್ನಾಟಕದಲ್ಲಿ  ಪ್ರತಿಯೊಬ್ಬ ಕನ್ನಡಿಗರೂ ಕನ್ನಡದ ರಾಯಭಾರಿಗಳಾಗಿ  ಕನ್ನಡದ ಕೆಲಸ ಮಾಡಬೇಕಾಗಿದೆ.  ಕನ್ನಡವನ್ನು  ಬಳಸುವ ಮೂಲಕ ಕನ್ನಡ ಉಳಿಸಿ, ಬೆಳೆಸಲು  ಮಾತ್ರ ಸಾಧ್ಯ ಎಂಬುದನ್ನು ಎಲ್ಲಾ ಕನ್ನಡಿಗರು ಅರಿಯಬೇಕಾಗಿದೆ.  ಕನ್ನಡ ನಾಡಿನ ಇತಿಹಾಸ, ಭಾಷೆ, ಸಾಹಿತ್ಯಸಂಸ್ಕೃತಿ, ಕಲೆಯ ಬಗ್ಗೆ ಅರಿವು ಮೂಡಿಸುವುದು ಕನ್ನಡಿಗರ ಆದ್ಯ ಕರ್ತವ್ಯವಾಗಿದೆ ಎಂದರು.

ಕಾರ್ಯಕ್ರಮದ ಅಂಗವಾಗಿ 5 ಕಿ.ಲೋ ಮೀಟರ್  ಮ್ಯಾರಥಾನ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಬಹುಮಾನ ವಿತರಣೆ ಮಾಡಲಾಯಿತು.

 ಕಾರ್ಯಕ್ರಮದಲ್ಲಿ ಕನ್ನಡ ಜಾಗೃತ ಭವನದ ಅಧ್ಯಕ್ಷ ಕೆ, ವೆಂಕಟೇಶ್. ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ  ಪ್ರಮೀಳಾ ಮಹಾದೇವ್,ಮುಖಂಡರಾದ ಕೆ.ಪಿ ಜಗನ್ನಾಥ್  ಮ್ಯಾರಥಾನ್ ಕ್ರೀಡಾಪಟುಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ